ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುದಿನ ಮನದಲಿ ನೆನಿಯೋಮನುಜ ಪ ಮಂದರದರ ಗೋವಿಂದನ ಪಾದದ್ವಂದ್ವ ಯನಗೆ ಗತಿಯೆಂದು ಮುದದಿಂದನುದಿನ 1 ಮುರಹರ ಭವಸಾಗರ ದಾಟಿಸಿ ಶ್ರೀ ಗರುಡಾರೂಢನೆ ಕರುಣದಿ ಸಲಹೆಂದನುದಿನ 2 ಹರಿಸರ್ವೋತ್ತಮ ಕರುಣಾಕರ ರಮಾ- ವರ ಹೆನ್ನೆಪುರವರ ಹರಿ ಪೊರಿಯಂದನುದಿನ 3
--------------
ಹೆನ್ನೆರಂಗದಾಸರು
ಹರಿಯೆಂದು ಮನವೆ ನೀ ಸ್ಮರಿಸೋ ದೃಢದಿಂದ ಸ್ಮರಿಸಿದಾಕ್ಷಣ ಬಂದು ಒದಗುವ ಗೋವಿಂದ ಕರುಣದಿಂದಲಿ ನೋಡಿ ಹಿಂಗಿಸುವ ಭವಬಂಧ ಪರಮದಯಾನಿಧಿಯು ಶ್ರೀಹರಿ ಮುಕುಂದ 1 ಸ್ಮರಿಸಿದಾಕ್ಷಣ ಪುಣ್ಯಗತಿಗೈದಜಾಮಳ ಮರೆಯದೆ ಸ್ಮರಿಸಿದ ಧ್ರುವ ಯೈದಿದಢಳ ಹರಿಯೆಂದು ಪ್ರಹ್ಲಾದ ಪುಣ್ಯಗೈದ ಸಬಳ ಸ್ಮರಿಸಿದವರ ಕಾವ ಶ್ರೀಹರಿ ಗೋಪಾಲ 2 ಗಜ ಭಯ ಸ್ಮರಿಸಿದಾಕ್ಷಣ ಮೊರೆ ಇಟ್ಟು ದ್ರೌಪದಿಗಾಯಿದಭಿಮಾನ ಸ್ಮರಿಸಿದ ಪಾಂಡವರ ರಕ್ಷಿಸಿದ ಪ್ರಾಣ ಪರಮಭಕ್ತರ ಜೀವ ಶ್ರೀಹರಿ ನಾರಾಯಣ 3 ಹರಿನಾಮದಿಂದಾಯಿತು ಅಹಲ್ಯೋದ್ಧಾರಣ ಸ್ಮರಣೆ ಸಕಲವೆಲ್ಲ ತರಿಸಿತು ಪೂರ್ಣ ಸುರಮುನಿಜನರಿಗೆ ಇದೇ ನಿಜಭೂಷಣ ಪರಮ ವೈಷ್ಣವರಿಗೆ ಇದೇ ಜೀವ ಪ್ರಾಣ 4 ಹರಿಯೆಂದು ನೆನಿಯೋ ನೀ ಗುರು ಕೃಪೆಯಿಂದ ಸ್ಮರಿಸೊ ಮನವೆ ದೃಢಭಾವ ಭಕ್ತಿಯಿಂದ ನಿತ್ಯ ನಿಜಾನಂದ ತೋರುವ ಶ್ರೀಹರಿನಾಮ ಸುಖ ಸದಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು