ಒಟ್ಟು 4 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಸಕೂಟ ವರ್ಣನೆ ಸಾಟಿಯುಂಟೆ ಶ್ರೀನಿವಾಸನ ದಾಸಕೂಟದ ಮ್ಯಾಳಕೆ ಬೂಟಕದ ಮಾತಲ್ಲ ಕೇಳಿರಿ ಭಜನೆ ಮಾಡುತ ತಾಳಕೆ ಪ. ವಾಸುದೇವನ ವರ್ಣಿಸಲು ಕಮಲಾಸನಾದಿ ಸುರೇಂದ್ರರು ದಾಸಜನರ ಸಮೂಹದೊಳಗಾವಾಸವಾಡುತ ನಲಿವರು ಸೂಸುತಿಹ ಗಂಗಾದಿನದಿಗಳು ಬ್ಯಾಸರದೆ ಬಂದಿರುವವು ಕೇಶವನ ಕೊಂಡಾಟ ಧರೆಯೊಳು ಮೀಸಲಳಿಯದೆ ಮಧುರವು 1 ಬಾರಿಸುತ ತಂಬೂರಿ ತಾಳವ ನಾರದರ ಸಂಸ್ಮರಿಸುತ ಭೂರಿ ಕಿಂಕಿಣಿ ಮದ್ದಳೆಯ ಶೃಂಗಾರ ರಸವನು ಸುರಿಸುತಾ ವಾರಿಜಾಕ್ಷನ ಪರಮಮಂಗಳ ಮೂರುತಿಯ ಮುಂದಿರಿಸುತ ಮಾರುತನ ಮತವರಿತು ಬಹುಗಂಭೀರ ಸ್ವರದಿಂದರುಹುತಾ 2 ಹಿಂದೆ ಗಳಿಸಿದ ಹಲವು ದುರಿತವು ಕುಂದುವುದು ನಿಮಿಷಾರ್ಧದಿ ಅಂದಿನಂದಿನ ದೋಷದುಷ್ಕøತವೊಂದು ನಿಲ್ಲದು ಕಡೆಯಲಿ ಇಂದಿರಾಧವ ಶೇಷ ಭೂಧರ ಮಂದಿರನು ಮಹ ಹರುಷದಿ ಮುಂದೆ ನಲಿವುತ ಮನಕೆ ಪೂರ್ಣಾನಂದವೀವನು ನಗುತಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭವ ಲಿಂಗದೇಹ ಭಂಗಾಗದೆ ಧ್ರುವ ಮಾಯಮೂಲಳಿಯದೆ ಮನಮೈತೊಳಿಯದೆ ದೇಹಭಾವಳಿದು ಸಂದೇಹಗಳಿಯದೆ 1 ಆಶೆಯನು ಕಳಿಯದೆ ವಾಸನೆಯ ತೊಳಿಯದೆ ಸೂಸುತಿಹ್ಯ ವ್ಯಸನ ವ್ಯಾಸಂಗವಳಿಯದೆ 2 ಗರ್ವಗುಣವಳಿಯದೆ ನಿರ್ವಿಗುಣ ಹೊಳಿಯದೆ ಮಹಿಪತಿಯ ಸರ್ವಮಯವಸ್ತು ತಿಳಿಯದೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು