ಒಟ್ಟು 4 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ಪ ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನಿಲ್ಲದ ಗೋವಿನ ತೆರನಂತೆ ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು 1 ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ ಚಿನ್ನವಾರಿಕೆಯನ್ನು ಮಾಡುವ ಪರಿಯು ನಗದ ಮನ ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ2 ಹೇಳಿದ ಮಾತನು ಕೇಳಿ ಮಾನಸದೊಳು ಮೇಳವಾಗುವೆನೆಂದು ಖೂಳತನದಿ ಪೋಗಿ ಕೇಳಿದ ಉತ್ತರಕುತ್ತರ ಹರಿಸದೆ ಆಳು ಬಾವಿಯ ಹಾರಿ ಹೊಳಚುವ ತೆರನಂತೆ 3 ಕಾಗೆಯು ಗರುಡನ ಸರಿಯೆಂದು ಜೂಜಾಡಿ ಸಾಗರವನು ಹಾರಿ ನಡುವೆ ಬಿದ್ದಂದದಿ ಯೋಗಿಯ ಪರಿಯಂತೆ ತಪವೆಂದು ತನ್ನಯ ಮೂಗ ಮುಚ್ಚಲು ಭವರೋಗ ಹಾರುವುದಂತೆ 4 ಮೀಸಲಿಗೊದಗುವ ಶೇಷಗಿರೀಶನ ಆಸೆಯಗ್ರಾಸವ ಬೇಡಿಕೊಳ್ಳದ ಮನ ಸಾಸಿರ ವೆಗಡದ ಭಾಂಡದೊಳೋಗರ ಬೇಯಿಸಿ ಭುಂಜಿಪೆಯೆಂದು ಮೋಸ ಮಾಡುವದಿಂದು 5 ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ ಪ್ರಸ್ತುತಕೊದಗುವದೆನುತಿಹ ರಾಯನ ಮುತ್ತಿಕೊಂಡಿಹ ಪರಸೇನೆಯ ಇದಿರೊಳು ಮೃತ್ಯುದೇವತೆ ಬಂದು ಮೂದಲಿಸುವಳೆಂದು6 ಮೊಸರನ್ನ ತನ್ನ ಕೈಯೊಳಗಿದ್ದಂತೆ ಹಸಿವಾದ ವೇಳ್ಯದಿ ಹಸಿಯ ಮೆಲ್ಲುವದೇಕೆ ಕುಶಲದಿ ನೆನೆಯಲು ಹಸನದಿ ಸಲುಹುವ 7
--------------
ವರಹತಿಮ್ಮಪ್ಪ
ರುದ್ರದೇವರು ಪರಿ ವೈರಾಗ್ಯವು ವೀರ ವೈಷ್ಣವ ಭಕ್ತಾಗ್ರಣಿಯೆ ಪ ಮಾರಹರನೆ ಮನ್ಮಥನ ವೈರಿಯೆ ಮನ- ಸಾರ ಶ್ರೀರಾಮ ನಾಮವ ಜಪಿಸುವದಿದು ಅ,ಪ ಮುತ್ತು ಮಾಣಿಕ್ಯದ ಕಿರೀಟವು ಧರಿಸದೆ ನೆತ್ತಿಲಿ ಕೆಂಜೆಡೆ ಸುತ್ತಿಹುದು ಹಸ್ತದಿ ಶಂಖು ಚಕ್ರಗದೆ ಪದುಮವು ಬಿಟ್ಟು ಉತ್ತಮ ಡಮರು ತ್ರಿಶೂಲ ಪಿಡಿವುದಿದು 1 ನೊಸಲಲಿ ಕಸ್ತೂರಿ ತಿಲಕವನಿಡದಲೆ ಭಸುಮವ ಲೇಪಿಸುವುದು ತರವೆ ಕುಸುಮಲೋಚನೆ ಪ್ರಿಯ ಸಖನಾಗಿರುತಿರೆ ಎಸೆವ ಕಪಾಲ ಪಿಡಿದು ಬೇಡುವದಿದು 2 ದುಂಡು ಮುತ್ತಿನ ಹಾರ ಪದಕಗಳಿರುತಿರೆ ರುಂಡಮಾಲೆಯ ಕೊರಳೊಳು ತರವೆ ತಂಡ ತಂಡ ಪರಮಾನ್ನ ಭಕ್ಷಗಳಿರೆ ಉಂಡು ತೇಗದೇ ವಿಷಪಾನ ಮಾಡುವದಿದು3 ಭರ್ಜರಿ ಪೀತಾಂಬರ ಉಡುವುದು ಬಿಟ್ಟು ಕರಿಯ ಚರ್ಮನುಡುವುದು ತರವೆ ಪರಿ ರತ್ನಾಭರಣಗಳಿರುತಿರೆ ಉರಗಗಳಿಂದಲಂಕೃತನಾಗಿರುವದು 4 ಭೃತ್ಯರು ಸೇವೆಗೆ ಬೇಕಾದವರಿರೆ ಮತ್ತೆ ಪಿಶಾಚ ಗಣಗಳೇತಕೆ ಹಸ್ತಿ ತುರಗ ಪಲ್ಲಕ್ಕಿ ಪುಷ್ಪಕವಿರೆ ಎತ್ತನೇರಿ ಚರಿಸುವುದುಚಿತವೆ ಶಂಭೊ 5 ಸಿರದಲಿ ಗಂಗೆಯು ಸ್ಥಿರವಾಗಿರುತಿರೆ ಪರ್ವತರಾಜಕುವರಿಯೇತಕೆ ಅರಮನೆ ವಾಸಕೆ ಯೋಗ್ಯವಾಗಿರುತಿರೆ ಗಿರಿ ಕೈಲಾಸ ಪರ್ವತದಿ ವಾಸಿಸುವದು 6 ಭಕ್ತರು ಭಕುತಿಲಿ ಪಾಡಿ ಕೊಂಡಾಡಲು ನೃತ್ಯವ ಮಾಡುತ ಹರುಷದಲಿ ಕರ್ತೃ ಶ್ರೀ ಕಮಲನಾಭ ವಿಠ್ಠಲನೆಂದು ಪತ್ನಿಗೆ ಉಪದೇಶ ಮಾಡುವದಿದು 7
--------------
ನಿಡಗುರುಕಿ ಜೀವೂಬಾಯಿ
ಸತ್ಸಂಗ ಮಾಡೊ ಮನವೆ ಚಿತ್ಸುಖ ನೋಡಲಿಕೆ ಅತಿಸೂಕ್ಷ್ಮಾನಂದ ಸುಪಥ ಅತಿಶಯಾನಂದ ಸದ್ಗತಿ ಸುಮೋಕ್ಷದಾಯಕ ಹಿತದೋರಿಕೊಡುವ ಸದ್ಗುರುನಾಥ ಧ್ರುವ ತೊಡಕಿ ಮಿಡುಕಬ್ಯಾಡ ಹಡಕಿ ವಿಷಯದೊಳು ಗಡಕವಾಗಿ ಕೆಡುಕ ಬುದ್ಧಿಯಿಂದ ಕೆಡುದೇನ ಬಡದ ಭವಣೆ ಬಟ್ಟು ತಾವು ಕೊಡುವರೇನ ಹಾಕಿ ವೈವಯಮನ ಬ್ಯಾಗೆ ಗುರುದಯಕರುಣ 1 ಸಿಲ್ಕಿಮಾಯ ಮಲ್ಕಿನೊಳು ಅಳ್ಕಿ ಆಲಪರಿಯಬ್ಯಾಡ ಬಲ್ಕಿ ಮಾಡಿಕೊಳ್ಳಿ ನೀ ಸುಜ್ಞಾನ ಕ್ಷುಲ್ಲಕ ಬುದ್ಧಿಗಾಗಿ ನಿನ್ನ ತನುವಿನೊಳಗೆ ಖೂನ ನುಲ್ಕಿ ಸುಟ್ಟ ಮಲ್ಕಿನಂತೆ ಜನಕಾಲಂಬ ತೋರಿ ನೀನು ಜಲಕಮಲದಂತಿರನುದಿನ ನಿಲ್ಕಿ ನೆಲೆಗೊಂಬುದಿದು ತಳಕು ತನ್ನೊಳಗದೆಯೆಂದು ನಾಲ್ಕುವೇದ ಸಾರುತಿದೆ ಪೂರ್ಣ2 ಮಾನವ ಜನ್ಮ ನಿರ್ತದಿಂದ ಅರ್ತು ಕೂಡಿ ಕರ್ತು ನಿಜಾನಂದ ಗುರುಬೋಧ ಥರಥರದಿ ತೋರಿ ಪೂರ್ಣ ಸಾರ್ಥಕ ಮಾಡುವದಿದು ತೀರ್ಥಪುಣ್ಯ ಸರ್ವಕ್ಷೇತ್ರವಾದ ಅರ್ಥಿಯಿಂದವಿಡಿದು ಗುರು ಪಡಿಯೊ ನಿನ್ನ ಸ್ವಹಿತದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು