ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲ ದೇವರ ಗಂಡ | ಕೃಷ್ಣ ಚಿಲ್ಲರೆ ದೈವರ ಮಿಂಡ ಪ ಪಾದದಿ ನದಿಯನು ಪೆತ್ತ | ಅದನು ರುದ್ರನು ಶಿರದಲಿ ಪೊತ್ತ ಮಾಧವನ್ಹೊಕ್ಕಳ ಜಾತ | ಶತ ಮೋದನು ಲೋಕ ಪ್ರಖ್ಯಾತ 1 ಸೃಷ್ಟಿ ಸಂಹಾರಗೈದ | ಪರ ಮೇಷ್ಟಿ ರುದ್ರರನಾಳ್ದ ಯೆಟ್ಟ ದೈತ್ಯರ ಶಿರ ಮುರಿದ | ದುರಿತ- ದೃಷ್ಟಿಸಿ ನಾಶಗೈದ 2 ಬಂಟರ ಪಾಲಕನೀತ | ವೈ- ಕುಂಠದ ಒಡೆಯನು ದಾತ ತುಂಟರ ಮಡಹುವ ಸತತ | ನಮಗೆ ನಂಟನು ಗೋಕುಲನಾಥ 3 ಮನಸಿಗೆ ಬಂದುದು ಸಿದ್ಧ | ಪ್ರತಿ ಯೆಣಿಸುವ ಜೀವನೆ ಬದ್ಧ ನೆನೆಸುವರಲಿ ತಾನಿದ್ದ | ದಯ ವನಧಿಯು ಬೆಣ್ಣೆಯ | ಕದ್ದ 4 ಭಂಗ | ತಾ ನಿರುತ ಮಾಡುವ ರಂಗ ಜಯೇಶವಿಠಲ ತುಂಗ | ಮಹಿ ಮಾ ರಕ್ಷಿಸು ದಯಾಪಾಂಗ
--------------
ಜಯೇಶವಿಠಲ
ಮುಖ್ಯಪ್ರಾಣನೀತಾ | ನಮಗೆ | ಮುಖ್ಯ ಪ್ರಾಣನೀತ ನಮಗೆ ಮೂಲ ಗುರುವಿತ ಸತತಾ | ಸೌಖ್ಯವನು ಕರುಣಿಸಿ ನಮ್ಮ ಸಖ್ಯನಾಗಿ ಪೊರೆವನೀತಾ ಪ ನಿಗಮವೇದ್ಯನೀತಾ ನಂಬಿಕೆಯನೀವ ಚರಣ | ದುರಿತ ರಾಗಗಳ ಕಳೆನೀತಾ | ವಿಗಡ ವಿಷವನುಂಡನೀತಾ | ಹಗಲ ವಲ್ಲಭನಲ್ಲಿ ಸಂಮೊಗದವನಾಗಿ | ಓದಿದನೀತಾ | ಅಗಣಿತಾದವಿದ್ಯನೀತಾ 1 ಜಗವ ಪಾಲಕನೀತಾ ಚತುರ | ಯುಗದಿ ಬಲುದಿಟ್ಟನೀತಾ | ಪೆಗಲಿಲಿ ಭೂಮಿ ಮಗಳ ಪತಿಯ | ಜಗಳದಲ್ಲಿ ಪೊತ್ತನೀತಾ | ಹಗೆಯ ದುಶ್ಶಾಸನ್ನ ವಡಲ ಬಗೆದು ಮುಂದೆ ಚತುರ | ಮೊಗದವನಾಗಿ ವಾನರ ಬಲವ | ನಗವ ತಂದೆತ್ತಿದವನೀತಾ 2 ವರ ವೃಕೋದರನೀತಾ ಸಕಲ ಸುರರೊಳು ಬಲು ಪ್ರಬಲನೀತಾ | ಪರಮ ಮಂಗಳ ಪದದಿ ಭವದ | ಶರಧಿ ಬತ್ತಿಪನೀತಾ | ಒಮ್ಮೆ ಸ್ಮರಿಸಿದಾಕ್ಷಣ ಬರುವನೀತಾ | ಮರುತಾವತಾರನೀತಾ ತನ್ನ | ಶರಣ ಜನರ ಪೊರೆವನೀತಾ 