ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಜನಯನನ ಕಂಡೆ ಕಾಮನಯ್ಯನ ಪ. ಮಂಜುಗುಣಿಯೊಳಿಪ್ಪನ ತಿಮ್ಮಪ್ಪನಅ.ಪ ಪುಟ್ಟ ಪಾವುಗೆಯೊಳ್ಮೆಟ್ಟಿ ತೊಟ್ಟಂಬುಚಕ್ರವಕಟ್ಟಿದ ಕಠಾರಿಯಿಂದ ದುಷ್ಟರ ಹುಡಿಗುಟ್ಟುವ 1 ಚಕ್ರ ಶಂಖಧರನಾಗಿ ಕಕ್ಕಸರ ರಕ್ಕಸರಶಿಕ್ಷಿಸಿ ಶಕ್ರಮುಖ್ಯರ ಅಕ್ಕರಿಂದ ರಕ್ಷಿಸುವ 2 ಆಗಮವೈರಿಯನು ಕೊಂದಾಗ ಹಯವದನನ್ನಈಗ ಮಾನಿಸರಿಗೆ ಸೌಭಾಗ್ಯವೀವ ದೇವನ3
--------------
ವಾದಿರಾಜ
ಪಾಪಾತ್ಮನಾನಲ್ಲ ಪಾಪವೆನಗಿನಿತಿಲ್ಲ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ಪ ಅಂದು ಭೃಗುಮುನಿಯೆದೆಯಲೊದೆಯಲವನಿಗೆ ಪಾಪ ಬಂದುದೇ ಮೂದಲಿಸಿ ಬೈದವನಿಗಾ ದೋಷವು ನಿಂದುದೇ ಹಣೆಯೊಡೆಯಲೆಸೆದ ಭೀಷ್ಮಂಗಘವು ಹೊಂದೀತೆ ಪಾಂಡವರ್ಗೆ ಕುಂದು ಬಂದೀತೆ ದೇವಾ 1 ವರದನಾಕಾರದೊಳಗುಷ್ಣಜಲ ಮೃತ್ತಿಕೆಯ ತರಲು ಕೈಸುಡಲು ಹಣೆಯನು ಟೊಣದು ಬೈದೇ ಮರಳಿ ನಾಚಿಕೆಯಿಲ್ಲದೆ ಚರಣಕ್ಕೆ ಪಾವುಗೆಯ ನಿರಿಸಿದಪರಾಧ ನಿನ್ನದೋ ಯೆನ್ನದೋ ದೇವಾ 2 ಕುರುಡನಿಗೆ ದಾರಿಯನು ತೋರುವಾಪ್ತನು ಮುಳಿದು ಜರಿದು ನೂಕಿದೊಡಾತನೇನ ಮಾಡುವನೂ ಗುರಿಯನಿಡುವವನು ತಪ್ಪೆಸೆಯೆ ಸರಳಿನದೇನು ಅರಸಾಳಕೊಂದಡವನೇನು ಮಾಡುವನೂ 3 ಕುಣಿಸಿದಂತಾಡುವುದು ಬೊಂಬೆಯು ಸ್ವತಂತ್ರವದ ಕಿನಿತುಂಟೆ ಕಪಟನಾಟಕ ಸೂತ್ರಧಾರೀ ಎನಿತಾಡಿಸಿದೊಡಾಡುವೆನು ಪಾಪಪುಣ್ಯವೆಂ ಬೆಣಿಕೆಗಾನಲ್ಲ ನೀನಲ್ಲದೆಲೆ ದೇವಾ4 ತಂದೆ ತಾಯ್ಗಳು ತಮ್ಮ ಕಂದನನು ಸರ್ಪಮುಖ ದಿಂದ ಕಚ್ಚಿಸಲು ತರಳನಲಿ ತಪ್ಪೇನೂ ಮುಂದರಿಯದಜ್ಞಾನಿಯೆಂದು ನೀಕ್ಷಮಿಸಿಕೋ ತಂದೆ ವೈಕುಂಠ ವೇಲಾಪುರಾಧೀಶಾ 5
--------------
ಬೇಲೂರು ವೈಕುಂಠದಾಸರು