ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಕ್ಕೊ ಇಲ್ಲೆ ಸಿಕ್ಕಿದ ಶ್ರೀಗುರು ಪರಬ್ರಹ್ಮ ತೆಕ್ಕಿಸಿಕೊಂಬುವ ಬನ್ನಿ ಅಖರದಿ ನಮ್ಮ ಧ್ರುವ ಎಂದಿಗೆ ಬಿಡಬಾರದಿನ್ನು ತಂದೆ ನಮ್ಮಪ್ಪನ ಹೊಂದಿ ಸುಖಿಯಾಗಬೇಕು ಭಕ್ತಪಾಲಿಪನ ವಂದಿಸಬೇಕಿಂದು ಸಹಸ್ರಳದಲಿಪ್ಪನ ಸಂದೇಹವಿಲ್ಲದೆ ನೋಡಿ ಸ್ವರ್ಗಕೆ ಸೋಪಾನ 1 ಹರುಷವಾಯಿತು ಎನಗೆ ಧರೆಯೊಳಿಂದು ನೋಡಿ ಕರುಣಾಳು ಗುರುಮೂರ್ತಿಯ ಸ್ತುತಿಸ್ತವನ ಪಾಡಿ ಎರಡಿಲ್ಲದೆ ಶ್ರೀಚರಣ ವರಕೃಪೆಯ ಬೇಡಿ ಶಿರಸಾ ನಮಿಸಿದೆ ಗರ್ವಾಂಹಕಾರ ಈಡ್ಯಾಡಿ2 ಲೇಸುಲೇಸಾಯಿತು ನಮ್ಮ ವಾಸುದೇವನ ಕಂಡು ಭಾಸ್ಕರಕೋಟಿ ತೇಜನ ಸ್ಮರಣಿಯ ಸವಿಯುಂಡು ವಾಸನೆ ತೃಪ್ತ್ಯಾಯಿತು ಶ್ರೀಯೀಶನಾ ಮನಗಂಡು ದಾಸಮಹಿಪತಿಗಾನಂದವಾಯಿತು ಸದ್ಗತಿ ಸೂರೆಗೊಂಡು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯಪದುಮನಾಭನಪಾದಭಜನೆ ಸುಖವಯ್ಯಪ.ಕಲ್ಲಾಗಿ ಇರಬೇಕು ಕಠಿಣ ಭವತೊರೆಯೊಳಗೆಬಿಲ್ಲಾಗಬೇಕು ಬಲ್ಲವರ ಒಳಗೆ ||ಮೆಲ್ಲನೇ ಮಾಧವನ ಮನದಿ ಮೆಚ್ಚಿಸಬೇಕುಬೆಲ್ಲವಾಗಿರಬೇಕು ಭಕುತಜನರೊಳಗೆ 1ಬುಧ್ಧಿಯಲಿ ತನ್ನ ಮನ ತಿದ್ದುತ್ತಲಿರಬೇಕುಮುದ್ದಾಗಬೇಕು ಮುನಿಯೋಗಿಗಳಿಗೆ ||ಮಧ್ವಮತದಬ್ಧಿಯೊಳು ಮೀನಾಗಿ ಇರಬೇಕುಶುದ್ಧ ಭಕುತಿಯಸುಕೃತಉಣಲುಬೇಕು2ವಿಷಯ ಭೋಗದ ತೃಣಕೆ ಉರಿಯಾಗಿ ಇರಬೇಕುಕುಶಲದಲಿ ಶ್ರೀ ಹರಿಯ ನೆನೆಯಬೇಕು ||ವಸುಧೆಯೊಳು ನಮ್ಮ ಪುರಂದರವಿಠಲನಹಸನಾಗಿ ನೆನೆನೆನೆದು ಸುಖಿಯಾಗಬೇಕು 3
--------------
ಪುರಂದರದಾಸರು