ಒಟ್ಟು 10 ಕಡೆಗಳಲ್ಲಿ , 6 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ಇದೆ ಇದೆ ಉಡುಪಿಪುರ ನಮ್ಮ ಪದುಮನಾಭನು ನೆಲೆಸಿರುವ ಮಂದಿರ ಪ. ಬಂದ ಆಯಾಸಗಳೊಂದು ಕಾಣಿಸದಿನ್ನು ಸಿಂಧು ತಡಿಯಲಿಪ್ಪ ಪಟ್ಟಣ ನೋಡೆ ಸುಂದರ ಗೋಪುರ ಅಂದವಾಗಿಹ ಬೀದಿ ಬಂದೆವೆ ಗುರು ಹಿರಿಯರ ಕೃಪೆಯಿಂದ 1 ಮೊದಲೆ ತೋರುವುದು ಶ್ರೀ ರಾಘವೇಂದ್ರ ಮಠ ಅದರ ಬದಿಯಲ್ಲೆ ಕೃಷ್ಣಪುರ ಮಠವು ಅದರೆದರಲ್ಲೆ ಶಿರೂರು ಶ್ರೀಗಳ ಮಠ ಎದುರೆ ಕಾಣುವುದೆ ಕನಕ ಮಂಟಪವು 2 ಕಿಂಡಿಯಲ್ಲಿ ನೋಡಿ ಪುಂಡರಿಕಾಕ್ಷನ ಕಂಡು ವಂದಿಸಿ ಮಹಾದ್ವಾರಕೆ ಬನ್ನಿ ಮಂಡೆ ಬಾಗಿಸಿ ಬನ್ನಿ ಮಹಾಪ್ರದಕ್ಷಿಣಿಗಾಗಿ ಕಂಡು ಸಾಗಿರಿ ಮುಂದೆ ಕಾಣೂರು ಮಠವ 3 ಎರಡನೆಯ ಬೀದಿಯಲಿ ಬಲದ ಮಹಾದ್ವಾರ ಗಿರಿಜೆಯರಸ ಚಂದ್ರೇಶ್ವರನ ಗುಡಿ ಎರಗಿ ಮುಂದ್ವರಿಯೆ ಎಡದಲ್ಲಿ ಸೋದೆಯ ಮಠ ಅ ದರ ಪಕ್ಕವೆ ಪುತ್ತಿಗೆ ಮಠ ನೋಡಿ 4 ಬರಬರುತ ಬೀದಿ ಎರಡು ಪಕ್ಕಗಳಲ್ಲಿ ಇರುವ ಅಂಗಡಿ ಸಾಲು ವ್ಯಾಸಾದಿ ಮಠಗಳ್ ನಿರರುತಿ ಕೋಣದಿ ಆದಮಾರು ಮಠ ಅ ದರ ಪಕ್ಕವೆ ಪೇಜಾವರ ಮಠವೆನ್ನಿ 5 ಮುಂದೆ ಒಂದೆರಡ್ಹೆಜ್ಜೆಯಿಂದ ಬರಲು ಅಲ್ಲಿ ಸುಂದರವಾದ ಪಲಿಮಾರು ಮಠ ಅಂದ ನೋಡುತ ಸಾಗಲರ್ಧ ಪ್ರಥಮ ಬೀದಿಯಿಂದ ಬಲಗಡೆ ತಿರುಗೆ ಅನಂತೇಶ್ವರ 6 ಚತುರ ಬೀದಿಯ ಮಧ್ಯೆ ರಾಜಿಸುತಿಹ ಗುಡಿ ಅತಿ ಉನ್ನತವಾದ ಗರುಡಸ್ಥಂಭ ಪ್ರಥಮ ಪ್ರದಕ್ಷಿಣೆ ದ್ವಾರ ದರ್ಶನಗಳು ಗತಿಸಿ ಪೋದುವು ನಮ್ಮ ಪಾಪರಾಶಿಗಳು 7 ನಡೆಯಿರಿ ನಡೆಯಿರಿ ಕೃಷ್ಣನ ಮಠದೆಡೆ ಬಡಿಯುತಲಿಹರು ನಗಾರಿಗಳು ತಡೆಯದೆ ತೆಗೆವರು ಮಹಾದ್ವಾರವೀಗಲೆ ಒಡೆಯ ಕೃಷ್ಣನ ನೋಡ ಬಲ್ಲಿರೆಲ್ಲ 8 ಬೆಳಗು ಝಾವದ ನಾಲ್ಕು ತಾಸಿನ ಭೇರಿಯು ಒಳಗೆ ಪೋಗಿರಿ ಎಂದು ಕೂಗುತಿದೆ ಬಲು ಬೇಗ ಸ್ನಾನ ಮಾಡುತ ಮಧ್ವಸರಸಿನೋಳ್ ಚಲುವ ಕೃಷ್ಣನ ನೋಡ ಬನ್ನಿರೆಲ್ಲ 9 ಮುನಿವರರೆದ್ದು ಸ್ನಾನವಗೈದು ಉಷಃಕಾಲ ಘನಪೂಜೆಗೈದು ಪೊಂಗಲು ದೋಸೆಯ ಮುನಿವರದಗೆ ನೈವೇದ್ಯವರ್ಪಿಸಿ ತಮ್ಮ ಮನದಣಿಸುತ್ತಲಾನಂದಿಪರು 10 ಬಾಲತೊಡಿಗೆಯನಿಟ್ಟ ಬಾಲರೂಪನ ನೋಡಿ ನೀಲಮೇಘಶ್ಯಾಮ ನಿರ್ಮಲಾತ್ಮ ಆಲಯದೆಡಬಲ ಗರುಡ ಮುಖ್ಯಪ್ರಾಣ ಓಲೈಸೆ ಗೋಪಾಲಕೃಷ್ಣವಿಠಲನ 11
--------------
ಅಂಬಾಬಾಯಿ
ಓಡಿ ಬಾರೋ ರಂಗಯ್ಯ ಓಡಿ ಬಾರೋ ಕೃಷ್ಣಯ್ಯ ಪ. ನೋಡಿ ನಿನ್ನ ಮುತ್ತನೀಡುವೆ ಹಾಡಿ ಜೋಗುಳವ ಪಾಡುವೆ ಅ.ಪ. ಮೊಸರು ಭಾಂಡ ಒಡೆದು ಬೆಣ್ಣೆ ಹಸುಳೆ ಮೆದ್ದು ಬಾಯೆಲ್ಲಾ ರಸಿಕಸಿಯಾಗಿರುವ ಮೈಗೆ ಬಿಸಿ ನೀರೆರೆವೆನೊ ರಂಗ 1 ಬಿಸಿ ದೋಸೆಯ ಕೊಡುವೆನೆ ಮೊಸರೋಗರವ ಉಣಿಸಿ ನಿನಗೆ ಹಸುರಂಗಿಯ ತೊಡಿಸುವೆ ಕೃಷ್ಣಾ 2 ಮುದ್ದು ಮುದ್ದಾದ ಪಾದ ಹೆಜ್ಜೆನಿಟ್ಟು ಬಾರೆಲೊ ಮುದ್ದೆ ಬೆಣ್ಣೆ ಹಣ್ಣು ಕೊಟ್ಟು ಮುದ್ರೆಯುಂಗುರವನಿಟ್ಟು ನೋಡುವೆ 3 ಅಣ್ಣ ಬಲರಾಮನೊಡನೆ ಚಿಣ್ಣ ಆಡಬಾರೆಲೊ ಚಿಣ್ಣಿಕೋಲು ಚಂಡು ಬುಗುರಿ ಚಿಣ್ಣ ಕೊಡುವೆನೋ ಕೃಷ್ಣಾ 4 ಶೃಂಗಾರವ ಮಾಡುವ ಶ್ರೀ ಶ್ರೀನಿವಾಸ ಬಾರೆಲೊ ಮುದ್ದು ಕಂಗಳಿಗೆ ಕಪ್ಪನ್ಹಚ್ಚಿ ರಂಗ ನಿನ್ನ ನೋಡುವೆದಣಿಯ5
--------------
ಸರಸ್ವತಿ ಬಾಯಿ
ಕಡೆಗೋಲ ತಾರೆನ್ನ ಚಿನ್ನವೆ ಮೊಸ ರೊಡೆದರೆ ಬೆಣ್ಣೆ ಬಾರದೊ ಮುದ್ದು ಕೃಷ್ಣಯ್ಯ ಪ. ಅಣ್ಣ ಬಲರಾಮನು ಚಿಣ್ಣರ ಸಹಿತಾಗಿ ಬೆಣ್ಣೆ ಹಣ್ಣನು ಮೆಲುವಿಯಂತೆ ಯನ್ನಣ್ಣನೆ ಸಣ್ಣವನಾಗಿ ಎನ್ನೊಡನಾಟವೆ ಕಣ್ಣಿಗೆ ಕಾಡಿಗೆ ಇಡುವೆ ಬಾ ರಂಗಯ್ಯ 1 ಹಸುರಂಗಿ ಕೊಡಿಸುವೆ ಹಸುಳೆ ಬಾ ಕಂದನೆ ಹೊಸಪರಿಯಾಭರಣಗಳನಿಡುವೆ ಹಸನಾದ ಹಸುವಿನ ತುಪ್ಪದ ದೋಸೆಯ ಹಸುಳೆ ನಿನಗಾರೋಗಣೆಗೆ ಹೊತ್ತಾಯಿತೊ 2 ಪಡೆದ ಜನನಿಯಲ್ಲೆ ಎನ್ನೊಡೆಯ ಶ್ರೀ ಶ್ರೀನಿವಾಸ ನಿನ್ನ ಕಡೆಹಾಯಿಸೊ ಕಡೆಗೋಲನಿತ್ತು ಎನ್ನ ಗೋಪಿ ಕಡುಮುದ್ದು ರಂಗನ ಬಿಡದೆತ್ತಿ ಮುದ್ದಿಸಿ ಸಡಗರದಿಂದಲಿ 3
--------------
ಸರಸ್ವತಿ ಬಾಯಿ
ವೆಂಕಟರಮಣ ವೇದಾಂತಕೋಟಿವಂದ್ಯ ಪತಿ ಏಳೆನ್ನುತ ಪ. ಪಂಕಜಮುಖಿ ಪದ್ಮಾವತಿ ಸರ್ವಾ- ಲಂಕಾರದ ನಿದ್ದೆ ಸಾಕೆನ್ನುತ ಅ.ಪ. ಮಂಗಲಚರಿತ ಭುಜಂಗಶಯನ ನಿ- ನ್ನಂಗದಾಯಾಸವ ಪರಿಹರಿಸಿ ಪೊಂಗಲಶದಿ ಉಷ್ಣೋದಕ ಗಂಧ ತೈಲಾ- ಮೂರ್ತಿ 1 ದಧಿಯ ಪೃಥುಕದಲಿ ಹದಗೈದು ಮಧುರದಿ ಮಧುಸೂದನ ನಿನ್ನ ಪದದ ಮುಂದೆ ಸದ್ ಹೃದಯರು ತಂದಿಹರು ಸಮರ್ಪಿಸೆ ಮದಜನಕ ನಿನ್ನ ಓಲೈಸುವರಯ್ಯ 2 ಸಣ್ಣಕ್ಕಿಯನು ದಿವ್ಯಾನ್ನ ಪಾಕವ ಮಾಡಿ ಚೆನ್ನಾದ ಗೋಕ್ಷೀರವನ್ನು ತಂದು ಉನ್ನತ ಮಹಿಮನೆ ಉಣ್ಣೆಂದು ಲಲಿತ ಸು- ವರ್ಣಪಾತ್ರೆಯೊಳು ತಂದಿಹರು ಶ್ರೀಹರಿಯೇ 3 ವಿಧವಿಧ ಷಡುರಸಭರಿತ ಮನೋಹರ ಸುಧೆಗೆಯಿಮ್ಮಡಿ ಮಧುರತ್ವದಲಿ ಮೃದುವಾದ ಉದ್ದಿನ ದೋಸೆಯ ಸವಿಯೆಂದು ಪದುಮನಾಭನೆ ನಿನ್ನ ಹಾರೈಸುವರಯ್ಯ 4 ಕದಳಿ ಉತ್ತಮ ಫಲಗಳ ತಂದು ರಕ್ಕಸವೈರಿಯೆ ನಿನ್ನ ಮುಂದೆ ಚೊಕ್ಕಟವಾಗಿಡೆ ಲೆಕ್ಕ ಲೇಖನಗಳ ವಾಸುದೇವ ನೀನೇಳಯ್ಯ5 ಸಾರಹೃದಯ ಗೌಡಸಾರಸ್ವತ ವಿಪ್ರ ಭೂರಿ ವೇದಾದಿ ಮಂತ್ರದ ಘೋಷದಿ ಶ್ರೀರಮಣನೆ ದಯೆದೋರೆಂದು ಕರ್ಪೂರ- ದಾರತಿಯನು ಪಿಡಿದಿಹರು ಶ್ರೀಹರಿಯೇ 6 ಭಾಗವತರು ಬಂದು ಬಾಗಿಲೊಳಗೆ ನಿಂದು ಭೋಗಿಶಯನ ಶರಣಾದೆನೆಂದು ಜಾಗರದಲಿ ಮದ್ದಳ ತಾಳರಭಸದಿ ರೇಗುಪ್ತಿರಾಗ ಸಂಗೀತ ಪಾಡುವರಯ್ಯ 7 ಕರುಣಾಸಾಗರ ನಿನ್ನ ಚರಣದ ಸೇವೆಯ ಕರುಣಿಸೆಂದೆನುತಾಶ್ರಿತ ಜನರು ಕರವ ಮುಗಿದು ಕಮಲಾಕ್ಷ ನಿನ್ನಯ ಪಾದ- ಸ್ಮರಣೆಗೈಯುತ ನೋಳ್ಪಾತುರದಿಂದ ಹರುಷದಿ 8 ನಾನಾ ಜನರು ಬಂದು ಕಾಣಿಕೆ ಕಪ್ಪವ ಶ್ರೀನಿವಾಸನೆ ನಿನ್ನ ಪದಕೆ ಒಪ್ಪಿ ದಾನವಾಂತಕ ನಿನ್ನ ದಯವೊಂದೆ ಸಾಕೆಂದು ಧ್ಯಾನಮಾಳ್ಪರು ದಯಮಾಡೆಂದು ಹರಿಯೇ 9 ನೀನೆ ಗತಿಯೆಂದು ನಿನ್ನ ನಂಬಿಹರು ಲ- ಕ್ಷ್ಮೀನಾರಾಯಣ ಪುರುಷೋತ್ತಮನೆ ಮಾನದಿ ಭಕ್ತರ ಸಲಹಯ್ಯ ಸಂತತ ಶ್ರೀನಿವಾಸನೆ ಬೇಗ ಏಳು ಶ್ರೀಹರಿಯೆ 10
--------------
ತುಪಾಕಿ ವೆಂಕಟರಮಣಾಚಾರ್ಯ
ಏನು ಕೌತಕ ಕೃಷ್ಣ ತಾನೆ ಕನಸಿನೊಳು |ಮಾನವರ ತೆರನಂತೆ ಮುರುಳಾಡಿಸಿದನೆನ್ನ ಪಹಿಂದೆ ಮಾಡಿದ ಪದವ ಒಂದು ಹೇಳೆಂದೆನುತ |ಮುಂದೆ ಅದರಂದವನು ಎಲ್ಲ ತಾಪೇಳ್ದ ||ಒಂದು ದೋಸೆಯ ತನಗೆ ತಂದುಕೊಡು ಎಂದೆನಲು |ತಿಂದ ಮೀಸಲಕೊಡೆನು ಎಂದು ಹೇಳಿದೆನು 1ಮೋಸಹೋದೆನು ನಾನು ದೋಸೆಯನು ಹರಿಗೆ-ಆ-ಪೋಶನವನಿಕ್ಕದೇ ಪೋಷಿಸಿದೆನು ||ಮಿಸಲಾದರು ಅಹುದು ದೋಷವಿಲ್ಲೆಂದೆನುತ |ಆಸುರದ ಮಾತುಗಳ ವಾಸಿತೋರಿಸಿದನು 2ಎಳೆಯ ಪ್ರಾಯದೊಳಿರುವ ಚೆಲುವೆಯೊರ್ವಳು ಬಂದು |ಹೊಳೆಯೊಳಗೆ ಈಸಾಡಿ ನಲಿವುದನು ನೋಡಿ ||ನಳಿನಮುಖಿಯನು ಮೇಲೆ ಕರೆಸಲಾ ಮೈಲಿಗೆಯ |ತೊಳಕೊಂಡು ಒಳಯಿಂಕೆ ಬಂದುದನು ಕಂಡೆ 3ಈ ರೀತಿ ಸಿರಿಸಹಿತ ವಾರಿಜಾಕ್ಷನು ಕೃಷ್ಣ |ತೋರಿದನು ಸ್ವಪ್ನ ಕಣ್ಣಾರೆ ನೋಡಿದೆನು ||ಹಾರಿಹೋಯಿತು ಕಷ್ಟ ಸೂರೆಗೊಂಡೆನು ಸಿರಿಯ |ಏರಿ ಬಂದುದು ಶುಭದ ವಾರಿಧಿಯು ಮುಂದೆ.................... 4ಈ ಮಹಾಮೂರ್ತಿಯನು ಜಾವಪರ್ಯಂತರದಿ |ಕಾಮಿಸಿಯೆ ನೋಡಿದೆನು ಸೌಮ್ಯನಸ್ಯದಲಿ ||ಆ ಮಹಾ ಹರಿಯು ಪರಧಾಮವನು ಕೈಕೊಂಡು |ಭೂಮಿಪತಿಯಾಗಿರ್ದ ಪುರಂದರವಿಠಲ........................... 5
--------------
ಪುರಂದರದಾಸರು
ಕಾಗೆ ಕಾಕಾ ಎನಲು ಹಕ್ಕಿ ಚಿಲಿಪಿಲಿ ಎನಲು |ಕೋಗಿಲೆಯು ಸ್ವರಗೈಯ್ಯಲು-ಕೃಷ್ಣ-|ನಾಗಸಂಪಿಗೆ ಅರಳಲು ಪಎದ್ದು ಮುಖ ತೊಳೆಯೇಳು ತಿದ್ದು ಕಸ್ತುರಿ ತಿಲಕ |ಮುದ್ದೆಬೆಣ್ಣೆಯ ನಿನಗೆ ನಾನು ಕೊಡುವೆ ||ಹೊದ್ದಿರುವ ಕತ್ತಲದು ಹರಿದು ಬೆಳಗಾಯಿತೊ |ನಿದ್ದೆ ತಿಳಿದೇಳಯ್ಯ ಕೃಷ್ಣ 1ಬಿಸಿಯ ದೋಸೆಯ ಹೊಯ್ದು ಮೊಸರುಗಡ್ಡೆಯ ತೆಗೆದು |ಹೊಸದಾದ ಹಸುವಿನೀ ತುಪ್ಪವನ್ನು ||ಹಸನಾದ ಕಲಸನ್ನ ಹೆಸರು ಬೇಳೆಯ ಹುಗ್ಗಿ |ಹಸುಳೆ ನಿನಗಾರೋಗಣೆಗೆ ಮಾಡುವೆ 2ಎಂದಿಲ್ಲದಾ ಹಟವನಿಂದೇಕೆ ಮಾಡುತಿಹೆ |ಕಂದರೊಳಗತಿ ನೀನು ಹಟಿಯಾದೆಯ ||ಇಂದುನೀನತ್ತರೇ ಎತ್ತಿಕೊಳ್ಳುವರಿಲ್ಲ |ಕಂದ ಅಳಬೇಡವೊ ಪುರಂದರವಿಠಲ 3
--------------
ಪುರಂದರದಾಸರು
