ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೊರೆಯಾಗಿ ನಾನಿಹೆನಮ್ಮ ಅಜಹರಿಹರರ್ಗಿಲ್ಲದೆ ಪದ ಸೇರಿತಮ್ಮ ಪ ಪರಿ ಪರಮಾನ್ನವಮ್ಮ 1 ಸಂಗರಹಿತ ಸತಿಯಮ್ಮ ಆಮಂಗಳವೆಂಬ ಘನಸುತರಮ್ಮಜಂಗಮವೇ ಜನವಮ್ಮ ಭೇದಂಗಳ ಪರಿದಿಹುದೇ ಅರಮನೆಯಮ್ಮ 2 ನಾದವೆಂಬುದ ವಾದ್ಯವಮ್ಮ ಸುನಾದವೆಂಬುದೇ ಗೀತಗಾಯಕರಮ್ಮಆದಿ ಬಂಧುವೇ ಮದವಮ್ಮ ತೇಜವಾದ ಚಿತ್ತವೇ ದೀವಟಿಗೆಮ್ಮ 3 ಜ್ಞಾನವೆಂಬುದೇ ಬಲವಮ್ಮ ಮಹದಾನಂದ ರಾಜ್ಯಕ್ಕೆ ಅಧಿಪತಿಯಮ್ಮತಾನೆ ಎಂಬುದೇ ಮುದ್ರೆಯಮ್ಮ ಇಂತುನ್ಯೂನವಿಲ್ಲದೆ ಸ್ಥಿರ ಸೇರಿದುದಮ್ಮ4 ಸುರವರರ್ಗಿನಿತುಂಟೆ ಅಮ್ಮಹಿರಿಯಾರಾರಾದರೇನು ದೊರಕದಮ್ಮಗುರುವಿನ ದಯದಿಂದಲಮ್ಮ ನಿಜಗುರು ಚಿದಾನಂದನೇ ತಾನಾದುದಮ್ಮ5
--------------
ಚಿದಾನಂದ ಅವಧೂತರು
ಬಯಲ ಜಾತ್ರೆಗೆ ನಡೆಹೋಗುವ ಬಾರದಲೆ ಅಲ್ಲಿರುವ ಪ ಶಾಂತಿ ಎಂದೆಂಬ ಕಂಟಲೆಗಳು ಶಮೆ ಹುರಿಗೆಜ್ಜೆ ಎತ್ತುಗಳುದಾಂತಿ ಎಂದೆಂಬ ಕಾವಡಿಗಳು ದಮೆ ಎಂಬ ಹೂಜೆಗಳು1 ಮಂಗಳವೆಂಬ ಬಾಲಕರು ಮುಕ್ತಿ ಎಂಬ ಮುತ್ತೈದೆಯರುಸಂಗ ಹರರಹ ವಿಟಗಾರರು ಸೈರಣೆ ಎಂಬ ಹಿರಿಯರು 2 ಸಂತೋಷವೆಂಬ ಅಂಗಡಿಗುಂಪು ಸಹಜದ ಹೂಕಂಪುಶಾಂತರೆನಿಪ ದೊರೆಗಳ ಗುಂಪು ಸುಖ ಛತ್ರಿಯ ತಂಪು 3 ಓಂಕಾರನಾದದ ನಗಾರಿ ವೀಣಾನಾದದ ತುತ್ತೂರಿಸಂಕಲ್ಪ ಸುಳ್ಳೆಂಬ ತಂಬೂರಿ ಸಾಮವೆನಿಸುವ ಭೇರಿ 4 ಅಮೃತ ಬಿಂದುವಿನ ಮೊಗೆಯುದಾರಿದಾರಿಗೆ ಸೋಹಂಸ್ಮರಣೆ ದೃಢ ಮನವದು ಚಡಿಯು 5 ಆನಂದ ವನಗಳ ಸಾರುತ ಆಯಾಸ ಕಳೆಯುತ್ತಸ್ವಾನಂದ ಗೋಪುರ ಕಾಣುತ ಸುಮ್ಮಾನವ ಪಡೆಯುತ6 ಮೃಢನಾಳ ದ್ವಾರವ ಪೋಗುತ ಮುಂದೆ ಚಂದ್ರನ ಕಾಣುತಅಡರಿದ್ವಿದಳ ಸದರೇರುತ ಅತ್ತತ್ತ ಸಾರುತ 7 ಕಮಲ ಪೀಠವನೇರುವರ ಮಹೇಶನೆನ್ನು ಅವರ8 ತುರೀಯವೆಂದೆಂಬ ಬಯಲಗೂಡಿ ತಾವು ಹೋಗುವ ನಾಡಿಹರ್ಷದ ಧೂಳ ದರ್ಶನ ಮಾಡಿ ಹಾಯಿಗುಡಾರ ಹೂಡಿ9 ಶಿಂಶುಮಾರವೇ ದೇವರ ಪೀಠ ಸಿದ್ಧವೆಂಬ ಕವಾಟಸಂಶಯವಿಲ್ಲದ ಎಡೆಯಾಟ ತತ್ಪುರುಷರ ಕೂಟ10 ಸೂರ್ಯ ಕೋಟಿಗೆ ಘನವುಒತ್ತೊತ್ತು ಪೂರ್ಣಾಭಿಷೇಕ ಓಂ ಎಂದೆಂಬ ಸ್ವರವು 11 ಸುವಾಸನೆ ಎಂದೆಂಬ ಧೂಪವು ಸುಂದರ ಪುಷ್ಪಗಂಧತಾವು ಮಾಡುವ ಭಾವದಲಿಂದ ತೃಪ್ತಿ ನೈವೇದ್ಯ ಚಂದ12 ಎರಡಿಲ್ಲದೇಕಾರ್ತಿ ಬೆಳಗುತ ಎಲ್ಲೆಡೆ ತಾ ಹೊಳೆಯುತಹೊರ ವೊಳಗೆಂಬುದ ಮರೆಯುತ ಹೇಮದ ತಗಡಾಗಿ ಇರುತ13 ಬೆಳಕ ಕಂಡಾರತಿ ಎತ್ತುತ ಬೆಳಗನು ಬೆಳಗುತ್ತತಿಳಿದು ಪ್ರದಕ್ಷಿಣೆ ಮಾಡುತ ತೋರುವುದು ಬ್ರಹ್ಮವದೆನ್ನುತ 14 ಭಯದ ವಿಸರ್ಜನೆ ಮಾಡುತ ಬಯಲಾಗಿಯೆ ತೋರುತಬಯಲ ಚಿದಾನಂದನಿಗೆರಗುತ್ತ ಬ್ರಹ್ಮನಾಗಿ ತಾನಿರುತ 15
--------------
ಚಿದಾನಂದ ಅವಧೂತರು