ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೊ ಬಾರೊ ಹರಿಯೆ ಕರುಣಾ ಪಯೋಂಬುಧಿ ಪ. ಕಾಯೊ ಬಾರೊ ಕರುಣಾಂಬುಧಿ ಕಮಲದ- ಳಾಯತ ನೇತ್ರ ರಸಾಯನ ಸುರಿವುತ ಅ.ಪ. ಸಿಲುಕಿ ಬಾಧೆಗೊಂಡು ಬಹು ಬೆದರುವ ದಾಸನ ಕಾದುಗೊಳ್ಳು ಕಂಬ್ವರಿಗದಾಬ್ಜಧರ ಮಾಧವ ಮಧುಮಥನ ಮನದಿ ವಿನೋದಿಸುವ ಕಥನ ಶ್ರೀ ಪದಾಬ್ಜಾಮೋದಯುಗ ಸಾಸ್ವಾದನಾತ್ಮಕ ವಿನೋದ ನಲಿವುತ 1 ಕತ್ತಲೆ ಮುಸುಕಿರುವ ಸಮಯದಿ ಸುತ್ತ ವ್ಯಾಘ್ರವಿರುವ ವನದಲಿ ಸತ್ವಹೀನವಾದೆತ್ತಿನ ಕೆಡಹುವದುತ್ತಮವೆ ಪುರುಷೋತ್ತಮ ನಿನ್ನಯ ತತ್ವಮಾರ್ಗ ತಿಳಿಸಿ ತ್ರಿಕರಣವೆತ್ತಿ ಬೋಧೆಗೊಳಿಸಿ ಜನೋತ್ತಮನೆನಿಸುತ 2 ಇಂದಿರೇಶ ನಿನ್ನ ಚರಣವನೆಂದಿಗು ನಂಬಿದನ ಬಂಧ ಬಿಡಿಸಿ ಕೃಪೆಯಿಂದ ಪೊರೆವನೆಂಬಂದಕಪಾಯವ ಕರುಣಾಸಿಂಧು ನಿನ್ನ ಕೀರ್ತಿ ಮನೋಗತ ಸಂದಣಗೊಳಿಸುತ 3
--------------
ತುಪಾಕಿ ವೆಂಕಟರಮಣಾಚಾರ್ಯ