ವೆಂಕಟರಮಣ ವೇದಾಂತಕೋಟಿವಂದ್ಯಶಂಕರಪ್ರಿಯಪತಿಏಳೆನ್ನುತಪ.ಪಂಕಜಮುಖಿಪದ್ಮಾವತಿ ಸರ್ವಾ-ಲಂಕಾರದ ನಿದ್ದೆ ಸಾಕೆನ್ನುತ ಅ.ಪ.ಮಂಗಲಚರಿತ ಭುಜಂಗಶಯನ ನಿ-ನ್ನಂಗದಾಯಾಸವ ಪರಿಹರಿಸಿಪೊಂಗಲಶದಿ ಉಷ್ಣೋದಕ ಗಂಧ ತೈಲಾ-ಭ್ಯಂಗಮಾಡುವರೇಳು ಶೃಂಗಾರದ ಮೂರ್ತಿ 1ದಧಿಯ ಪೃಥುಕದಲಿ ಹದಗೈದು ಮಧುರದಿಮಧುಸೂದನ ನಿನ್ನ ಪದದ ಮುಂದೆಸದ್ ಹೃದಯರು ತಂದಿಹರು ಸಮರ್ಪಿಸೆಮದಜನಕ ನಿನ್ನ ಓಲೈಸುವರಯ್ಯ 2ಸಣ್ಣಕ್ಕಿಯನು ದಿವ್ಯಾನ್ನ ಪಾಕವ ಮಾಡಿಚೆನ್ನಾದ ಗೋಕ್ಷೀರವನ್ನು ತಂದುಉನ್ನತ ಮಹಿಮನೆ ಉಣ್ಣೆಂದು ಲಲಿತ ಸು-ವರ್ಣಪಾತ್ರೆಯೊಳು ತಂದಿಹರು ಶ್ರೀಹರಿಯೇ 3ವಿಧವಿಧ ಷಡುರಸಭರಿತ ಮನೋಹರಸುಧೆಗೆಯಿಮ್ಮಡಿ ಮಧುರತ್ವದಲಿಮೃದುವಾದ ಉದ್ದಿನ ದೋಸೆಯ ಸವಿಯೆಂದುಪದುಮನಾಭನೆ ನಿನ್ನ ಹಾರೈಸುವರಯ್ಯ 4ಸಕ್ಕರೆಕದಳಿಉತ್ತಮ ಫಲಗಳ ತಂದುರಕ್ಕಸವೈರಿಯೆ ನಿನ್ನ ಮುಂದೆಚೊಕ್ಕಟವಾಗಿಡೆ ಲೆಕ್ಕ ಲೇಖನಗಳಒಕ್ಕಣಿಪರುವಾಸುದೇವನೀನೇಳಯ್ಯ5ಸಾರಹೃದಯ ಗೌಡಸಾರಸ್ವತವಿಪ್ರಭೂರಿವೇದಾದಿ ಮಂತ್ರದ ಘೋಷದಿಶ್ರೀರಮಣನೆ ದಯೆದೋರೆಂದು ಕರ್ಪೂರ-ದಾರತಿಯನು ಪಿಡಿದಿಹರು ಶ್ರೀಹರಿಯೇ 6ಭಾಗವತರು ಬಂದು ಬಾಗಿಲೊಳಗೆನಿಂದುಭೋಗಿಶಯನಶರಣಾದೆನೆಂದುಜಾಗರದಲಿ ಮದ್ದಳ ತಾಳರಭಸದಿರೇಗುಪ್ತಿರಾಗ ಸಂಗೀತ ಪಾಡುವರಯ್ಯ 7ಕರುಣಾಸಾಗರ ನಿನ್ನ ಚರಣದ ಸೇವೆಯಕರುಣಿಸೆಂದೆನುತಾಶ್ರಿತ ಜನರುಕರವಮುಗಿದು ಕಮಲಾಕ್ಷ ನಿನ್ನಯ ಪಾದ-ಸ್ಮರಣೆಗೈಯುತ ನೋಳ್ಪಾತುರದಿಂದ ಹರುಷದಿ 8ನಾನಾ ಜನರು ಬಂದುಕಾಣಿಕೆಕಪ್ಪವಶ್ರೀನಿವಾಸನೆ ನಿನ್ನ ಪದಕೆ ಒಪ್ಪಿದಾನವಾಂತಕ ನಿನ್ನ ದಯವೊಂದೆ ಸಾಕೆಂದುಧ್ಯಾನಮಾಳ್ಪರು ದಯಮಾಡೆಂದು ಹರಿಯೇ 9ನೀನೆ ಗತಿಯೆಂದು ನಿನ್ನ ನಂಬಿಹರು ಲ-ಕ್ಷ್ಮೀನಾರಾಯಣ ಪುರುಷೋತ್ತಮನೆಮಾನದಿ ಭಕ್ತರ ಸಲಹಯ್ಯ ಸಂತತಶ್ರೀನಿವಾಸನೆ ಬೇಗ ಏಳು ಶ್ರೀಹರಿಯೆ 10
