ಒಟ್ಟು 9 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

*ಆರಿಗಾದರು ಪೂರ್ವದ ಕಟ್ಟಳಿಯು ತಪ್ಪುದು ವಿಧಿಬರಹವು ಪ. ಪೊಡವಿಭಾರವ ಪೊತ್ತು ಮೃಡಗೆ ಭೂಷಣನಾಗಿ ಹೆಡೆಯಲ್ಲಿ ಮಾಣಿಕವಯಿಟ್ಟುಕೊಂಡು ಬಿಡದೆ ಶ್ರೀಹರಿಗೆ ಹಾಸಿಗೆ ಆದ ಫಣಿಪಂಗೆ ಅಡವಿಯೊಳಗಣ ಹುತ್ತ ಮನಿಯಾಯಿತೈಯ್ಯಾ 1 ಸುರಪತಿಯಗೆದ್ದು ಸುಧೆಯನೆ ತಂದು ಮತ್ತೆ ಮಾತೆಯ ಸೆರೆಯ ಪರಿಹರಿಸಿ ಬಹುಶಕ್ತನೆನಿಸಿಕೊಂಡ ಹದಿನಾಲ್ಕು ಲೋಕನಾಳುವವನ ಹೊತ್ತು ಇರುವವಗಾಯಿತು ಮನೆಯು ಮರದ ಮೇಲೆ 2 ರಾಮಚಂದ್ರನ ಸೇವೆಮಾಡಿ ಮೆಚ್ಚಿಸಿಕೊಂಡು ರಾವಣನ ಗರ್ವಮುರಿದು ಬಂದೂ ರೋಮರೋಮಕೆ ಕೋಟಿಲಿಂಗಧರಿಸಿದ ಹನುಮಂತಗೆ ಗ್ರಾಮಗಳ ಕಾಯ್ವದಾಯಿತೈಯ್ಯಾ 3 ಮೂರ್ಲೋಕಕಾಧೀಶ ಮುಕ್ಕಣ್ಣ ಶಿವನೆಂದು ಸಾರುತಿದೆ ವೇದ ಸಟೆಯಲ್ಲವಿದು ಪಾರ್ವತಿಗೆ ಪತಿಯಾದ ಕೈಲಾಸವಾಸನಿಗೆ ಊರಹೊರಗಣ ಕಾಡ ಕಾಯ್ವದಾಯಿತೈಯ್ಯಾ 4 ಮೀರಲಳವಲ್ಲಾ ಮುನ್ನಿನಾ ಕರ್ಮವನು ಕಾರಣಕರ್ತನಿಗಲ್ಲದೆ ಮಾರಪಿತ ಹೆಳವನಾಕಟ್ಟೆರಂಗೈಯ್ಯನ ಸೇರದ ಕಾಲವ್ಯರ್ಥವ್ಯಾದಿತೈಯ್ಯಾ 5
--------------
ಹೆಳವನಕಟ್ಟೆ ಗಿರಿಯಮ್ಮ
ಇಂದು ನೀ ಕರೆದು ತಾರೆ ಬೇಗನೆ ಪೋಗಿ ಚನ್ನವೆಂಕಟರಾಯನ ಮೊನ್ನೆ ಆಡಿದ ಮಾತು ಒಂದೂ ನಿಜವಲ್ಲಾ ರನ್ನೆ ಈಗಲೆಪೋಗಿ ssssssಸನ್ನೆ ಮಾಡಿಬಾರೆ ಪ. ಅಂಗಜನಯ್ಯನ ಕಾಣದೆ ನಾನು ಹಿಂಗಿರಲಾರೆ ನಮ್ಮಾ ಕಂಬುಕುಚದ ಬಾಲೆ ರಂಗನಾ ಕರತಾರೆ ರಂಗು ಮಾಣಿಕದಹರಳುಂಗುರ ಕೊಡುವೆನು 1 ಕಾಲಿಗೆ ಎರಗುವೆನೆ ಕೋಮಲಮುಖಿ ಆಲಸ್ಯ ಮಾಡದೆಲೆ ನೀಲಕುಂತಳನೀರೆ | ಲೋಲನ ಕರತಾರೆ ವಾಲೆಮೂಗುತಿ ಕಂಠಮಾಲೆಯ ಕೊಡುವೆನು 2 ಮರದಿರಲಾರೆನಮ್ಮಾ ಬೇಗನೆಪೋಗಿ ನೆರವಂತೆ ಮಾಡು ನೀನು ಯರವುತನವುಬ್ಯಾಡಾಮರೆಯಲಾರೆನೆ ನಿಮ್ಮಕರವಪಿಡಿವೆ ಹೆಳವನ ಕಟ್ಟೆರಂಗೈಯ್ಯನ3
