ಮರೆಯದಿರು ಮಹಾಮಾಯೆ ಮಾರುತನ ತಾಯೆ
ಕರುಣಿಕರಕಮಲವನು ಶಿರದೊಳಿರಿಸುತ ಕಾಯೆ ಪ.
ಪುಷ್ಟಿಕರಿ ನೀ ಪೂರ್ಣ ದೃಷ್ಟಿಯಿಡಲೀಗಖಿಳ
ಕಷ್ಟ ಪರಿಹಾರಗೈವುತಿಷ್ಟಾಪೂರ್ತಿಗಳು
ಸ್ಪಷ್ಟವಾಗುವವು ಸಕಲೇಷ್ಟದಾಯಕ ನಮ್ಮ
ವಿಠ್ಠಲನ ಸೇವೆಗುತ್ಕøಷ್ಟ ಸನ್ನಹವಹದು 1
ಲೋಕನಾಯಕಿಯೆ ಕರುಣಾಕಟಾಕ್ಷವನಿರಿಸು
ಭೀಕರಿಸುತಿಹ ಮನದ ವ್ಯಾಕುಲವ ಹರಿಸು
ಪಾಕ ಶಾಸನ ಪೂಜೈ ಪದಕಂಜ ಭಕ್ತಜನ
ಶೋಕಸಾಗರ ಶೋಷಣೈಕ ನಿಧಿ ಹರಿಸಹಿತ 2
ಹಿಂದೆ ಬಹು ಥರದಿ ನಾನೊಂದ ಪರಿಯನು ಮನಕೆ
ತಂದು ದಯದೋರಿ ನೀ ಬಂದಿರುವಿ ಮನೆಗೆ
ಮುಂದೆನ್ನ ಬಿಡದೆ ಗೋವಿಂದ ವೆಂಕಟಪತಿಯ
ಹೊಂದಿರುವನಲಿ ಮಮತೆಯಿಂದಿಲ್ಲಿ ನೆಲೆಯಾಗು 3