ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕನೀತಿಯ ಹಾಡುಗಳು ಆರು ಹಿತರಾದಾರು ಈ ವಿಶ್ವದೊಳಗೆ ಕೃತಿ ಹೊರತು ಪ ಪಿತನಲ್ಲ ಸುತನಲ್ಲ ರತಿಯಲ್ಲ ಸುತೆಯಲ್ಲ ಅತಿ ಪ್ರೀತಿಯಿಂ ಪೊರೆದ ನಿಜಮಾತೆಯಲ್ಲಾ ಸುತನಪೇಕ್ಷಿಸಿ ಹೆದರಿ ಅಜಮಿಳನು ಕರೆಯಲ್ಕೆ ಪತಿತ ಪಾವನ ಹರಿಯ ನಾಮ ಹಿತವಾಯ್ತು 1 ಧನವಲ್ಲ ಸಿರಿಯಲ್ಲ ಬಹು ಬೆಳೆದ ಮೈಯಲ್ಲ ಹಣ ರಾಶಿ ಗಳಿಸುವ ದುರ್ಬುದ್ಧಿಯಲ್ಲ ಮನ ಮತ್ಸರಗಳಲ್ಲ ಕಾಮಕ್ರೋಧಗಳಲ್ಲ ತನುವಲ್ಲ ಡಂಬರದ ವೇದಾಂತವಲ್ಲ2 ತರಳನಾಗಿಹ ಧೃವಗೆ ತರುಣ ಪ್ರಲ್ಹಾದನಿಗೆ ಕರಿರಾಜ ಹನುಮಾದಿ ನಿಜ ಭಕ್ತರಿಂಗೇ ವರಧರ್ಮ ಪುತ್ರನಿಗೆ ಮಧ್ಯ ಪಾಂಡವನಿಗೇ ಪರಮ ಪತಿವ್ರತಾ ರಮಣಿ ದ್ರೌಪದಿಗೇ 3 ಧರಣಿಯನು ಹೊತ್ತಿರುವ ಆದಿಶೇಷಗೆ ಮತ್ತೆ ನಿರುತವೂ ಭಜಿಸಿದ ಪರಮ ದಾಸರಿಗೆ ಸಿರಿಯರಸ ಶ್ರೀಹರಿಯ ಭಜನೆಯೊಂದುಳಿದು 4 ಜನ್ಮಬಂಧವ ನೀಗಿ ಪರಮ ಪದವಿಯ ಕೊಡುವ ಸನ್ನುತವು ನಿಜ ಸೌಖ್ಯವನ್ನು ಕರುಣಿಸುವ ಪ್ರಾಣಿಯಲಿ ಆತ್ಮನಲಿ ಶ್ರಧ್ಧೆ ಹುಟ್ಟಿಸುವಂಥ ಚನ್ನಕೇಶವ ಸ್ವಾಮಿ ಭಕ್ತಿಯೊಂದುಳಿದು 5
--------------
ಕರ್ಕಿ ಕೇಶವದಾಸ
ಶರಣು ಶಿರೀಶ ಹರೇ ಪ ಭುವನದಲಿ ಶೃತಿ-ಯಡಗೇ| ಯವಿಗಳಾಡಿಸದೇ| ಜವದಲಿ ಬಂದು ನೀ ತಮನನು ಕೊಂದೇ| ಕಾವೋದೋ ಎನ್ನಾ ಮತ್ಸ್ಯರೂಪಾ 1 ಸುರಸುರರು ಕೊಡಿ| ಶರಧಿಯ ಮಥಿಸುದಕಿ| ಕರುಣದಿ ಬೆನ್ನವನಿತ್ತೆ ನೀನಗತಿ| ಕಾವೋದು ಎನ್ನ ಕಮಠೆ ರೂಪಾ 2 ಹಿರಣ್ಯಾಕ್ಷನ ಕೊಂದು| ಧರೆಯನು ದಂತದಲೆ| ಧರಿಸಿದೆ ನೀ ಅನವರತಗಳಿಂದಲೇ| ಕಾವುದೋ ಎನ್ನ ವರಹಾ ರೂಪ 3 ಛಲದಿ ಪ್ರಹ್ಲಾದ ಕರಿಯೇ| ಕುಲಿಶ ಸಮುಗುರುದಲೆ| ಮೆಳೆತನ ಸೀಳಿದೆ ಕರಳ್ಳೊನಮಾಲೆ| ಕಾವುದೋ ಎನ್ನ|ನರಹರಿ ರೂಪ 4 ಚಂಡ ಬಲಿವವರದನೇ| ದಂಡ ಕಾಷ್ಟಕರನೇ| ಕುಂಡಲ ಸುಕಮಂಡಲ ಭೂಷಿತನೇ| ಕಾವುದೋ ಎನ್ನ ವಾಮನ ರೂಪ 5 ಸುಜನರ ಪ್ರತಿ-ಪಾಲಾ ರಾಜಾಕುಲಾಂತಕನೇ| ರಾಜಿಸುತಿಹ ವರ ಪರಶುಧರನೇ| ಕಾವುದೋ ಎನ್ನಾ ಭಾರ್ಗವರೂಪಾ6 ಋಷಿಯ ಮಖ ಕಾಯಿದು ಶಶಿಧರಧನು ಮುರಿದೇ| ದಶಮುಖ ಕುಂಭಕರ್ಣರ ಮರ್ದಿಸಿದೆ| ಕಾವುದೋ ಎನ್ನಾ ರಾಘವ ರೂಪ7 ಎಣೆಗಾಣದ ಮಡುವಿನಲಿ| ಫಣಿವರ ಫಣಿಮ್ಯಾಲ| ಕುಣಿದೆ ಆನಂದದಿ ಕೊಳಲನೂದುತ್ತಲೇ| ಕಾವುದೋ ಎನ್ನಾ ಯಾದವ ರೂಪ8 ಮೂರೆನಿಪ ಪುರದಲಿ| ನಾರೇಶ ದೃತವಳಿದೇ| ಭೂರಿ ಸಜ್ಜನ ಹೃದ್ವ ನಜ್ಜದೊಳಾಡಿದೇ| ಕಾವುದೋ ಎನ್ನಾ ಬೌದ್ದ ಸ್ವರೂಪಾ9 ಸಲಹಬೇಕೆಂದು ಜಗವಾ| ಇಳೆಯಾ ಭಾರರ ತರಿದೇ| ಸುಲಲಿತ ಕುದುರೆಯ ಏರಿ ಮೆರೆದೆ| ಕಾವಿದೋ ಎನ್ನ ಕಲ್ಕಿಸ್ವರೂಪ 10 ಸಹಕಾರಿ ಭಕ್ತರಿಗೇ| ಮಹಿಮೆ ದೋರಿದೆ ಹೀಗೆ| ಮಹಿಪತಿ ಸುತ ಪ್ರಭು ಸಲಹು ನೀಯೆನಗೆ| ಕಾವುದೋ ಎನ್ನಾ ಅನಂತರೂಪ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು