ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಯಾಡಿ ನೀ ಬಂದ್ಯೋ ಹರಿ ಫುಲ್ಲಲೋಚನ ಕೃಷ್ಣ ಧ್ರುವ ಬಲಿ ಮಹಿಮರನೆಲ್ಲ ಸಂರಕ್ಷಿಸಿ ಮಲ್ಲದೈತ್ಯರ ಹಲ್ಲು ಮುರಿದು ನೀ ಬಂದ್ಯೊ 1 ಸುಗಮ ಸುಪಥದೋರಿ ನಿನ್ನ ಉಗಮ ಸಾರಿ ನೀ ಬಂದ್ಯೊ ನಗ ನೆಗಹಿ ನಿಂದು ಜಗದೋದ್ಧಾರವ ಮಾಡಿ ನೀ ಬಂದ್ಯೋ 2 ಶರಣ ರಕ್ಷಕನಾಗಿ ನಿನ್ನ ಕರುಣ ನೀ ಬೀರಿ ಬಂದ್ಯೋ ತರಳಗೊಲಿದು ಧÀರಿ ಮೂರಡಿಯೆನೆ ಮಾಡಿ ಪರಶುಧರನಾಗಿ ಆಡಿ ನೀ ಬಂದ್ಯೊ 3 ಮೊರೆಯ ಹೊಕ್ಕವರಿಗೆ ಪದ ಸ್ಥಿತವನಿತ್ತುನೀ ಬಂದ್ಯೊ ಸುರರ ಸ್ಥಾಪನೆ ಮಾಡಿ ತುರುಗಳ ಕಾಯಿದು ಪರ ನಾರೇರ ವ್ರತವಳಿದು ನೀ ಬಂದ್ಯೋ 4 ನೀನೆ ರಾವುತನಾಗಿ ನಿನ್ನ ಖೂನ ನೀ ದೋರಿ ಬಂದ್ಯೊ ದೀನ ಮಹಿಪತಿ ಸ್ವಾಮಿ ಭಾನುಕೋಟಿ ತೇಜ ನೀನೆ ನೀನಾಗೆನ್ನ ಹೊರಿಯಲು ಬಂದ್ಯೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ನೀನೆ ಸ್ವಾಮಿ ಶ್ರೀಗುರುನಾಥ ವರ್ಮ ತೋರಿಕೊಡುವ ನಿಮ್ಮ ಧರ್ಮಗುಣ ಪ್ರಖ್ಯಾತ ಧ್ರುವ ಧರೆಯೊಳು ಸರಿಯಗಾಣೆ ಗುರುಧರ್ಮದಿಂದಧಿಕ ಕರುಣಿಸಿ ಆನಂದದಿಂದ ತೋರುತಿಹ್ಯ ಬ್ರಹ್ಮಸುಖ ವರಮುನಿಗಳ ಪ್ರಿಯ ಶರಣಜನಪಾಲಕ ಪರಮ ಸುಪಥದೋರಿ ಹೊರೆವ ಪೂರ್ಣತಾರಕ 1 ಬಡವನಾಧಾರಿ ನೀನು ಒಡಿಯನಹುದೊ ನಿಶ್ಚಯ ಕೊಡುವ ಭಕ್ತಿ ಮುಕ್ತಿದಾತ ದೃಢಭಕ್ತರಾಶ್ರಯ ಒಡಲ ಹೊಕ್ಕಿಹೆ ನಿಮ್ಮ ಕಡೆಯಗಾಣಿಸೊ ನಮ್ಮಯ್ಯ ಪಿಡಿದು ನೀ ಎನ್ನ ಕೈಯ ಕೊಡು ತೋರಿ ನಿಮ್ಮ ಸೊಹ್ಯ 2 ಪೊಡವಿಯೊಳು ಕ್ಷಮೆ ಎನಗೆ ಕೊಡು ಕರುಣಾಕಟಾಕ್ಷ ನೋಡಿ ನಿಮ್ಮ ದಯದಿಂದ ನೀಡೊ ನಿಜ ಸುಭಿಕ್ಷ ಬಿಡದೆ ಎಂದೆಂದು ನೀನು ಮಾಡೊ ಸಂರಕ್ಷ ಮೂಢ ಮಹಿಪತಿಗಿನ್ನು ಪೂರಿಸೊ ಮನದಪೇಕ್ಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು