ಒಟ್ಟು 6 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ಯಾಕೆ ದೇವಿ ಮುನಿಸು ಮಾತಾಡೇ| ನಿನ್ನ ಹಿಡಿದ ಛಲ ಗೆಲಿಸಿದ ಬಳಿಕ ಪ ಘನ ಮಳೆಗರವ ಜೀಮ್ಯೂತಮ್ಯಾಲೇ|ತಾ| ಮುನಿಪ ಕೋಪದಿ ಪೋಗುತಲಿಹ| ಮನ ದೊಳಗಿದ್ದ ಚಾತಕನಂತೆ ನಿನ್ನ ಮ್ಯಾಲೆ| ವನರುಹ ನೇತ್ರ ನಾ ಮುನಿದುದು ಕಾಣೆ 1 ಸಂಗತಿಲ್ಲದೆ ನಿನ್ನಾಂಗ ನಟ್ಟುಳಿಯಿಂದ| ಭಂಗ ಗೊಂಡಿಹುದು| ತುಂಗ ಪಯೋಧರೆನ್ನಂಗ ತೋಷಿಸುವ ತಾ| ಲಿಂಗನ ಗೈಯೆ ನೀ ಮಂಗಳವದನೇ 2 ನಿನ್ನಿಂದಾಗಲಿ ಮತ್ತ ನನ್ನಿಂದಾಗಲಿ ಇನ್ನು ಮುನ್ನಾದ ಮನದ ಗಂಟು ಬಿಟ್ಟು| ಪನ್ನಗವೇಣಿ ಮಾತಾಡೇ ಸದ್ಗುಣದ ಸಂ| ಪನ್ನೇ ಮಹಿಪತಿ ಸುತಗೊಲಿದ ಶ್ರೀದೇವಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗೌರೀದೇವಿ ಮಾತಾಡೇ ಎನ್ನ ಮೌನದ ಗೌರೀ ಯಾತಕಚಲಮನ ಸೋತವನೊಡನೆ ಮಾತಾಡೇ ಗೌರಿ ಮಾತಾಡೇ ಪ ನಸುನಗೆ ಮುಖವಿದು ಬಾಡಿ ಕೆಂದುಟಿಯು ಎಸೆದಿರಲು ನಾನೋಡಿ ವಸುಧೆಯೊಳಗೆ ನಾ ಜೀವಿಸಲಾರೆ ಘಸಘಸವ್ಯಾತಕೆ ತುಂಬಿತÀು ಅರಗಿಣಿ 1 ಕ್ಷಣ ಬಿಟ್ಟಿರಲಾರೆ ಅಮ್ಮ ಷಣ್ಮುಖ ಗಣಪರ ತಾಯೆ ನೀ ಬಾರೇ ವಸುಧೆಯೊಳಗೆ ನಾ ಜೀವಿಸಲಾರೆ ಘಸಘಸವ್ಯಾತಕೆ ತುಂಬಿತು ಅರಗಿಣಿ 2 ಕ್ರೋಧವ್ಯಾತಕೆ ಎನ್ನೊಳು ಗೌರೀ ಏನಪ- ರಾಧವು ಇದ್ದರು ತಾಳೇ ಪಾದ ಕಿಂಕಿಣಿಯೇ ಆದರಿಸುವೆ ನಾ ಆದರಿಸುವೆನೇ 3
--------------
ಶ್ರೀದವಿಠಲರು
ಸಿದ್ದಮಾಡಿಕೊ ಹರಿನಾಮ ಬದ್ಧನಾಗದಲೆ ಶುದ್ಧಬುದ್ಧಿಯು ನಿನ್ನೊಳಿದ್ದ ಸಮಯದಲ್ಲೇ ಪ ಕಿತ್ತಿ ಅರ್ಭಟಿಸುತ ಸುತ್ತಿದ ಮಹ ಧನುರ್ವಾಯ ಪಿತ್ತ ಕಫ ಮೇಲಕ್ಕೆ ಒತ್ತಿಕೊಂಡೊಯ್ದು ಕುತ್ತಿಗೆ ಅಡರಿಕೊಂಡೆತ್ತೆತ್ತ ಬೊಗಳಿಸುವ ಹೊತ್ತಿಗ್ಗೆ ಹರಿನಾಮ ಮತ್ತಾಗಿ ಬರದು 1 ನಾಲಗೆ ಸೆಳೆಯುವುದು ಆಲಿಗಳು ತಿರುಗುವುವು ಮೇಲಕ್ಕ್ಹರಿವುವು ನಯನ ನೀಲಗೊಂಬೆಗಳು ಕಾಲಚಕ್ರನಿಗಂಜಿ ಮಲ ಒಸರುತಿರುವಾಗ ನೀಲಶ್ಯಾಮನ ನಾಮ ನಾಲಗ್ಗೆ ಬರದು 2 ಎಂಟೆರಡು ವಾಯುಗಳ ಕಂಠನಾಳಕೆ ಸೇರಿ ಸುಂಟರಗಾಳ್ಯಂತೆ ಅಂಟಿ ಸುಳಿಸುತ್ತೆ ಮೀಂಟಿ ಕರ್ಣದಿ ಒದರಿ ಹೊಂಟೋಗ್ವ ಸಮಯ ದ್ವೈ ಕುಂಠ ನಾಮವು ತಂಟೆಗೆ ಬರದು 3 ಅಡವು ಬಂದು ಅವಯವ ಕೂಡಿಕೊಳ್ಳಲು ಸೊನ್ನೆ ಕಾಯ ನಾಡಿಗಳು ಕುಂದಿ ನೋಡಿ ಸತಿಸುತರಂ ಮಾತಾಡೇನೆಂದೆನಲಾಗ ರೂಢಿಗೀಶನ ಧ್ಯಾನ ಕೂಡಿ ಬರದಯ್ಯ 4 ಮೂಳನಾಗಿ ಸಮಯ ಹಾಳುಮಾಡಿಕೊಳ್ಳದೆ ಕಾಲನಾಳಿನ ಮಹ ಧಾಳಿಯನು ಗೆಲಿಯೊ ಕಾಲಿಮರ್ದನ ಜಗತ್ಪಾಲ ಶ್ರೀರಾಮನಡಿ ಕಾಲತ್ರದಲಿ ದೃಢದಿ ಮೇಲಾಗಿ ಭಜಿಸಿ 5
--------------
ರಾಮದಾಸರು