ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ಸರ್ವೋತ್ತಮಳೆ ಸಕಲ ಜನಕಾಧಾರೆ ಕಾಮಿತಾರ್ಥವನೀವ ಕರುಣಿ ಭೂದೇವಿ ಪ ಹರಿಯ ಪಾದದಲುದಿಸಿ ಹರಿಗೆ ವಧುವೆನಿಸಿ ಹರಿಗೆ ಸುತೆಯನು ಇತ್ತು ಹಿರಿಯಳಾದೆ ಹರಿನಾಮ ಕೀರ್ತನೆಯ ಹೊರೆವ ಧಾರುಣಿ ನಿನ್ನ ಮೊರೆಹೊಕ್ಕೆ ಮರೆಯದಿರು ಕರುಣದೋರೆನಗೆ 1 ಕ್ಷಮೆ ದಮೆಯು ಶಾಂತ ಸದ್ಗುಣವೊಪ್ಪುವಳೆ ನಿನಗೆ ಭ್ರಮೆಬಟ್ಟು ಭೂಭುಜರು ಕಡಿದುಕೊಳುತಿಹರು ಅಮಿತ ಮಹಿಳೆ ನಿನ್ನ ನಿಜವ ಬಲ್ಲವರಾರು ತಮಗೆ ಋಣವಿದ್ದುದನು ಕೊಂಡೊಯ್ವರಲ್ಲದೆ 2 ಚಿನ್ನ ಭಂಡಾರಗಳು ನಿನ್ನೊಡಲೊಳೊಪ್ಪಿದವು ಉನ್ನಂತ ರತುನಗಳು ನಿನ್ನೊಳಡಗಿಹವು ಅನ್ನ ಪಾನಂಗಳಿಗೆ ಬೀಜ ಮೂಲವೆ ನೀನು ನಿನ್ನ ಮರೆತಿಹ ಜನಕೆ ಮುನ್ನ ಸುಖವುಂಟೆ 3 ಒಬ್ಬ ರಾಯನ ಗೆಲುವೆ ಒಬ್ಬ ರಾಯನಿಗೊಲಿವೆ ಒಬ್ಬನಿಗೆ ಮೈಯ ನೀನು ಕೊಡುವೆ ಒಬ್ಬರಾದರು ನಿನ್ನ ನಿಜದಿ ಬಾಳ್ದಪರಿಲ್ಲ ಗರ್ಭಜಾತನ ಹರಿಯ ಕೈಯ ಕೊಲಿಸಿದೆಲಾ 4 ಅಂಬುಧಿಯೆ ವಸನಗಳು ಕುಂಭ ಕುಚಗಳೆ ಗಿರಿಯು ಸಂಭ್ರಮದ ನದಿ ಕಾಲುವೆ ನಿನ್ನ ಬೆವರುಗಳು ಎಂಭತ್ತನಾಲ್ಕು ಲಕ್ಷ ಜೀವರಾಶಿಗಳೆಲ್ಲ ತುಂಬಿಕೊಂಡಿರುತಿಹುದು ಅಂಗೋಪಾಂಗದಲಿ 5 ಮೂಢನಾದೆನು ನಿನ್ನ ಬೇಡಿಕೊಂಬರೆ ಮನದಿ ರೂಢಿ ದೇವತೆಯೆ ಮಾಡು ದಯವನು ನೀನು ಮನದಭೀಷ್ಟವನೆಲ್ಲ ಪಾಡು ಪಂಥವು ಬೇಡ ಪಡೆದ ಮಗನೊಡನೆ 6 ನಂಬಿದೆನು ನಾ ನಿನ್ನ ಕುಂಭಿನಿಯೆ ಕೈವಿಡಿದು ಇಂಬಾದ ಪದವಿಯನು ಸಂಭ್ರಮದಿ ಕೊಡುತ ಬೆಂಬಡದೆ ವರಾಹತಿಮ್ಮಪ್ಪ ಕರುಣದಲಿ ಹಂಬಲಿಪ ತೆರದಿಂದ ಸಲಹುವುದು ಜಗದಿ 7
--------------
ವರಹತಿಮ್ಮಪ್ಪ
ತಾಳಲ್ಲಲ್ಲಲ್ಲಲ್ಯೋ ಮಾಸಾಳಲ್ಲಲ್ಲಲ್ಲಲ್ಯೋ ಪ ಹೆಚ್ಚಿದ ತಮನೆಂಬ ದನುಜ ವೇದವ ಕದ್ದುಬಚ್ಚಿಟ್ಟು ನೀರೊಳು ಮುಳುಗಿರಲುಮಚ್ಚ ರೂಪದಿಂದ ಪೋಗಿ ಅವನ ಕೊಂದಅಚ್ಯುತರಾಯನೆಂಬ ಮಾಸಾಳಮ್ಮ1 ಕೂರ್ಮ ರೂಪಿನಿಂದೆತ್ತಿದ ಗೋ-ವಿಂದನೆಂಬುವ ಮಾಸಾಳಮ್ಮ2 ವರಾಹ ರೂಪಿ ಮಾಸಾಳಮ್ಮ 3 ಲೇಸು ತಪ್ಪಿದನೆಂದು ಹಿರಣ್ಯಕ ತನಯನಘಾಸಿ ಮಾಡಲು, ಕಂಬ ಒಡೆದುದಿಸಿರೋಷದಿ ದೈತ್ಯನ ಕರುಳ ಕಿತ್ತ ನರಕೇಸರಿ ರೂಪಿನ ಮಾಸಾಳಮ್ಮ 4 ಆ ಮಹಾಸಿರಿಯ ಗರ್ವದಿ ಮುಂದರಿಯದೆಭೂಮಿಯನು ಬಲಿ ತಾನಾಳುತಿರೆನೇಮಿಸಿ ಎರಡೇ ಹೆಜ್ಜೆಯೊಳಳಕೊಂಡವಾಮನ ರೂಪಿನ ಮಾಸಾಳಮ್ಮ 5 ಕಾಮಧೇನುವಿಗಾಗಿ ಕಾರ್ತವೀರ್ಯಾರ್ಜುನಆ ಮಹಾಮುನಿಯ ಪ್ರಾಣಕೆ ಮುನಿಯೆತಾಮಸವಿಲ್ಲದೆ ಕ್ಷತ್ರಿಯರ ಸಂಹರಿಸಿದರಾಮ ಭಾರ್ಗವನೆಂಬ ಮಾಸಾಳಮ್ಮ 6 ಜನಕ ಸುತೆಯನು ಕದ್ದೊಯ್ಯಲು ಲಂಕೆಗೆಗಣಿತಾತೀತ ಶರಧಿಯ ಕಟ್ಟಿಘನ ಕೋಪದಿ ದಶಿಶಿರನ ಕತ್ತರಿಸಿದಇನಕುಲ ರಾಮನೆಂಬ ಮಾಸಾಳಮ್ಮ 7 ದೇವಕಿ ಬಸುರೊಳು ಬಂದು ಗೋಕುಲದಿಆವ ಕಾವ ಗೊಲ್ಲರ ಸಲಹಿಮಾವನ ಕೊಂದು ಮತ್ತೈವರ ಸಲಹಿದದೇವ ಕೃಷ್ಣನೆಂಬ ಮಾಸಾಳಮ್ಮ8 ಪತಿವ್ರತೆಯರ ವ್ರತವಳಿಯಬೇಕೆನುತಲಿಅತಿಶಯದಿ ತ್ರಿಪುರದ ಸ್ತ್ರೀಯರನುತ ಬೌದ್ಧ ರೂಪದಿ ಬಹು ಭಂಗಪಡಿಸಿದರತಿಪತಿಪಿತನೆಂಬ ಮಾಸಾಳಮ್ಮ 9 ಖುಲ್ಲ ಮನುಜರನು ಕೊಲ್ಲಬೇಕೆನುತಲಿಭಲ್ಲೆ ಹಿಡಿದು ತುರಗವನೇರಿಅಲ್ಲಲ್ಲೆ ಸೊಲ್ಲಡಗಿಸಿ ವಲ್ಲಭನೆನಿಸಿದಬಲ್ಲಿದ ಕಲ್ಕಿಯೆಂಬ ಮಾಸಾಳಮ್ಮ 10 ಮಂಗಳ ಮಹಿಮ ಭುಜಂಗ ಶಯನ ಕಾ-ಳಿಂಗ ಮರ್ದನ ದೇವೋತ್ತುಂಗಅಂಗಜಪಿತ ನೆಲೆಯಾದಿಕೇಶವ ಅಂತ-ರಂಗದೊಳಿರುವ ಮಾಸಾಳಮ್ಮ 11
--------------
ಕನಕದಾಸ
ಲಾಲಿಸಿ ರಘುವರನ ಚರಿತೆಯ ಸಾರ ಪೇಳುವೆ ಸುಖನಾಥನ ಪ ಶ್ರೀ ಲಲಾಮನು ಸುರರ ಮೊರೆಯನು ಭಾರ ಹರಿಸಲು ಲೀಲೆಯಲು ದಶರಥ ನೃಪಾಲನ ಬಾಲನೆನಿಸುತ ಅವತರಿಸಿದನು ಅ.ಪ. ಕುಶಿಸುತನ ಯಜ್ಞವ ರಕ್ಷಿಸಿ ಪಥದಿ ಋಷಿ ಪತ್ನಿಯ ಶಿಲಾರೂಪವ ಬಿಡಿಸಿದ ದೇವ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯ ಕರವನು ಕುಶಲದಲಿ ಪರಿಗ್ರಹಿಸಿ ಲೀಲೆಯ ನಸಮ ಭಾರ್ಗವನೊಡನೆ ತೋರಿದ 1 ತಂದೆ ವಾಕ್ಯವ ಪಾಲಿಸೆ ತಾ ಧರಣಿಗೆ ಬಂದ ಕಾರ್ಯವ ಸಲ್ಲಿಸೆ ಋಷಿಗಳಾಸೆ ತಂದು ತಾ ಮನಕಂಡು ವನಕೆ ಸತಿ ಸೋದರರ ಸಹಿತದಿ ಮುಂದೆ ಗಂಗೆಯ ದಾಟಿ ಭರದ್ವಾಜ ನಿಂದ ಸತ್ಕಾರವನು ಕೊಂಡನು2 ಚಿತ್ರಕೂಟದಲಿರಲು ವಿನಯದಿ ಬಂದು ಭಕ್ತ ಭರತನು ಬೇಡಲು ಪಾದುಕೆಯಿತು ಮತ್ತೆ ದಂಡಕವನ ಪ್ರವೇಶಿಸಿ ದೈತ್ಯರನು ಸಂಹರಿಸಿ ಶರಭಂಗ ಗಿತ್ತು ಮುಕ್ತಿಯ ಕುಂಭಸಂಭವ ನಿತ್ತ ದಿವ್ಯಾಸ್ತ್ರಗಳ ಪಡೆದನು 3 ವರಪಂಚವಟಿಯೊಳಗೆ ಶೂರ್ಪನಖಿಯು ದುರುಳ ಬುದ್ಧಿಯೊಳು ಬರೆ ಕಿವಿಮೂಗ ಕೊಯ್ಸಿ ಹರಿಣರೂಪದಿ ಬಂದ ದೈತ್ಯನ ಹರಣಗೈದಾಶ್ರಮಕೆ ತಿರುಗಲು | ಧರಣಿಸುತೆಯನು ಕಾಣದೆಲೆ ತಾ ನರರ ಪರಿಯಲಿ ಹಂಬಲಿಸಿದನು 4 ವನಜಾಕ್ಷಿ ವೈದೇಹಿಯ ಪುಡುಕುತ ಪಂಪಾ ಸನಿಹಕ್ಕೈತಂದು ವಾಲಿಯ ಸಂಹರಿಸ್ಯವನ ಅನುಜ ಸುಗ್ರೀವನಿಗೆ ಹರುಷದಿ ವಿನುತ ವಾನರ ರಾಜ್ಯದೊಡೆತನ ವನು ಕರುಣಿಸಿದ ಬಳಿಕ ಜಾನಕಿ ಯನು ಪುಡುಕೆ ಕಳುಹಿದನು ಕಪಿಗಳ 5 ಸ್ವಾಮಿಯ ಸ್ತುತಿಗೈಯುತ ಶ್ರೀ ಹನುಮಂತ ಆ ಮಹೋದದಿಯ ದಾಟುತ ಲಂಕೆಯ ಪೊಕ್ಕು ಭೂಮಿಜಾತೆಯ ಕಂಡು ರಾಮನ ಕ್ಷೇಮ ವಾರ್ತೆಯ ತಿಳುಹಿ ಬಹುಜನ ತಾಮಸರ ಸದೆಬಡಿದು ರಾವಣ ನಾ ಮಹಾ ನಗರಿಯನು ದಹಿಸಿದ 6 ಮರಳಿ ರಾಮನ ಬಳಿಗೆ ಬೇಗದಿ ಬಂದು ಮರುತ ಸುತನು ರಾಮಗೆ ಸೀತೆಯ ಕ್ಷೇಮ ವರುಹಿ ಚೂಡಾಮಣಿಯ ನೀಡಲು ಕರದಿ ಕೈಕೊಂಡದನು ನೋಡುತ ನರರ ಪರಿಯಲಿ ಹರುಷಬಾಷ್ಪವ ಸುರಿಸಿದನು ಶ್ರೀ ಕರಿಗಿರೀಶನು 7
--------------
ವರಾವಾಣಿರಾಮರಾಯದಾಸರು
ಅಂಜನಾಸಂಜಾತ ಮುಖ್ಯ -ಪ್ರಾಣನೇ ಹನುಮಂತನೇ ಪ್ರಾಣನೇ ಹನುಮಂತನೇಪ್ರಾಣನೇ ಹನುಮಂತನೇ ಬಹು ಬಲವಂತನೇಪರಾಘವನಾಜೆÕಯ ತಾಳ್ದು ಸಾಗರವ ದಾಟಿದನೇ |ಸಾಗರವ ದಾಟಿದನೇ ಬೇಗ ಲಂಕಿಣಿ ಗೆಲ್ದನೇಚಬೇಗ ಲಂಕಿಣಿ ಗೆಲ್ದನೇ |ಪೋಗಿ ಲಂಕೆಯೊಳ್ ತಿರಿದನೇ1ಧರಣಿಸುತೆಯನು ಹುಡುಕಿ ಕಾಣದೆ |ಪುರವನೊಯ್ಯುವೆನೆಂದನೆ |ಪುರವನೊಯ್ಯುವೆನೆಂದನೆ |ಮರಳಿ ಸೀತೆಯ ಕಂಡನೇ |ಮರಳಿ ಸೀತೆಯ ಕಂಡನೇ |ಯೆರಗಿ ಉಂಗುರವಿತ್ತನೇ2ಚೂಡಕವ ಕೈಗೊಂಡು ಬರಲಾ |ನೋಡಿ ಬನವನು ಮುರಿದನೇ |ನೋಡಿ ಬನವನು ಮುರಿದನೇಖೋಡಿದೈತ್ಯರ ಗೆಲಿದನೇ |ಖೋಡಿದೈತ್ಯರ ಗೆಲಿದನೇ |ಕೈಗೂಡಿ ಸುಮ್ಮನೆ ಕುಳಿತನೆ3ಪುರವನೆಲ್ಲವ ಸುಟ್ಟು ದಹಿಸುತ |ತಿರುಗಿ ರಾಮನ ಕಂಡನೇ |ತಿರುಗಿ ರಾಮನ ಕಂಡನೇ |ಚೂಡಕವ ಕೈಗಿತ್ತನೇ |ಚೂಡಕವ ಕೈಗಿತ್ತನೇ |ಗೋವಿಂದ ದಾಸನ ಪೊರೆವನೆ4
--------------
ಗೋವಿಂದದಾಸ