ಒಟ್ಟು 5 ಕಡೆಗಳಲ್ಲಿ , 2 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಚ್ಚತ್ತಿರಬೇಕು ಮಾ ಧ್ರುವ ಎಚ್ಚತ್ತಿರಬೇಕು ನೆಚ್ಚಿ ನಿಜಘನ 1 ರಚ್ಚಿಗೆ ಬಾರದೆ ಬಚ್ಚಿಟ್ಟು ನಿಜಘನ 2 ಕಚ್ಚಿ ಕೈ ಬಾಯಿಲೆ ಹುಚ್ಚಿಟ್ಟು ಹೋಗದೆ 3 ಕಚ್ಚಿಕಿಡದೆ ನೀನು ಕಾಂಚನದಾಶೆಗೆ 4 ನೆಚ್ಚಿಕೊಂಡಿರಬ್ಯಾಡಿ ವ್ಯಚ್ಚಾಗು ಬದುಕಿಗೆ 5 ತುಚ್ಛರ ಮಾತಿಗೆ ನೆಚ್ಚಿ ನಡಿಯದೆ 6 ಮತ್ಸರಕೆ ನೀವು ಹುಚ್ಚಾಗಿ ಹೋಗದೆ 7 ಅಚ್ಯುತ ಭಕ್ತಿಗೆ 8 ಸಚ್ಚಿದಾನಂದನ ನಿಶ್ಚಲರಿಯಲಿಕ್ಕೆ 9 ಎಚ್ಚರಿಸಿದ ಗುರುಪಾದ ನಿಶ್ಚೈಸಲು 10 ಸೂಚಿಸಿ ಹೇಳಿದ ಗುರುದಾಸಮಹಿಪತಿ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ ನೋಟ ಅನುಭವಕಾಯಿತು ನೀಟ ಧ್ರುವ ರಂಜಕ ಬಲುಕೊಂಡಿತು ನೋಡಿ ಅಂಜಿಕಿ ಭವಭಯ ಈಡ್ಯಾಡಿ ಪ್ರಾಂಜಲ ಸದ್ಗುರು ದಯಮಾಡಿ ಅಂಜನ ಹಚ್ಚಿದ ದುವುಡಿ 1 ಕಾಣದ ಕಂಡೆವು ಕಣ್ಣಿಲಿ ಖೂನಕ ಬಾರದು ಘನಲೀಲೆ ಜಾಣರು ಬಲ್ಲರು ಮನದಲಿ ನೆನದರು ತಾಂ ವರಿಕಿಲೆ 2 ಆಶ್ವರ್ಯವು ತಾನಾಗ್ಯದೆ ನಿಶ್ಚಯದೋರುತಲ್ಯದೆ ಪಶ್ಚಿಮಕೆ ಭಾಸುತದೆ ಸ್ವಚ್ಛವು ನೋಡಿದರದೆ 3 ರಚ್ಚಿಗೆ ತಾಂ ಬಾಹುದೆಲ್ಲ ಮುಚ್ಚಿಟ್ಟಡೆÉ ಬಾಳು ಸವಿಬೆಲ್ಲ ಅಚ್ಚಳಿಯದ ಭಕ್ತನೆ ಬಲ್ಲ ನೆಚ್ಚಿದ ಮಹಿಪತಿ ಸೊಲ್ಲ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಕ್ತಿನೋಡಿ ಜನ ಮಾಡುವ ಪರಿಯ ಮುಕ್ತಿಯ ಮಾರ್ಗವ ಯುಕ್ತಿಯನರಿಯದೆ ಭಕ್ತ ನಾನೆಂದಾಡುವರ್ಹೊರಿಯ ಧ್ರುವ ಚಕ್ಕಮಲಕು ಭಕ್ತಿಯ ನೋಡಿ ಉಕ್ಕಿ ದೋರುತಲ್ಯದ ಬಲಗೂಡಿ ಮಿಕ್ಕ ಮಾನವರಿಗೆ ದಯಮಾಡಿ 1 ಡಂಭದೋರು ವನೇಕಚಂದ ಗುಂಭಹೇಳನು ಸರಕ್ಕನೆ ಬಂದು ಕೊಂಬುಕೊಡುವ ಮಾತಿಗೆ ಬಂದರೆ ನಂಬದೆ ಹೋಗುವರತ್ತತ್ತ ಹಿಂದ 2 ಹೊಟ್ಟಿನಮ್ಯಾಲೆ ಸಾರಿಸಿದಂತೆ ನಿಷ್ಠೆನೋಡಿ ಜನ ಮೋಹಿಸುವಂತೆ ಘಟ್ಟಿಸುತ ತಮ್ಮ ಹೊಟ್ಟೆಯ ಹೊರೆದರು ಮುಟ್ಟ ಭಜಿಸುವ ಗುಟ್ಟುದೋರಿದಂತೆ3 ರಚ್ಚಿಗೆ ಬಂತು ಭಕ್ತಿ ಇದೇ ಬಹಳ ಹೆಚ್ಚು ನಮ್ಮದೆಂದು ಮಾಡುರು ಮ್ಯಾಳಿ ಮತ್ಸರದೊಳಗಿದ್ದು ಸಚಲಸ್ನಾನ ಮಾಡಿದೆವೆಂದು ಹೇಳುರು ನಿರ್ಮಲ4 ನಗೆ ಬರುತ್ತದೆ ಭಕ್ತಿಯ ಕಂಡು ಜಗದೊಳಗೆಲ್ಲ ಇದೇವೆ ಭಂಡು ಸುಗಮ ಸುಪಥ ಬ್ಯಾರದೆ ಎಂದು ಮಹಿಪತಿ ಘನಬೆರೆದು ಸದ್ಗುರು ಬಲಗೊಂಡು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಹಿಮನಿಗೆ ನಮಸ್ಕಾರ ಬ್ರಹ್ಮಾನಂದದಿ ಸಮರಸವಾದ ಸಪ್ರೇಮಿಗೆ ನಮಸ್ಕಾರ ಕಾಮಕ್ರೋಧಗಳೆಂದು ನಿಷ್ಕಾಮದಿ ನೇಮದಲಿಹಗೆ ನಮಸ್ಕಾರ ಶಮೆದಮೆದಲಿ ಸಮದೃಷ್ಟಿಗೂಡಿಹ ಸ್ವಾಮಿ ಸೇವಿಗೆ ನಮಸ್ಕಾರ 1 ಆಶಿ ತಿಳಿದು ನಿರಾಶೆಯೊಳಿಹ ಉದಾಸಿಗೆ ನಮಸ್ಕಾರ ಸುಮಿಲೊಂತಕಗೆ ನಮಸ್ಕಾರ ಸೂಸಿ ತುಳುಕದೆ ಕಾಸಿನಾಶೆಗೆ ಹರಿದಾಸರಿಗೆ ನಮಸ್ಕಾರ 2 ಹೆಚ್ಚು ಕುಂದನೆ ರಚ್ಚಿಗೆ ತಾರದ ಸ್ವಚ್ಛಲಿಹಗೆ ನಮಸ್ಕಾರ ಕಚ್ಚಿ ಕೈ ಬಾಯಿಲಿ ಹುಚ್ಚಾಗದ ನಿಶ್ಚಲೇಂದ್ರಿಗೆ ನಮಸ್ಕಾರ ಮತ್ಸರಳಿದು ನಿರ್ಮತ್ಸರೊಳಿಹ ಸುನಿಶ್ಚಿತನಿಗೆ ನಮಸ್ಕಾರ ಮೆಚ್ಚಿ ಘನದೊಳು ಇಚ್ಛೆಲಿಹ ಮಹಾ ಎಚ್ಚರಿಗೆ ನಮಸ್ಕಾರ 3 ನಾ ನೀನೆಂಬುವ ನುಡಿ ನೀಗಿನ ಅನುಭವಿನಗೆ ನಮಸ್ಕಾರ ಖೂನ ತಿಳಿದಿಹ ಸ್ವಾನುಭವದ ಸುಙÁ್ಞನಿಗೆ ನಮಸ್ಕಾರ ತಾನೆ ತಾನಾಗಿಹ ಘನದೊಳು ನಿರಾಶನಿಗೆ ನಮಸ್ಕಾರ ಮೌನದಲಿ ನಿಜಸ್ಥಾನದಲಿರುವ ಸುದಾನಿಗೆ ನಮಸ್ಕಾರ 4 ಗರ್ವವಳಿದು ಸರ್ವವೇ ನಿಜ ತಿಳಿದ ನಿಗರ್ವಗೆ ನಮಸ್ಕಾರ ತೋರ್ವ ಕರದೊಳು ಅರ್ವನುಭವನಿರ್ವಾಣಿಗೆ ನಮಸ್ಕಾರ ನಿರ್ವಾಹದ ಸುಪರ್ವಾಣಿಯ ಫಲ ಇರ್ವನಿಗೆ ನಮಸ್ಕಾರ ಸರ್ವಸುಖ ಸುರಿಸಿದ ಮಹಿಪತಿ ಶ್ರೀಗುರುವಿಗೆ ನಮಸ್ಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಯಲಭಾವಿಯ ನೀರಿಗೆ ಬಂದಳೊಬ್ಬಳು ಬಾಲೆ |ಬಾಯಾರಿ ಬಿದ್ದಳು ಕೊಡವೊಡೆಯಿತು ನೀರುರುಳಿತು ಪ.ನೀರಿಲ್ಲದೆ ನೆರಳಿಲ್ಲದೆ ಬೇರಿಲ್ಲದೆ ಸಸಿಹುಟ್ಟಿಹೂವಿಲ್ಲದೆ ಕಾಯಿಲ್ಲದೆ ಅದು ಫಲಕೆ ಬಂದು ||ಕರವಿಲ್ಲದೆ ಕಾಲಿಲ್ಲದೆ ಕೊಯ್ವರಯ್ವರು ಆ ಹಣ್ಣನು |ಮರುಳಾಯಿತು ಮೂವತ್ತು ಸಾವಿರ ಮಂದಿ 1ಕುರುಡ ಕಂಡನು ಸರ್ಪನಡುವಿರುಳು ಬಾಹುದನು |ಮೂಕ ಕಂಡನು ಕನಸ ಕಿವುಡನು ಕೇಳಿದ ||ಇರವು ಹಾರಿತು ಗಗನಕೆ ಮರವು ಮುರಿಯಿತು ನೋಡಿ |ವಿಧಿತನ್ನ ಬೇಟಿಗೆ ಹೋಗುವ ಸಡಗರ ನೋಡಿ2ಕಿಚ್ಚಿನ ಕೊಡದವಳೆ ನೀ ಬಂದೆ ತೋರಣಗಟ್ಟಿ |ರಚ್ಚಿಗೆ ಬಾಹೋರು ನಾಲುವರೊಳಗೆಉಚ್ಚರಿಸಲೂ ಸಲ್ಲ ಕೇಳು ಪುರುಷನ ಸೊಲ್ಲಅಚ್ಚಪುರಂದರವಿಠಲ ತಾನೆ ಬಲ್ಲ 3
--------------
ಪುರಂದರದಾಸರು