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹಂಚಿನ ಇದಿರಲಿ ಹಲ್ಲನು ತೆಗೆಯಲುಮಿಂಚುವ ಕನ್ನಡಿಯಾದೀತೆ ? ಪ.ಮಿಂಚಿನ ಬೆಳಕಲಿ ದಾರಿಯ ನಡೆದರೆಮುಂಚುವ ಊರಿಗೆ ಮುಟ್ಟೀತೆ ? ಅಪಬಾಲರ ಭಾಷೆಯ ನಂಬಿ ನಡೆದರೆಶೀಲದ ಕೆಲಸಗಳಾದೀತೆ ?ಜೋಲುವ ಹೋತಿನ ಮೊಲೆಗಳ ಹಿಂಡಲುಹಾಲಿನ ಹನಿಯದು ಹೊರಟೀತೆ ?ಕಾಲುವೆ ಬಚ್ಚಲಕುಣಿ ನೀರಿಗೆ -ಘನಬಾಳೆಯ ತೋಟವು ಆದೀತೆ ?ಮೇಲುಬಣ್ಣಾದಾ ಆಲದ ಹಣ್ಣುನಾಲಿಗೆಸವಿಯನು ಕೊಟ್ಟೀತೆ ? 1ಭಾಷೆಯ ನುಡಿಗಳಿಗಾಸೆ ಮಾಡೆ ಮನದಾಸೆಯ ಕಾರ್ಯಗಳಾದೀತೆ ?ದೋಸೆಯ ಛಿದ್ರದಿ ಆರಿಸೆ ಕಾಳಿನರಾಶಿಯು ಹಸನವು ಆದೀತೆ ?ಕಾಸಿ ಕಬ್ಬಿಣವ ಗಟ್ಟಿ ಕೂಡಿಟ್ಟರೆಮಾಸದ ಮನೆ ಬದುಕಾದೀತೆ ?ಕಾಸಾರದೆದುರಿಗೆ ಹರಿಕಥೆ ಹೇಳ್ದರೆಸೋಸಿ ಕೇಳ್ದು ತಲೆದೂಗೀತೆ ? 2ಮಿಥ್ಯಾವಚನಿಯ ಮಾತನು ನಂಬಲುಹೊತ್ತಿಗೆ ಅದು ಬಂದೊದಗೀತೆ ?ಸತ್ತವನೆದುರಿಗೆ ಸುತ್ತಲು ಕುಳಿತುಅತ್ತರೆ ಆ ಹೆಣ ಕೇಳೀತೆ ?ನಿತ್ಯನಪುಂಸಕನೈದಲು ತರುಣಿಗೆಚಿತ್ತ ಸುಖವು ಸೂರಾದೀತೆ ?ಕುತ್ತಿಗೆಗೊಯ್ಕನ ಕಾಲು ಹಿಡಿದರೆಹತ್ಯದೊಳ್ಹೇಸಿಕೆಹುಟ್ಟೀತೆ ?3ಬೋರಗಲ್ಲಿನ ಮುಂದೆ ಬಡತನ ಹೇಳಲುಸಾರಸುಖಕ್ಕನುವಾದೀತೆ ?ಚೋರನು ಚಂದ್ರಗೆ ಕೈಮರೆ ಮಾಡಲುಚೌರ್ಯಕೆ ಕತ್ತಲು ಒದಗೀತೆ ?ನೀರಿಲ್ಲದ ಕೆರೆಯೊಳಗೆ ಮತ್ಸ್ಯದಾಹಾರಿಗೆ ಮೀನವು ದೊರಕೀತೆಕಾರಣವಿಲ್ಲದ ಲೌಕಿಕ ಕಥೆಯಿಂಘೋರನರಕ ಭಯ ತಪ್ಪೀತೆ ?4ಬೆಟ್ಟಕೆ ಕಲ್ಲನು ಹೊತ್ತೊಯ್ದೊಗೆಯಲುಹೊಟ್ಟೆಗೆಓದನ ಸಿಕ್ಕಿತೆ ?ಹುಟ್ಟು ಬಂಜೆಗೆ ಹಡೆಯುವ ವ್ಯಥೆ ಹೇಳಲುಹೊಟ್ಟೆಯಲಿ ಕಳವಳ ಹುಟ್ಟೀತೆ ?ಕೆಟ್ಟ ಬಯಸುವರಿಗೆ ಮೃಷ್ಟಾನ್ನವುಣಿಸಲುಕೆಟ್ಟ ಮಾತು ಅದು ಬಿಟ್ಟೀತೆ?ದಿಟ್ಟ ಪುರಂದರವಿಠಲರಾಯನಬಿಟ್ಟರೆ ಸದ್ಗತಿಯಾದೀತೆ? 5
--------------
ಪುರಂದರದಾಸರು
ಹಸಿವು ಬಹಳಾಗುತ್ತಿದೆ ಕೇಳಮ್ಮಯ್ಯಹಸನಾಗಿ ಉಣಬಡಿಸೇ ಪಬಿಸಿ ಬಿಸಿ ಕಡುಬು ಕಜ್ಜಾಯ ದೋಸೆಯು ಹುಗ್ಗಿಹಸನಾಗಿ ಬಡಿಸಮ್ಮ ಬಿಸಿ ಬಿಸಿಪರಮಾನ್ನಅ.ಪನೀರೊಳು ಮುಳುಗಿ ಬಂದೆ ಭಾರವ ಪೊತ್ತುಕೋರೆಲಿ ಧರಣಿ ತಂದೆಪೋರನೊಡನೆ ವೈರಿಯಾದ ದೈತ್ಯನ ಕರು-ಳ್ಹಾರವ ಮಾಡುತ್ತಭಾಳಬಳಲಿ ಬಂದೆ1ಪೊಡವಿ ದಾನವ ಬೇಡಿದೆ ರಾಜರ ಗೆದ್ದುಕೊಡಲಿ ಕಯ್ಯಲಿ ಪಿಡಿದೆಮಡದಿಯನರಸುತ ಅಡವಿಗಳ ಚರಿಸಿದೆಬಿಡದೆ ದೈತ್ಯರ ಸದೆ ಬಡಿದು ದಣಿದು ಬಂದೆ 2ವಿಷವನುಣಿಸಿದ ದೈತ್ಯಳ ಅಸುವನೆ ಹೀರಿಅಸುರ ಶಕಟನ ಸೀಳಿದೆವಸುದೇವ ಸುತನು ಈ ಅಸುರ ಮರ್ದನನಾಗಿಬಸುರೊಳು ಬ್ರಹ್ಮಾಂಡ ಧರಿಸಿದ ಕಾರಣ 3ಕಿಚ್ಚನುಂಗಿದ ಕಾರಣ ಹೊಟ್ಟೆಯ ಹಸಿವುಹೆಚ್ಚುತಲಿದೆ ನೋಡಮ್ಮಾಕಚ್ಚ ಬರುತಿಹ ಕಾಳಿ ಸರ್ಪನ ಹೆಡೆ ಮೇಲೆನರ್ತನ ಮಾಡುತಭಾಳಬಳಲಿ ಬಂದೆ4ಬತ್ತಲೆ ತಿರುಗಿ ಬಂದೆ ತೇಜಿಯನೇರಿಸುತ್ತಿದೆ ಧರಣಿಯನುಕರ್ತೃ ಶ್ರೀಹರಿಕಮಲನಾಭ ವಿಠ್ಠಲನಿಗೆತೃಪ್ತಿಯ ಪಡಿಸಮ್ಮ ಮುಕ್ತಿಪಥವನೀವೇ 5
--------------
ನಿಡಗುರುಕಿ ಜೀವೂಬಾಯಿ