ಒಟ್ಟು 3 ಕಡೆಗಳಲ್ಲಿ , 1 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಳಗಿರಿಯಲಿ ಬೆಳಗಿಹೆಯ ಕಳವಳಿಸುವ ಮನ ಸುಳಿವದೆನ್ನಮಲ ಕಳೆದಭಯವನಿತ್ತು ನರಹರಿ ಪ. ಅಳಗಿರಿ ಹತ್ತಲು ಝಳ ಝಳ ಮನಸಲಿ ಸುಳಿದು ಭಯವ ಹರಿಸಿ ತೊಳಲಿದ ಭಕ್ತರಘ ಕಳೆದು ಪೊರೆವೆನೆಂದು ಅ.ಪ. ರಂಗನ ಮದುವೆಯೋಳ್ ವೆಂಕಟೇಶನು ಬೊಮ್ಮಗೆ ಮುಂಗಡ ನಿನಗುಣಿಸೆನೆ ಉಂಡನು ಹರೆ ರಂಗನ ಬೆಟ್ಟ ಬಾಷಿಂಗ ನರಸಿಂಗ ಹಿಂಗದೆ ವೆಂಕಟನ ತೋರಿಸೋ ಎನ್ನ ಕಂಗಳಲಿ ನೋಡುವೆ ಮನದಣಿಯೆ 1 ಬಂದ ಭಕ್ತರಿಗಭಯದಿಂದಲೇರಿಸಿ ಮುನ್ನ ತಂದೆ ತೋರಿ ವೆಂಕಟನ್ನ ರನ್ನನ್ನ ನಿಂದು ಶ್ರೀನಿವಾಸ ತಂದೆ ವರಹರಂತೆ ಇಂದೆನ್ನ ಕುಲದೇವತೆ ತಂದು ತೋರಿದೆ ನಿಮ್ಮ ಮೂವರ ರೂಹವ 2 ನಾರದ ವಂದ್ಯನ ನಾರೇರಿಗೊಲಿದನ ಶೂರ ಶ್ರೀ ಶ್ರೀನಿವಾಸನೆಂಬ ಪೆಸರಿನ ನೀ ಸಾರಿರ್ಪೆ ಪೆಸರ್ವ ನಾಮದಲಿ ನಾರಾಯಣನೆಂದ ಬಾಲನಿಗೆ ಒಲಿದನೆ ಆರಿಗು ವಶವÀಲ್ಲ ದಾರುಣನಿನಾಮ ನರಸಿಂಹ3
--------------
ಸರಸ್ವತಿ ಬಾಯಿ
ಗೋಪಿ ಚಂದನದಿಂದ ಎ ನ್ನೊಡೆಯ ಮಧ್ವಾರ್ಯ ಹೃದಯವಾಸಾ ಕೃಷ್ಣ ಪ. ಮೃಡಸಖ ನಿನ್ನಯ ರೂಹವ ತೋರೆ ಕಡಲಿಂದೊಡನೆ ಬಂದೆ ಆನಂದತೀರ್ಥರ ಮುಂದೆ ನಿಂದೆ ಅ.ಪ. ಗೆಜ್ಜೆ ಕಾಲ್ ಕಡಗ ಸಜ್ಜಿನಿಂದಿಟ್ಟು ಮಜ್ಜಿಗೆ ಕಡಗೋಲು ನೇಣು ಸಹ ಸಜ್ಜನರ ಸಲಹಲು ಮಧ್ವಾರ್ಯರ ಮುಂದೆ ಗೆಜ್ಜೆ ಧ್ವನಿ ಮಾಡಿ ಕುಣಿಯುತ ಕೃಷ್ಣ 1 ಉಟ್ಟ ಪೀತಾಂಬರ ಉಡಿಗೆಜ್ಜೆ ವಡ್ಯಾಣ್ಯ ಇಟ್ಟು ಕೌಸ್ತುಭಹಾರ ತುಳಸಿಮಾಲಾ ಕೊಟ್ಟು ಅಭಯ ಹಸ್ತ ಸಲಹುವೆನೆಂಬಾ ಬಿರುದಿಟ್ಟು ಕಂಕಣ ತೊಟ್ಟು ಶ್ರೀ ಕೃಷ್ಣ 2 ಮಕರಕುಂಡಲ ಕಿರೀಟ ಶೋಭಿಸುತಲಿ ಅಕಳಂಕ ಚರಿತ ಶ್ರೀ ಶ್ರೀನಿವಾಸ ನಿಖಿಲ ಬ್ರಹ್ಮಾಂಡದೊಳೆಲ್ಲೆಲ್ಲು ಕಾಣೆ ಸಕಲ ದೇವರ ದೇವಾ ಶ್ರೀ ಕೃಷ್ಣ ಪ್ರಭುವೆ 3
--------------
ಸರಸ್ವತಿ ಬಾಯಿ
ನಿನ್ನ ಪದ ಧ್ಯಾನಿಪರು ಪಗಲಿರುಳು ನಿನ್ನ ಭಕ್ತರು ಹರಿ ನಿನ್ನ ರೂಪ ನೆನೆನೆನೆದು ಸ್ಮರಿಸಿ ಮನದಲಿ ನಿಲಿಸಿ ಸ್ತುತಿಸಿ ಪಾದ ಧೂಳು ಶಿರದಲ್ಲಿ ಧರಿಸುವರು ಭಕ್ತರು ನಿನ್ನ ರೂಹವ ಮನಸಿನ ಜಗಲಿಯಲಿ ನಿಲಿಸುವರು ಭಕ್ತರು ನಿನ್ನ ನಂಬಿ ಸಕÀಲಕಾರ್ಯ ನಿರ್ವಹಿಸುವರು ಭಕ್ತರು ಹರಿ ನಿನ್ಹೊರತು ಅನ್ಯರನು ನೆನೆಯರೊ ಪನ್ನಗಾದ್ರಿನಿವಾಸ ಶ್ರೀ ಶ್ರೀನಿವಾಸ ನಿನ್ನ ಭಕ್ತರ ಸಂಗಕೊಡೊ ಎನಗೆ ಸರ್ವೇಶ
--------------
ಸರಸ್ವತಿ ಬಾಯಿ