3 ಅಸಮ ಸಾಹಸನೀತಾ ಭಕ್ತರ ವಶವಾಗಿ ವೊಳಗಿಪ್ಪನೀತಾ | ನೋಡಿ ಪೊರೆವನೀತಾ | ಅಸುರ ಲಿಂಗಭಂಗವ ಮಾಡಿ | ಬೆಸನೆ ಮತವ ಕಟ್ಟುವನೀತಾ | ಹಸನಾದ ಮುನಿ ಈ ರಕ್ಕಸರೆದೆಯ ಶೂಲನೀತಾ 4 ಜ್ಞಾನ ಪೂರ್ಣನೀತಾ ಶ್ರೀಮದಾನಂದತೀರಥನೀತಾ | ದಾನ ಧರ್ಮ ಪ್ರೇರಕನೀತಾ | ಪ್ರಾಣನೀತಾ ನಾಶವಿಲ್ಲದೆ ನಾನಾ ಮಹಿಮನೀತಾ | ನಮಗೇನೇನು ಕೊಡುವನೀತಾ | ಗಾನವಿಲೋಲ ವಿಜಯವಿಠ್ಠಲ ಧ್ಯಾನ ಮಾಳ್ಪನೀತಾ 5
--------------
ವಿಜಯದಾಸ
ಶ್ರೀಮದನಂತನೀತಾ ಶ್ರೀಮದನಂತನೀತಾ | ಸೀಮರಹಿತಾ ಮಹಿಮನೀತಾ | ನಾಮ ನೆನೆಯೆ ಒಲಿದು ನಿಷ್ಕಾಮ ಫಲವ ನೀವಾನೀತ ಶ್ರೀಮದಾನಂತನೀತನು ಪ ಆದಿದೈವನೀತಾ ಜೀವಾದಿಗಳಿಗಭಯದಾನೀತಾ | ಶ್ರೀಧರಣಿ ದುರ್ಗಾರಮಣನಾದಾತನೊದಾನೀತಾ | ವೇದಪಾಲಕನೀತಾ ಸನಕಾದಿಗಳಿಗೆ ಪ್ರೀತಾನೀತಾ | ನಿತ್ಯ ಸಾಧುಗಳ ಕಾಯಿದನೀತಾ1 ಗಜವರದನೀತಾ ಗಂಗಜನ ಮನೋಭೀಷ್ಟನೀತಾ | ಗಜ ರಜಕ ಬಿಲ್ಲು ಮಲ್ಲರ ವ್ರಜನನಾಳಿದ ದಿಟ್ಟಿನೀತಾ | ತ್ರಿಜಗ ವಂದಿತಾನೀತಾ ಅಂಗಜನ ಪೆತ್ತ ಪ್ರೇಮನೀತಾ | ಪಂಕಜ ಬಾಂಧವನ ಭಾಸನೀತಾ2 ಕಪಟನಾಟಕನೀತಾ ಕರಡಿ ಕಪಿಗಳನಾಳಿದನೀತಾ | ಕಪಿಲಮುನಿಯಾಗಿ ತಾಯಿಗೆ ಉಪದೇಶವ ಪೇಳಿದನೀತಾ | ದ್ರುಪದಸುತೆಯ ಕಾಯದನೀತಾ ಸ್ವಪ್ನ ಸುಷುಪ್ತಿ ಜಾಗ್ರದಾವಸ್ಥೆಗೆ ಗುಪುತವ್ಯಾಪಕ ಗುಣನೀತಾ3 ಪರಮ ಪುರುಷನೀತಾ ದಶಶಿರನ ಕುಲವನಳಿದನೀತಾ | ಗಿರಿಯಲಿ ಧರಿಸಿ ಲೋಕವ ಪೊರೆವ ವಿಶ್ವಾಧಾರನೀತಾ | ಹರನ ವೈರಿಯ ಕೊಂದನೀತಾ | ನಿರುಪಮ ಮೂರುತಿನೀತಾ | ಸುರರಿಗೆ ಉಣಿಸಿದನೀತಾ | ತರಳ ಲೀಲೆಯ ತೋರಿದನೀತಾ4 ನಿತ್ಯ ಜಪತಪಾದಿಗೆ ನೇಮಪ್ರಕಾರ ಚೇಷ್ಟಕನೀತಾ | ಸಾಮ ಲೋಲ ವಿಜಯವಿಠ್ಠಲ ತಾಮರಸನಾಭನೀತಾ 5
--------------
ವಿಜಯದಾಸ