ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆ ಮನವಿತ್ತೆ ಲಲಿತಾಂಗಿ ಅಸ-ಮಾನ ಗೋವಳ ಕುಲವಿಲ್ಲದವನೊಳು ಪ ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ 1 ಮಗಳ ಮಗಗೆ ಮೈದುನನಾಗಿ ಮಾವನಜಗವರಿಯಲು ಕೊಂದ ಕುಲಗೇಡಿ ಗೋವಳ 2 ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದಚಿತ್ತ ಒಲಿದು ಚೆನ್ನ ಆದಿಕೇಶವನೊಳು 3
--------------
ಕನಕದಾಸ
ಮಾನಿನಿ ರನ್ನೆ ತಾನ್ಯಾಕೆ ಬಾರನುನೀನೆ ವಿಚಾರಿಸು ಇಬ್ಬರ ನ್ಯಾಯವ ಪ ಮಗಳಿಗೆ ಮಗಳಾದ ಮಗಳಿಗಳಿಯನಾದಮಗಳ ಗಂಡಗೆ ಭಾವ ಮಾವನಾದುದ ಕೇಳಿನಾ ನಿನ್ನ ಪಾದಕ್ಕೆ ಬಂದೆ ಶ್ರೀಹರಿಯೆ 1 ವೈರಿಗೆ ವೈರಿಯಾದೆ ವೈರಿಗೆ ಸುತನಾದೆವೈರಿ ಗಂಡಗೆ ತನ್ನ ಮಗಳ ಕೊಟ್ಟುದ ಕೇಳಿನಾ ನಿನ್ನ ಪಾದಕೆ ಬಂದೆ ಶ್ರೀಹರಿಯೆ 2 ಆನಿ ಬಿದ್ದರ ತನ್ನ ಗ್ಯಾನದಿಂದೇಳುವುದುಏನು ಮಾಡಿದರು ಅದರ ಭಾವ ಹಿಂಗದುಜ್ಞಾನವಂತ ಕಾಗಿನೆಲೆಯಾದಿಕೇಶವರಾಯ ಮುನಿದು ಪೋದನೆ 3
--------------
ಕನಕದಾಸ