ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡುವ ಬನ್ನಿ ಸ್ವಾಮಿಯ ಅಂತರ್ಯಾಮಿಯ ಭಕ್ತಿಯ ದೃಢಯುಕ್ತಿಯ 1 ದೇವದೇವನ ಪೂರ್ಣ ನೋಡುವ ಸೇವೆಮಾಡುವ ಸರ್ವದಾ ಕೊಂಡಾಡುವ ನವವಿಧ ಭಕ್ತಿಯ ಮಾಡುವ ಭಾವವಿಡುವ 2 ತನು ಮನಧನ ಅರ್ಪಿಸಿ ಬಿಡುವ ಮನಗೂಡುವ ಪ್ರಾಣಾಯಾಮ ಮಾಡುವ ಅನುದಿನ ಸಾಧಿಸಿ ನೋಡುವ ಘನಗೂಡುವ 3 ಇಡಾಪಿಂಗಳ ಮಧ್ಯ ನೋಡುವ ನಡೆವಿಡುವ ನಡುಹಾದಿಗೂಡುವ ಒಡನೆ ಸ್ವಸುಖ ಪಡೆವ ಗೂಢ ನೋಡುವ 4 ಸವಿಸುಖಸಾರ ಸುರುತದೆ ದ್ರವಿಸುತದೆ ಠವಠವಿಸುತದೆ ರವಿಕೋಟಿಪ್ರಭೆ ಭಾಸುತದೆ ಆವಾಗಲ್ಯದೆ 5 ಏನೆಂದನಬೇಕನುಭವ ಖೂನದೋರುವ ಘನ ಮಳೆಗರೆವ ಸ್ವಾನುಭವದಲಿ ಸೇವಿಸುವ ಅನುಸರಿಸುವ 6 ಜಾಗಿಸುತ್ತದೆ ವಸ್ತುಮಯ ಬಗೆಬಗೆಯ ಯೋಗ ಇದೆ ನಿಶ್ಚಯ ಸುಗಮಸಾಧನ ಮಹಿಪತಿಯ ಸುಜ್ಞಾನೋದಯ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಫುಗಡಿ ಹಾಕಿ ಹೀಂಗ ಸುಗಮದಿಂದ ಬ್ಯಾಗ ತ್ರಿಗುಣ ತಿಗಡತನ ಬಿಟ್ಟು ಮಿಗಿಲಮಿರುವ್ಹಾಂಗ ಧ್ರುವ ಬಿಗಿದ ಗಚ್ಚಿಕಟ್ಟಿ ಜಗದೊಳ್ಹಾಕಿ ಫುಗಡಿ ಬಗೆದು ಸಾಧುಸಂಗದೊಳಾಡಿದಾಕಿ ಸುಗಡಿ ಇಗಡತನ ಬಿಟ್ಟು ನೀಗಿ ನಿಜಗೂಡಿ ದುಗುಡ ಭಾವೆಲ್ಲ ಬಿಟ್ಟು ಫುಗಡಿ ಫೂಯೆಂದಾಡಿ 1 ದೇಹ ಭಾವಮರೆದು ಫುಗಡಿ ಹಾಕಿ ಬ್ಯಾಗೆ ಗುಹ್ಯಗೂಢವಿದೆ ನೋಡಿ ರಾಜಯೋಗ ಸೋಹ್ಯದೋರಿಗೊಡುವ ಸದ್ಗುರು ನಿನ್ನೊಳೀಗ ಬಾಹ್ಯಾಂತ್ರದೊಳು ಭಾಸುತಿಹ್ಯ ಬ್ರಹ್ಮಭೋಗ 2 ಫುಗಡಿ ಇದೇ ನೋಡಿ ಯೋಗಸಾಧನ ಮಾಡಿ ಹುಗುವರಿಯನೇ ಹೋಕು ಜಗದ್ಗುರುವಿನ ಕೂಡಿ ಜಗದೀಶನ ಮಹಿಮೆ ಬಗೆಬಗೆಯ ಕೊಂಡಾಡಿ ಸುಗಮಸಾಧನವೆಂದು ಮಹಿಪತಿ ಬೆರೆದ ಕೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು