ಒಟ್ಟು 6 ಕಡೆಗಳಲ್ಲಿ , 1 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ನೋಡಿರೋ ಸ್ವಯಂಪಾಕ ಸದಮಲಾನಂದಸುಖ ದ್ರುವ ಶುದ್ಧ ಮಾಡಿ ಹೃದಯಸ್ಥಳ ಇದು ಏಕಾಗ್ರ ನಿರ್ಮಳಾ ಸಾಧ್ಯಗೊಂಡು ಮನಾನುಕೂಲ ಸಿದ್ಧಿ ಇದೇವೇ ಸುಶೀಲಾ 1 ಭಕ್ತಿವೈರಾಗ್ಯೊಲಿಹೂಡಿ ನಿತ್ಯಙÁ್ಞನಾಗ್ನಿ ಒಡಗೂಡಿ ತತ್ವ ಪಂಚಪಾತ್ರೆಯಮಾಡಿ ಸತ್ಯಸಂಕಲ್ಪ ಇದೇ ನೋಡಿ2 ಸಕಲ ಸಾಮುಗ್ರಿಯ ಸಂಚಿತಾ ಪಕ್ವಆಯಿತು ಆಯಿತು ಮುಖ್ಯಮಹಿಪತಿಗಿದೆ ಸ್ವಹಿತಾ ಸುಖದೋರಿದ ಗುರುನಾಥಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾನಂದ ಶ್ರೀಗುರು ಕೃಪಾನಿಧೆ ಕಾಯೊ ಕರುಣಿಸಿ ಎನ್ನ ಪೂರ್ಣ ನೀ ಕಾಯೊ ಪರಮದಯಾನಿಧೆ ಧ್ರುವ ತೊಡಿಸಿ ಕರುಣಾನಂದ ಕವಚವ ಇಡಿಸೊ ಭಗುತಿ ವೈರಾಗ್ಯವ ದೃಢಗೊಳಿಸುವ ಙÁ್ಞನಪೂರ್ಣ ನೀ ಕಡಿಸೊ ಕಾಮಕ್ರೋಧವ ನಡೆಸಿ ನಿತ್ಯವಿವೇಕ ಪಥದಲಿ ಕೂಡಿಸೊ ನಿಜಸುಬೋಧವ ಬಿಡಿಸೊ ಭವಭವ ಮೂಲದಿಂದಲಿ ಬಡಿಸೊ ಹರುಷಾನಂದವ 1 ಬಟ್ಟೆ ಕೊಟ್ಟು ಕಾಯೊ ಸತ್ಸಂಗವ ಮುಟ್ಟಿಮುದ್ರಿಸೊದೃಷ್ಟಾಂತವ ಸಟೆಯ ಮಾಡೊ ಅವಿದ್ಯವ ನಿಷ್ಠತನ ನೆಲೆಗೊಳಿಸಿ ಕಾಯೊ ನೀ ಇಟ್ಟು ಶಿರದಲಿ ಅಭಯವ 2 ಭಿನ್ನವಿಲ್ಲದೆ ನೋಡಿ ಎನ್ನನು ಧನ್ಯಗೈಸೊ ನೀ ಪ್ರಾಣವ ಕಣ್ದೆರಿಸಿ ಅಣುರೇಣುದಲಿ ಪೂರ್ಣಖೂನದೋರೊ ಸಾಕ್ಷಾತವ ಎನ್ನೊಳಗೆ ನಿಜಾನಂದ ಸುಖದೋರಿ ಪುಣ್ಯಗೈಸೊ ನೀ ಜೀವನ ಚಿಣ್ಣಕಿಂಕರ ದಾಸ ಮಹಿಪತಿ ರಕ್ಷಿಸೊ ಸಂತತವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾನೆ ತಾನಾದನಮ್ಮಾ ಎನ್ನೊಳು ಘನಬ್ರಹ್ಮ ಧ್ರುವ ಕಣ್ಣಿಲೆ ನೋಡಲಿಕ್ಕೆ ಕಣ್ಣಿನೊಳಾದನಮ್ಮ ಕಣ್ಣಿಗೆ ಕಣ್ಣಾಗಿ ಪೂರ್ಣ ಕಾಣಿಸಿದಾನಂದೋಬ್ರಹ್ಮ ಅಣುರೇಣುದೊಳು ವ್ಯಾಪಿಸಿ ಜನ ಮನ ದೊಳು ತುಂಬಿಹ ತನುಮನದೊಳು ತಾನೆತಾನಮ್ಮ 1 ಎತ್ತ ನೋಡಿದತ್ತ ಸುತ್ತ ಸೂಸುವನಮ್ಮ ನೆತ್ತಿ ಒಳಗೆ ಪೂರ್ಣ ಮೊತ್ತವಾದ ಪರಬ್ರಹ್ಮ ಅನುದಿನ ಸಂತತ ಸದ್ಗುರು ಪೂರ್ಣ ಅಂತರಾತ್ಮದೊಳಗಿಹನಮ್ಮ 2 ನಾನು ನಾನೆಂಬುದಿದು ಇಲ್ಲದಂತಾಯಿತು ನಮ್ಮ ತಾನೆ ತಾನಾದ ನಿಜ ಓಮಿತ್ಯೇಕಾಕ್ಷರ ಬ್ರಹ್ಮ ಚೆನ್ನಾಗಿ ಮಹಿಪತಿಗೆ ಸನ್ಮತಸುಖದೋರಿತುಉನ್ಮನವಾಗ್ಯೆನ್ನೊಳಗೆ ಘನಸುಖ ಹೊಳೆಯಿತು ಸಂಭ್ರಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಲೇಸು ಲೇಸಾಯಿತು ನೋಡಿ ಭಾಸ್ಕರನ ಕೂಡಿ ಧ್ರುವ ಲೇಸು ಲೇಸಾಯಿತು ನೋಡಿ ಸ್ವಸುಖಗೂಡಿ ಆಶೆ ಪೂರಿಸಿದ ನೋಡಿ ಭಾಸಿ ನೀಡಿ 1 ಶಿರದಲಿ ಅಭಯನಿಟ್ಟ ಹರುಷವ ಕೊಟ್ಟ ಹರಿದು ಭವಜೀವ ಸುಟ್ಟ ಸ್ಮರಣಿಯೊಳಿಟ್ಟ 2 ಮಾಯದ ಮೊನೆ ಮುರಿದ ಭಯ ಹರಿದ ಸಾಯೋಜ್ಯಪದ ತೋರಿದ ದಯ ಬೀರಿದ 3 ಸದ್ವಾಕ್ಯವೆ ಬೋಧಿಸಿದ ಸದ್ಗುಣದ ಸದ್ಭಾವ ಭಕ್ತಿ ತೋರಿದ ಸದ್ಗೈಸಿದ 4 ಅನುಭವ ಸುಖದೋರಿದ ಸ್ವಾನುಭವದ ಮನವಿಗ್ಯೆನುಕೂಲಾದ ತಾನೆ ತಾನಾದ 5 ಸವಿಸುಖವನುಣಿಸಿದ ಸುವಿದ್ಯದ ರವಿ ಕೋಟಿ ಪ್ರಭೆಯ ತೋರಿದ ಅವಿನಾಶದ 6 ತರಳ ಮಹಿಪತಿ ಪ್ರಾಣ ಗುರುನಿಧಾನ ಹರುಷಗೈಸಿದ ಜೀವನ ಪರಮಪಾವನ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತ್ಸಂಗವು ಲೇಸು ಸ್ವಹಿತಕೆ ಧ್ರುವ ನೆರಿಲವರನುದಿನ ಬಾಳುದು ಲೇಸು ಸರಸ ಸುಮಾತನೆ ಕೇಳುದು ಲೇಸು 1 ನೋಡಿದವರಾಚರಣೆಯ ಲೇಸು ಮಾಡಿದವರನು ಸರಣಿಯ ಲೇಸು 2 ಮಹಿಪತಿಗಿದೆ ಸುಖದೋರಿತು ಲೇಸು ವಿಹಿತಕ ವಿಹಿತಾಯಿತು ಬಲುಲೇಸು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸದ್ಗುರುವಿನ ಕೃಪೆ ಸದ್ಗತಿ ಸುಖದೋರಿತು ಧ್ರುವ ಮಸ್ತಕದ ಮ್ಯಾಲೆ ಅಭಯ ಹಸ್ತ ತಾವಿಡಲಿಕ್ಕೆ ಸ್ವಸ್ತಹೊಂದಿತು ಮನವು ವಸ್ತುದ ಸುಳವಿಲೆ 1 ಕರುಣಿಸಿ ನೋಡಲಿಕ್ಕೆ ಕರಗಿಹೋಯಿತು ಮಹಾಪಾಪ ಸೆರಗು ಸಿಲುಕಿತು ಸುಪಥ ಪರಮಾನಂದದ 2 ಹರುಷಾನಂದವಾಯಿತು ತರಳ ಮಹಿಪತಿಗೆ ಗುರುನಾಮಾಮೃತ ಸೇವಿಸಿ ವರಕೃಪೆಯಿಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು