ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಷ್ಟು ದಿನ ಈ ವೈಕುಂಠಎಷ್ಟು ದೂರವೊ ಎನ್ನುತಲಿದ್ದೆದೃಷ್ಟಿಯಿಂದಲಿ ನಾನು ಕಂಡೆಸೃಷ್ಟಿಗೀಶನೆ ಶ್ರೀರಂಗಶಾಯಿ ಪ ಎಂಟು ಏಳನು ಕಳೆದುದರಿಂದತುಂಟರೈವರ ತುಳಿದುದರಿಂದಕಂಟಕನೊಬ್ಬನು ಅಳಿದುದರಿಂದಭಂಟನಾಗಿ ಬಂದೇ ಶ್ರೀರಂಗಶಾಯಿ1 ವನ ಉಪವನಗಳಿಂದಘನ ಸರೋವರಗಳಿಂದಕನಕ ಗೋಪುರಗಳಿಂದಘನಶೋಭಿತನೆ ಶ್ರೀರಂಗಶಾಯಿ2 ವಜ್ರವೈಢೂರ್ಯ ತೊಲೆಗಳ ಕಂಡೆಪ್ರಜ್ವಲಿಪ ಮಹಾದ್ವಾರವ ಕಂಡೆನಿರ್ಜರಾದಿ ಮುನಿಗಳ ಕಂಡೆದುರ್ಜನಾಂತಕ ಶ್ರೀರಂಗಶಾಯಿ 3 ರಂಭೆ ಊರ್ವಶಿ ಮೇಳವ ಕಂಡೆತುಂಬುರು ನಾರದರ ಕಂಡೆಅಂಬುಜೋದ್ಭವ ಪ್ರಮುಖರ ಕಂಡೆಶಂಬರಾರಿ ಪಿತನೆ ಶ್ರೀರಂಗಶಾಯಿ4 ನಾಗಶಯನನ ಮೂರುತಿ ಕಂಡೆಭೋಗಿ ಭೂಷಣ ಶಿವನನು ಕಂಡೆಭಾಗವತರ ಸಮ್ಮೇಳವ ಕಂಡೆಕಾಗಿನೆಲೆಯಾದಿಕೇಶವ ಶ್ರೀರಂಗಶಾಯಿ 5
--------------
ಕನಕದಾಸ
ನಾರಸಿಂಹನೆ ಘೋರರೂಪನೆ ತೋರು ಮೊಗವನು ಕರುಣದಿ ಚಾರುಗಾತ್ರನೆ ಭೀರು ತ್ರಾತನೆ ಸೇರಿಹೆನು ತವ ಚರಣದಿ ಪ ಘೋರತರ ಸಂಸಾರ ಶರಧಿಯ ತೀರ ಗಾಣೆನು ಧೀರನೆ ಪಾರಗಾಣಿಪೊದ್ಯಾರ ಕಾಣೆನುಯಾ ಭವರುಜಹಾರನೆ 1 ದಾನವನ ತಪಜ್ವಾಲೆಯಿಂದಲಿ ಮಾನುಷರು ಕಳವಳನೆಯಾ ಸೂನುತಾರಣ ನೆವದಿ ದಿವಿಜರ ಮಾನವನು ನೆರೆ ಕಾಯ್ದೆಯಾ 2 ದುಷ್ಟಸಂಹರ ಶಿಷ್ಟಪಾಲಕನೆಂಬ ಬಿರುದೆತ್ತಿಹುದಲಾ ಸೃಷ್ಟಿಗೀಶನೆ ಕಷ್ಟ ತೊಲಗಿಸೋ ಶಿಷ್ಟ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ಭ್ರಷ್ಟನೆಂದಿಸಿದೆಯಾ ಕೃಷ್ಣನೇ ಎನ್ನ ಪ ಭ್ರಷ್ಟನೆಂದಿನಿಸಿದ್ಯಾ ಸೃಷ್ಟಿಗೀಶನೆ ಪರ ಮೇಷ್ಟಿ ಜನಕ ದಿವ್ಯ ದೃಷ್ಟಿ ಕೊಡದಲೆನ್ನ ಅ.ಪ ನರರ ಸಂದಣಿಯಲಿ ವಿರತಿ ಮಾತಾಡಿಸಿ ಮಾರನಾಟದಿ ಮನವೆರಗುವಂದದಿ ಮಾಡಿ 1 ಕಾಷಾಯ ದಂಡಿ ವೇಷವ ಧರಿಸಿ ಮುನ್ನ ಮೋಸಪಡಿಸಿ ಸ್ತ್ರೀಯರಾಸೆ ಬಿಡಿಸಿದೆನ್ನ 2 ಸೀಲರಂದಲಿ ಜಪಮಾಲೆ ಕೈಯಲಿ ಪಿಡಿಸಿ ಕಾಳಿಮರ್ಧನ ದೇವ ಮಲಿನ ಮನವನಿತ್ತು 3 ಕರವಶವನೆ ಮಾಡಿ ಸರಸದಿಂದ ಕಲೆಹಾಕಿ ಮರೆಸಿ ನಿನ್ನನೆ ಕೃಷ್ಣ ನಿರಯಭಾಗಿಯ ಮಾಡಿ4 ಕರುಣವಾರಿಧಿ ಎನ್ನ ಮರುಳುಗೊಳಿಸಿ ವಿಷಯ ಶರಪಂಜರದಿ ಬಿಗಿದು ಚರಣ ತೋರಿಸದೆಲೆ 5 ಮದ ಮತ್ಸರ ಕಾಮ ಕ್ರೋಧ ಲೋಭ ಮೋಹ ಮಾಧವ 6 ಪತಿತಾಗ್ರಣಿಯು ನಾನು ಪತಿತ ಪಾವನ ನೀನು ಸತತ ನಿನ್ನಯ ಸಂಸ್ಮøತಿಯ ನೀಡದಲೆನ್ನ 7 ದ್ವಿಜ ಅಜಮಿಳ ನಿಜನಾಮದಿಂದಲಿ ಸುಜನನೆಂದೆನಿಸಿದ್ದು ನಿಜತೋರದಲೆನ್ನ 8 ಹೀನರೊಳೆನ್ನೆಂಥ ಹೀನ ಜನರ ಕಾಣೆ ಸಾನುರಾಗದಿ ಕಾಯೊ ಶ್ರೀ ನರಹರಿಯೆ 9
--------------
ಪ್ರದ್ಯುಮ್ನತೀರ್ಥರು
ರಕ್ಷಿಸು ಗುರುನಾಥಾ ಕೇಶವ ನೀನೇ ರಕ್ಷಿಸು ಸಿರಿನಾಥಾ ಪ ಅಕ್ಷಯ ದ್ರೌಪದಿಗಿತ್ತ ಶ್ರೀಕಾಂತನೇ ಶಿಕ್ಷಕ ನೀನೇ ಕನಕ ವಂದಿತನೇ ಅ.ಪ. ತರಳ ಪ್ರಲ್ಹಾದನಿಗೊಲಿದು ಧಾರುಣಿಯಲ್ಲಿ ಮೆರೆದ ಕಶ್ಯಪುವನ್ನು ಕೆಡಹಿದ ಹರಿಯೇ ದುರುಳ ಕಂಸನು ತನ್ನ ಪ್ರಜೆಗಳ ಹಿಂಸಿಸೆ ತರಿದು ಸಜ್ಜನರನ್ನು ಪೊರೆದ ಶ್ರೀಧರನೇ 1 ಭಜಿಸಲು ಕನಕನು ಉಡುಪಿ ಗ್ರಾಮದಲಾಗ ರಜನಿ ಮಧ್ಯದಿ ದಾಸಗೊಲಿದ ಶ್ರೀ ಹರಿಯೇ ಗಜವನ್ನು ರಕ್ಷಿಸಿ ಬಿರುದನು ತೋರಿದ ಭಜಕರ ಲೋಲನೆ ನೆರೆ ನಾರಾಯಣನೇ2 ಕಷ್ಟವ ನೀಗಿ ತಾ ಶಿಷ್ಟರ ಸಲಹಲು ಶ್ರೇಷ್ಠ ಮೂರುತಿ ರಂಗ ಬಹರೂಪವೆತ್ತೀ ಶಿಷ್ಟರ ರಕ್ಷಿಸಿ ಭ್ರಷ್ಟರ ಕೆಡಹಿದ ಸೃಷ್ಟಿಗೀಶನೆ ರಂಗ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ಇಷ್ಟುಪಾಪವನು ಮಾಡಿದುದೆ ಸಾಕೊ |ಸೃಷ್ಟಿಗೀಶನೆ ಎನ್ನನುದ್ಧರಿಸಬೇಕೊ ಪಒಡಲಕಿಚ್ಚಿಗೆ ಪರರ ಕಡು ನೋಯಿಸಿದೆ ಕೃಷ್ಣ |ಕೊಡದೆ ಅನ್ಯರ ಋಣವನಪಹರಿಸಿದೆ |ಮಡದಿಯ ನುಡಿಕೇಳಿಒಡಹುಟ್ಟಿದವರೊಡನೆ |ಹಡೆದ ತಾಯಿಯ ಕೂಡಹಗೆಮಾಡಿದೆ1ಸ್ನಾನಸಂಧ್ಯಾನಜಪ ಮಾಡದಲೆ ಮೈಗೆಟ್ಟೆ |ಜ್ಞಾನಮಾರ್ಗವನಂತು ಮೊದಲೆ ಬಿಟ್ಟೆ ||ಏನ ಹೇಳಲಿ ಪರರ ಮಾನಿನಿಗೆ ಮನಸಿಟ್ಟೆ |ಶ್ವಾನ- ಸೂಕರನಂತೆ ಹೊರೆದೆ ಹೊಟ್ಟೆ2ವ್ರತ ನೇಮ ಉಪವಾಸ ಒಂದು ದಿನ ಮಾಡಲಿಲ್ಲ |ಅತಿಥಿಗಳಿಗನ್ನವನು ನೀಡಲಿಲ್ಲ |ಶೃತಿ ಶಾಸ್ತ್ರ ಪುರಾಣ ಕಥೆಗಳನು ಕೇಳಲಿಲ್ಲ |ವೃಥವಾಗಿ ಬಹುಕಾಲ ಕಳೆದನಲ್ಲ 3ಶುದ್ಧ ವೈಷ್ಣವ ಕುಲದಿ ಉದ್ಭವಿಸಿದೆನೋ ನಾನು |ಮಧ್ವ ಮತಸಿದ್ದಾಂತ ಪದ್ಧತಿಗಳ ||ಬುದ್ಧಿಪೂರ್ವಕ ತಿಳಿದು ಪದ್ಮನಾಭನು ದಿನದಿ |ಕದ್ದುಂಡು ಕಾಯವನು ವೃದ್ಧಿಮಾಡಿದನಯ್ಯ 4ತಂದೆ - ತಾಯ್ಗಳ ಸೇವೆ ಒಂದು ದಿನ ಮಾಡಲಿಲ್ಲ |ಮಂದಭಾಗ್ಯದಬವಣೆತಪ್ಪಲಿಲ್ಲ ||ಹಿಂದೆ ಮಾಡಿದ ದೋಷ ಬಂದುಳಿಯದರುಹಿದೆನು |ತಂದೆ ಪುರಂದರವಿಠಲ ಮುಂದೆನ್ನ ಕಾಯೊ 5
--------------
ಪುರಂದರದಾಸರು