--------------
ಹೆಳವನಕಟ್ಟೆ ಗಿರಿಯಮ್ಮ
ಧ್ಯಾನ ಮಾಡಿರೊ ರಂಗಯ್ಯನ ಪ ಗಾನ ವಿಲೋಲನ ದೀನಾರ ಪೊರೆವೊನ ಅ.ಪ. ಮೀನ ರೂಪವ ತಾಳಿ ದಾನವಾಖ್ಯನ ಸೀಳಿ ಮಾನವ ಪೊಂದಿದ ಜಾಣ ರಂಗೈಯ್ಯನ 1 ಕೂರ್ಮ ತಾನಾಗಿ ಗಿರಿಯ ಬೆನ್ನಲಿ ಪೊತ್ತು ಸುರರನ್ನೆ ಪೊರೆದ ಗಂಭೀರ ರಂಗೈಯ್ಯನ 2 ವರಾಹ ರೂಪದಿ ಕೋರೆಯ ಕೊನೆಯಲಿ ಧರಣಿಯನೆತ್ತಿದ ಶೂರ ರಂಗೈಯ್ಯನ 3 ನರಹರಿ ರೂಪದಿ ಘೋರ ದೈತ್ಯನ ಸೀಳಿ ತರಳನ ಸಲಹಿದ ಕರುಣಿ ರಂಗೈಯ್ಯನ 4 ಪುಟ್ಟ ಹಾರುವನಾಗಿ | ದಿಟ್ಟ ಬಲಿಗೆ ಒಲಿದು ಕೊಟ್ಟ ವರಗಳ ದಿಟ್ಟ ರಂಗೈಯ್ಯನ 5 ಪರಶು ಪಿಡಿದು ಭೂವರರ ಗೆಲಿದು ಭೂ ಸುರರನ್ನೆ ಸಲಹಿದ ಧೀರ ರಂಗೈಯ್ಯನ6 ಮಾನವ ರೂಪದಿ ದಾನವಾಂತಕನಾಗಿ ದೀನರ ಪೊರೆದ ಸುಜ್ಞಾನಿ ರಂಗೈಯ್ಯನ 7 ಕಂಸನ ವಂಶ ನಿರ್ವಂಶಾಕೋಸುಗ ಯದು ವಂಶದೊಳು ತಾನು ಜನಸಿದನು ಹಿಂಸೆ ಮಾಡುತಲಿರ್ದ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಮುರಧ್ವಂಸಿ ಕೃಷ್ಣಗೆ 8 ಸತಿಯರ ವ್ರತದಿಂದ ಪತಿತರಳಿಯದಿರೆ ಗತಿ ತೋರದೆ ಭವಕಾತರಿಸೆ ಅತಿ ನಗ್ನದಿ ಬಂದು ವ್ರತಭಂಗ ಮಾಡಿದ ಸಿರಿ ಕಂಠÀನುತನಾದ ಸಿತವಾಹನ ಸಖನ 9 ವೇದ ಬಾಹಿತರನ್ನು ಭೂದೇವಿ ಧರಿಸದೆ ಮಾಧವ ಪೊರೆಯೆಂದು ಮೊರೆಯಿಡಲು ಚದುರತನದಿ ಸತಿಯ ಕುದುರೆಯ ಮಾಡಿತಾ ಕೊಂಡ ಕದನದಿ ಕೊಂದವನ 10 ಮಂಗಳ ಮಹಿಮನ ಶೃಂಗಾರ ಪ್ರಿಯನ ಅಂಗಜಾರಿಯ ಧನುರ್ಭಂಗನ ಅಂಗಳದೊಳು ಮೂರ್ಲೋಕಂಗಳ ತೋರಿದ ತುಂಗ ವಿಕ್ರಮನಾದ ರಂಗೇಶವಿಠಲನ 11
--------------
ರಂಗೇಶವಿಠಲದಾಸರು