ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟಾಚಲ ನಿಲಯ ಪಿಡಿಯೆನ್ನ ಕೈಯ ಪಂಕಜಾಲಯ ಸುಪ್ರೀಯ ಪ ಅಹಿ ಕಂಕಣನುತ ಪದ- ಪಂಕಜ ತೋರೊ ಮೀನಾಂಕನ ಜನಕ ಅ.ಪ. ಪತಿತ ಪಾವನ ಮೋಹನ, ಪಾಲಿಸೊ ಎನ್ನ ಸತತ ಬಿಡದೆ ನೋಡೆನ್ನ ಹಿತರಹಿತರಾದವರನ್ನ ಪೊರೆದಳಿದೆ ಘನ್ನ ನತಜನರಿಗೆ ಪ್ರಸನ್ನ ದಿತಿಸುತ ತತಿಸಂಗತಿಯಲಿ ಮಥಿಸಲು ವನಧಿಯ ಅತಿ ಸಮ್ಮತಿಯಲಿ ಚತುರ ಧರಿಸಿ ಪರ್ವತ ಸುರತತಿಗ- ಮೃತ ವುಣಿಸಿದ ಶಾಶ್ವತಗತಿನಾಥ 1 ಸತಿಯ ಕಾಯಿದ ವಿನೋದ ಸಾಮಜವರದ ಚತುರದಶ ಲೋಕಾಧಿನಾಥ ಗತಿ ನೀನೆ ಮಹಾಪ್ರಸಾದ ಪರಮಮೋದ ಅತಿಶಯದಿ ಪೊಳೆವ ಪಾದ ಶತಪತ್ರವು ಹೃದ್ಗತವಾಗಲಿ ಉ- ನ್ನತ ಮಹಿಮನೆ ಕೀರುತಿವಂತನೆ ಅ- ಪ್ರತಿಭಾರತಮಲ್ಲ ಮೂರವತಾರಗೆ ಅತಿಪ್ರಿಯನೆನಿಪ ಮೂರತಿ ಚತುರದೇವ 2 ಸ್ಥಿತ ಮನ ಮಾಡೋ ಭವಭಂಗ ಸಂಗ ನಿಸ್ಸಂಗ ಚ್ಯುತಿ ದೂರ ಶೌರೀ ಕಾಳಿಂಗ- ದುರಿತ ಮಾತಂಗ-ಮರಿಗೆ ಸಿಂಗ ತುತಿಪೆ ಕರುಣಾಂತರಂಗ ಕ್ಷಿತಿಯೊಳಗಹಿ ಪರ್ವತನಿವಾಸನೆ ಖರೆಗೊಳಿಸುವ ದುರ್ಮತಿಯನು ತೊಲಗಿಸಿ ತ್ವತು ಪಾದದಲಿಡು ಮತಿಯಲ್ಲದೆ ತಿರು - ಪತಿ ವಿಜಯವಿಠ್ಠಲ ಇತರವನರಿಯೆ 3
--------------
ವಿಜಯದಾಸ
ಶ್ರೀನಿಕೇತನ ಸರ್ವಪತಿಯು ಸಕಲ ಸಜ್ಜನಾನಂದ ಕರುಣಾ ಮೂರುತಿಯ ಕಂಠೇಧೃತ ಸತಿಯ ಮಣಿ ಮಯ ಪೀಠದಿ ಧ್ಯಾನಿಸಿ ಪರಮಾನುರಾಗದಿ ಪಾಡುತ ಮಾನಿಸಿ ಕರೆವೆ ಮುದದಿಂದ ಶೋಭಾನೆ 1 ಸಕಲ ಲೋಕಾಧಿನಾಥ ದೇವಾ ವಿಧಿ ನಾವ ವಿಕಸಿತ ಮುಖ ಕಂಜಭಾವ ಭಕ್ತರ ಸಂಜೀವ ಕುಂಡಲ ಶುಭ ಮುರುವಿಲಾಸಿತ ಕಪೋಲ ಸುಶೋಭಿತ ಕರುಣದಿ ಭಕುತಿಯನಿತ್ತು ದಯವಾಗು 2 ಕಂಧರಲಂಬಿ ವನಮಾಲಾ ಮಧ್ಯಸ್ಥ ಕೌಸ್ತುಭೇಂದಿರಾಸಕ್ತ ವಕ್ಷೋಲೀಲ ಕರುಣಾಲವಾಲ ಬಂದಹರಾರಿದ ರೆಂದಿವರ ಶುಭಾನಂದ ಕಾದಿದರ ಸುಂದರ ಶುಭಕರ ನಿಂದೀ ಮಂಟಪಕೆ ದಯವಾಗು 3 ವಿಧಿಯಾಸನಾದ ಕಂಜನೆ ಗದಾ ಗಂಭೀರ ವೃತ್ತ ನಾಭ ವಾಸಃ ಶೋಭ ಕರ ಭೋರ್ವಬ್ದಾಭ ಶುಭ ಪದಯುಗ ಕಂಜವ ಹೃದಯದಿ ತೋರುತ ಸದಯದೊಳಗರಿಗಳ ಸದೆವುತ ಹಸೆಗೆ ದಯವಾಗು 4 ಮೂರ್ತಿ ಸುರವರ ನುತಕೀರ್ತಿ ಶ್ರೀನಿಧಿ ಪರಿಹರಿಸಾರ್ತಿ ಪರಿಪೂರಿಸುತರ್ಥಿ ದೀನ ಬಂಧು ಸ್ವಜನಾನುಕಂಪ ಕರ್ಣಾನುಜಸಾರಥಿ ಶೇಷ ಗಿರೀಶ ಸುಮ್ಮಾನವ್ಯಾಕಿನ್ನು ಹಸೆಗೇಳು 5
--------------
ತುಪಾಕಿ ವೆಂಕಟರಮಣಾಚಾರ್ಯ