ಒಟ್ಟು 3 ಕಡೆಗಳಲ್ಲಿ , 1 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾನು ಮಾಡಿದಕರ್ಮ ತನಗಲ್ಲದೆ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಏನ ಮಾಡಿದರು ಹಿಂದಿನ ಕರ್ಮವಲ್ಲದೆ ಪ.ಮರಳಿ ಮರಳಿ ನೀರ ಹೊಕ್ಕು ಹೊರಟರೆ ಇಲ್ಲ |ಹೊರೆ ಹೊತ್ತು ತಲೆಪರಟೆಗಟ್ಟಿದರೂ ಇಲ್ಲ ||ಬರಿಯೆ ಭೂಮಿಯ ಕೆದರಿ ತೋಡಿ ನೋಡಿದರಿಲ್ಲ |ಪರರಿಗೆ ಬಾಯ್ದೆರೆದರೇನೊ ಇಲ್ಲ 1ಬಲಿದ ದೇಹವನಲ್ಪ ಮಾಡಿ ಬೇಡಿದರಿಲ್ಲ |ನೆಲದಿ ಕೊಲೆಗಡುಕ ತಾನಾದರಿಲ್ಲ ||ತಲೆಯಲಿ ಜಡೆಗಟ್ಟಿ ಅಡವಿ ಸೇರಿದರಿಲ್ಲ - |ಕೊಳಲೂದಿ ತುರುಗಳನು ಕಾಯ್ದರಿಲ್ಲ 2ಧೀರತನ ಬಿಟ್ಟು ದಿಗಂಬರನಾದರು ಇಲ್ಲ |ಮೀರಿದ್ದರಾಹುತ ತಾನಾದರಿಲ್ಲ ||ವರದ ಶ್ರೀ ಪುರಂದರವಿಠಲನ ಚರಣವ |ಸ್ಮರಿಸುತಅನುದಿನ ಸುಖಿಯಾಗಿರಯ್ಯ3
--------------
ಪುರಂದರದಾಸರು
ಮಾನವಜನ್ಮ ದೊಡ್ಡದು - ಇದ |ಹಾನಿ ಮಾಡಲು ಬೇಡಿ ಹುಚ್ಚಪ್ಪಗಳಿರಾ ಪ.ಕಣ್ಣು ಕೈಕಾಲ್ಕಿವಿ ನಾಲಗೆ ಇರಲಿಕ್ಕೆ |ಮಣ್ಣುಮುಕ್ಕಿ ಮರುಳಾಗುವರೆ ||ಹೊನ್ನು ಹೆಣ್ಣಿಗಾಗಿ ಹರಿನಾಮಾಮೃತವನು |ಉಣ್ಣದೆ ಉಪವಾಸವಿರುವರೇನೋ 1ಕಾಲನವರು ಬಂದು ಕರಪಿಡಿದೆಳೆವಾಗ |ತಾಳು ತಾಳೆಂದರೆ ಕೇಳುವರೆ ? ||ವೇಳೆ ಹೋಗದ ಮುನ್ನ ಧರ್ಮವ ಗಳಿಸಿರೊ |ಸುಳ್ಳಿನ ಸಂಸಾರ ಸುಳಿಗೆ ಸಿಲುಕಬೇಡಿ 2ಏನು ಕಾರಣ ಯದುಪತಿಯನು ಮರೆತಿರಿ |ಧ್ಯಾನ್ಯ - ಧನ -ಸತಿ - ಸುತರಿವು ನಿತ್ಯವೆ? ||ಇನ್ನಾದರು ಶ್ರೀ ಪುರಂದರವಿಠಲನ |ಚೆನ್ನಾಗಿ ಭಜಿಸಿ ನೀವ್ ಸುಖಿಯಾಗಿರಯ್ಯ 3
--------------
ಪುರಂದರದಾಸರು
ಹರಿಯ ಚರಣವೆಂಬ ಸುರಧೇನವನುಗುರುಬೋಧೆಯೆಂಬ ಕಣ್ಣಿಯಲಿ ಕಟ್ಟಿರಯ್ಯಪ.ಭಕುತಿಯೆಂಬ ಕರುವನೆ ಬಿಟ್ಟು ನಿರುತ ವಿರಕುತಿಯೆಂಬ ಚೆನ್ನದಳಿಯ ಹಾಕಿ ||ಯುಕುತವಾದ ನಿತ್ಯಕಾಯ ಚರಿಗೆಯೊಳುಮುಕುತಿನಾಮಾಮೃತ ಕರೆದುಕೊಳ್ಳಿರಯ್ಯ 1ಕಾಮ ಕ್ರೋಧ ಲೋಭ, ಮೋಹ ಮದ ಮತ್ಸರಗಳೆಂಬಹಮ್ಮೆಂಬ ಕುರುಳನೆ ತಾಳಿ ಹಾಕಿ ||ತಾಮಸ ಜ್ಞಾನಾಗ್ನಿ ಪುಟಗೈದು ಇಂದ್ರಿಯನೇಮದ ನೀರ ಬೆರಸಿ ಕಾಯಲಿಡರೊ 2ಶಾಂತಗುಣವೆಂಬ ಹದನರಿತು ಆರಿಸಿ ಮತ್ತೆಭ್ರಾಂತಮನ ಮಜ್ಜಿಗೆಯ ಹೆಪ್ಪನಿಕ್ಕಿ ||ಕಾಂತವಿಷ್ಣು ಮಾಯಾಮಂಥದಿ ಶೋಧಿಸಿ ಸಿ -ದ್ಧಾಂತವೆಂಬ ಕಡೆಗೋಲ ನೇಣನೆ ಪಿಡಿದು 3ಪರಬೊಮ್ಮನೆನಿಪ ಬೆಣ್ಣೆಯ ಮುದ್ದಿಯನೆ ತೆಗೆದುಶರಣಮಣಿಯೆಂಬ ತುಪ್ಪವನೆ ಕಾಯಿಸಿ ||ಮರಣವೆಂಬ ನೊರೆ ತೆಗೆದೊಗೆದು ಅಮೃತವನಿರುತ ಹೃದಯವೆಂಬ ಕೊಡವನೆ ತುಂಬಿರೊ 4ಅನವರತ ಹರಿಸ್ಮರಣೆಯೆಂಬ ಬೀಸೂರಿಗೆಅನುವಾಗಿ ಕುಳಿತುಂಡು ಸುಖದಿ ತೇಗಿ ||ಚಿನುಮಯ ಚಿದಾನಂದ ಪುರಂದರವಿಠಲನಅನುದಿನ ನೆನೆ ನೆನೆದು ಸುಖಿಯಾಗಿರಯ್ಯ 5
--------------
ಪುರಂದರದಾಸರು