ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಮ್ಮನ ತೊಡೆಯ ಮೇಲೆ ನಮ್ಮ ಕೃಷ್ಣ ಸುಮ್ಮನೆ ಮಲಗಿಹನು ಪ ಸುಮ್ಮೊನದಿ ಸುಖದಿಂ ನಲಿದಾಡುತ ಅ.ಪ ಮಣ್ಣ ಮೆದ್ದುದ ಕಂಡು ಗೋಪಿದೇವಿ ಚಿಣ್ಣನ ಬಾಯಿನೋಡೆ ಕಣ್ಣಿಗೆ ಬ್ರಹ್ಮಾಂಡ ತೋರಿಸಿದಂಥ ಪರಬ್ರಹ್ಮ 1 ತರಳ ತರಲೆ ಮಾಡೆ ತಾಯಿಯು ಹೊರಳೆಗೆ ಕಟ್ಟಲಾಗಿ ಸುರತರುಗಳ ಮುರಿದು ನಿಜತರವ ಗೈದ ನಿತ್ಯಾತ್ಮ 2 ಕಾಲಲೊದೆದು ಕೊಂದು ಧಾತಾ ದೇವೇಂದ್ರರ ಶಿರಬಾಗಿಸಿದ ಪೂತಗುಣ 3 ಹಾಲುಕೊಡೆನೆ ಬಾಲ ಸಂಜೆಗೆ ಹಸುವ ಕರೆವೆನೆನಲು ಲೀಲೆಯಿಂ ಕಣ್ಣ ಮುಚ್ಚಿ ಕತ್ತಲೆ ಕವಿಸಿದ ದೈವ 4 ಗೋಪೀಜನಗಳೊಡನೆ ಗೋಪಾಲನು ಸ್ತ್ರೀಲೋಲನಾಗಿ ಕುಣಿದು ರಥಾಂಗಪಾಣಿ 5 ನವನೀತ ಚೌರ್ಯಮಾಡಿದ ನಾರೀಜನರ ವಸ್ತ್ರಾಪಹರ ಗೈದ ಅವನೀಭಾರವ ಕಳೆದ ಮಾಯಾಮೂರ್ತಿ ದೇವಶಿಖಾಮಣಿ6 ಭೂಮಿಪಾಲನೆ ಮಾಡಿದ ಹಿಂಸಕರ ವಂಶವಳಿಪ ಹಂಸಲೋಲ ಜಾಜಿಶ್ರೀಶ 7
--------------
ಶಾಮಶರ್ಮರು
ಸಾಗಿ ಬಾರೈಯ ನೀನು, ಗೋವಿಂದ ವೆಂಕಟ ಪ ಸಾಗಿಬಾರೈಯ ಭವರೋಗದ ವೈದ್ಯನೆ ಬಾಗಿ ನಿನಗೆ ಚೆನ್ನಾಗಿ ತುತಿಪೆ ನಿಂದು ಭಾಗೀರಥಿಪಿತ ಭಾಗವತರ ಸಂ ಯೋಗರಂಗ ಉರಗಗಿರಿ ವೆಂಕಟ ಅ.ಪ. ರಥದ ಮಧ್ಯದಲಿಪ್ಪನೆ ರಥಾಂಡಜ ವಾಹನನೆ ರಥಾಂಗಪಾಣಿಯೆ ದಶರಥ ನೃಪಬಾಲ ಪಾರ್ಥಗೆ ಒಲಿದವನ ರಥವ ನಡಿಸಿ ಅತಿ- ರಥ ಮಹರಥರ ವಿರಥರ ಮಾಡಿ ಗೆಲಿಸಿದೆ ಪ್ರಥಮ ದೈವವೆ ಮನ್ಮಥಪಿತ ದೈತ್ಯರ- ಮಥನ ಭಕ್ತರ ಮನೋರಥನೆ ತಾರಾ- ಪಥವರ್ಣನೆ ತವ ಕಥಾಶ್ರವಣದಲಿ ಸು- ಪಥವನು ತೋರಿಸು ಪ್ರಥಮಾಂಗದೊಡೆಯ 1 ನಿಲ್ಲದೆ ಬರುವುದು ಪುಲ್ಲಲೋಚನೆ ಸಿರಿ- ವಲ್ಲಭ ಸರ್ವರಿಗು ಬಲ್ಲಿದನೆ ಅಪ್ರತಿ- ಮಲ್ಲ ಮುರವಿರೋಧಿ ಮೆಲ್ಲಮೆಲ್ಲನೆ ಪಾದ ಪಲ್ಲವ ತೋರುತ್ತ ಎಲ್ಲಾ ಕಾಲದಿ ನಮ್ಮ- ನೆಲ್ಲರುದ್ಧರಿಪುದು ಎಲ್ಲಿ ನಿನಗೆ ಸರಿ- ಯಿಲ್ಲವೊ ನೋಡಲು ಸಲ್ಲುವುದೋ ಬಿರು- ದಲ್ಲಿಗಲ್ಲಿಗೆ ಗುಣಬಲ್ಲವರಾರಿನ್ನು ವಿಶ್ವ 2 ಬೊಮ್ಮ ಮೊದಲು ಮನುಜೋತ್ತಮರು ಕಡೆಯಾಗಿ ನಿಮ್ಮ ದಾಸರು ಅವರ ಸಮ್ಮಂಧಿಗಳ ಪಾದ- ನೆಮ್ಮಿಕೊಂಡಿಪ್ಪಂಥ ಧಮ್ಮನು ನಾ ಸರ್ವೋ- ತ್ತುಮ್ಮಾನೇಕ ಗುಣಮಹಿಮ ವಿಭೂಷಿತ ರಮ್ಮೆಧರಣಿದೇವಿ ಇಮ್ಮಹಿಷೇರ ಕೂಡಿ ಸಮುಖನಾಗುತ ಸುಮ್ಮನೆ ಬಾ ಬಾ ಸಿರಿ ವಿಜಯವಿಠ್ಠಲ ಅನು- ಪಮ್ಮಚರಿತ ಪರಬೊಮ್ಮ ತಿರುಮಲೇಶ 3
--------------
ವಿಜಯದಾಸ