ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ಭಾಗ್ಯವೆ ನಿನ್ನದೊ ವರ ಭೋಗಿಶಯನಾ ಪ ಸೌಭಾಗ್ಯವೇ ನಿನ್ನ ಮಹಿಮೆ ತಿಳಿಯುವ ಯೋಗಅ.ಪ ನೀನಿಲ್ಲದಾಸ್ಥಾನ ಈ ನಳಿನಜಾಂಡದೊಳಿಲ್ಲ ನೀನೆಲ್ಲವನು ಬಲ್ಲೆ ನಿನ್ನತಿಳಿಯಗೊಡದೆ ಹೀನಮಾನವ ನಾನು ನಿನ್ನನವರತ ಮರೆತರು ನೀ ಎನ್ನ ಮರೆಯದಲೆ ಎನ್ನೊಳಗೆ ಇಹೆ ಎಂಬ 1 ನಿಲ್ಲಿಸಲು ನಿಲ್ಲುವೆನು ಮಲಗಿಸಲು ಮಲಗುವೆನು ತಿಳಿಸಿದರೆ ನಾ ತಿಳಿವೆ ತಿಳುವಳಿಕೆ ನೀನೆ ತಿಳಿಯಗೊಡಿಸೋಎನ್ನಕ್ರಿಯೆಗಳನು ದೇಹದ ನೆಳಲಂತೆ ನಿನಗೆ ನಾನಿಹೆನಯ್ಯ ದೇವಾ 2 ಈ ಜಗತ್ತಿನೊಳಗೆಲ್ಲ ಪೂಜ್ಯಪೂಜಕ ಪೂಜ್ಯ ಪೂಜೋಪಕರಣದೊಳು ನೀನೆ ನಿಂತು ಮೂರ್ಜಗತ್ಪತಿಯೆ ನಿನ್ನನರ್ಚಿಸುವ ಭಜಕರಿಗೆ ನೈಜಸುಖ ವ್ಯಕ್ತಿಯನು ಮಾಡುತಲಿ ಪೊರೆವೇ 3 ನೀರು ತೃಣವನು ಕೊಡಲು ಹರುಷದಿಂದಲಿ ಗೋವು ಕ್ಷೀರವನು ಕರೆದು ಜನರ ಪೊರೆವಂತೆ ಸೂರಿಗಳು ಮಾಳ್ವ ಅಪರಾಧಗಳೆಣಿಸದಲೆ ಕರುಣದಿಂದಲಿ ಅವರ ಪೊರೆವ ಶ್ರೀಹರಿಯೆ4 ಪನ್ನಗಾಚಲನಿಲಯ ನೀನೆ ಎನ್ನೊಳಗಿರಲು ಬನ್ನಪಡಲ್ಯಾತಕೆ ಚಿನ್ಮಯರೂಪ ಎನ್ನಂಥಜೀವರಿನ್ನೆಷ್ಟೋ ಬ್ರಹ್ಮಾಂಡದೊಳು ಘನ್ನಭಕುತಿಯನೀಡೋ ಶ್ರೀಉರಗಾದ್ರಿವಾಸವಿಠಲ 5
--------------
ಉರಗಾದ್ರಿವಾಸವಿಠಲದಾಸರು
ಸಜ್ಜನರ ಸಂಗ ನಮಗೆಂದಿಗಾಗುವುದೊ |ದುರ್ಜನರ ಸಂಗದಿಂದಲಿ ನೊಂದೆ ಹರಿಯೆ ಪವಾಕು-ವಾಕಿಗೆ ಡೊಂಕನೆಣಿಸುವರು-ಮತ್ತೆ |ಪೋಕರಾಡಿದ ಮಾತು ನಿಜವೆಂಬರು ||ವಾಕ್‍ಶೂಲಗಳಿಂದ ನೆಡುವರು ಪರರ ನೀ |ಪೋಕುಮಾನವರಿಂದ ನೊಂದೆ ಹರಿಯೆ 1ತಾವೆ ತಮ್ಮನ್ನು ಕೊಂಡಾಡಿಕೊಳ್ಳುವರು |ನ್ಯಾಯವಿಲ್ಲದೆ ನುಡಿವರು ಪರರ ||ಭಾವಿಸಲರಿಯರು ಗುರುಹಿರಿಯರನಿಂಥ |ಹೇಯ ಮನುಜರಿಂದ ನೊಂದೆ ಹರಿಯೆ 2ಒಡಜನರನು ಕೊಂದು ಅಡಗಿಸಿಕೊಂಬರು |ಬಿಡಲೊಲ್ಲರು ಹಿಡಿದನ್ಯಾಯವ ||ನುಡಿದು ಕೇಡನು ಒಡನೆ ತಪ್ಪಿಸಿಕೊಂಬಂಥಕಡು ಮೂರ್ಖರಿಂದ ನಾ ನೊಂದೆನು ಹರಿಯೆ 3ತೊತ್ತಿನೊಡನೆ ತನ್ನ ಸ್ನೇಹ ಸರಸ ಮಾತು |ತೆತ್ತಿಗರೊಡನೆ ಪಂಥವ ನುಡಿವರು ||ಸತ್ತಬಳಿಕ ಸೃಷ್ಟಿ ಸಟೆಯೆಂಬರು ಇಂಥ |ಮತ್ತಮನುಜರಿಂದ ನೊಂದೆ ಶ್ರೀಹರಿಯೆ4ಇಷ್ಟುದಿನವು ನಿನ್ನ ನೆನೆಯದ ಕಾರಣ |ಕಷ್ಟಪಡುವ ಕೈಮೇಲಾಗಿ ||ಸೃಷ್ಟಿಗೊಡೆಯ ಶ್ರೀ ಪುರಂದರವಿಠಲನೆ |ಮುಟ್ಟಿ ಭಜಿಸಬೇಕು ಧೃಷ್ಟಮನವು ನಿನ್ನ 5
--------------
ಪುರಂದರದಾಸರು