ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರಾದೇವಿಯ ರಮಣ ಬಾ ವೃಂದಾರಕ ಮುನಿವಂದ್ಯ ಬಾ ಸಿಂಧುಶಯನ ಗೋವಿಂದ ಸದಮಲಾ ನಂದ ಬಾ ಮಾವನ ಕೊಂದ ಬಾ ಗೋಪಿಯ ಕಂದ ಬಾ ಹಸೆಯ ಜಗುಲಿಗೆ ಶೋಭಾನೆ 1 ಕೃಷ್ಣವೇಣಿಯ ಪಡೆದವನೆ ಬಾ ಕೃಷ್ಣನ ರಥ ಹೊಡೆದವನೆ ಬಾ ಕೃಷ್ಣೆಯ ಕಷ್ಟವÀ ನಷ್ಟವ ಮಾಡಿದ ಕೃಷ್ಣ ಬಾ ಯದುಕುಲ ಶ್ರೇಷ್ಠ ಬಾ ಸತತ ಸಂ ತುಷ್ಟ ಬಾ ಉಡುಪಿಯ ಕೃಷ್ಣ ಬಾ ಹಸೆಯ ಜಗುಲಿಗೆ ಶೋಭಾನೆ 2 ಎಲ್ಲರೊಳು ವ್ಯಾಪಕನಾಗಿಪ್ಪನೆ ಬಲ್ಲಿದ ಧೊರೆಯೇ ಜ್ಞಾನಿಗಳರಸನೆ ಎಲ್ಲಿ ನೋಡಲು ಸರಿಗಾಣೆ ವಿಜಯವಿ- ಠ್ಠಲ ಬಾ, ಅಪ್ರತಿಮಲ್ಲ ಬಾ ನೀ- ಹಸೆಯ ಜಗುಲಿಗೆ ಶೋಭಾನೆ 3
--------------
ವಿಜಯದಾಸ
ಹೊಡೆಯೊ ನಗಾರಿ ಮೇಲೆ ಕೈಯ |ಆನಂದಮದವೇರಿ ಗಡಗಡ ಪ.ಮೃಡಸಖನಪಾದ ಬಿಡದೆ ಭಜಿಂಸರಫ |ಬಿಡಿಸಿ ಕಾಯ್ವ ಜಗದೊಡೆಯ ಶ್ರೀ ಹರಿಯೆಂದು 1ವೇದಗಮ್ಯ ಸಕಾಲಾರ್ತಿನಿವಾರಕ |ಮೋದವೀವ ಮಧುಸೂದನ ದೊರೆಯೆಂದು 2ಗಾನಲೋಲ ತನ್ನ ಧ್ಯಾನಿಸುವರನೆಲ್ಲ |ಮಾನದಿಂದ ಕಾಯ್ವ ಶ್ರೀನಿಧಿ ಪರನೆಂದು 3ನಿಷ್ಠೆಯಿಂದಲಿ ಮನಮುಟ್ಟಿ ಭಜಿಸುವರ |ಕಷ್ಟವ ಕಳೆವ ಶ್ರೀ ಕೃಷ್ಣನು ಪರನೆಂದು 4ಈ ಪೃಥಿವಿಯೊಳಗೆ ವ್ಯಾಪಕನಾಗಿಪ್ಪ |ಶ್ರೀಪತಿ ಪುರಂದರವಿಠಲನು ಧಣಿಯೆಂದು 5
--------------
ಪುರಂದರದಾಸರು