ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಸೇವೆಯನೊಂದನಿತ್ತು ಸಲಹೋಎನ್ನ ಮನ ನಿನ್ನಲ್ಲಿ ನಿಲುವಂತೆ ಮಾಡಿ ಪ ಅನ್ನವನು ಬೇಡಿಕೊಂಬುವದೆಂತು ವಿಪುಳ ವಿಷವನ್ನು ಕುಡಿದಿಹ ನೀಲಕಂಠನೊಡನೆಸನ್ನುತಾಂಬರವ ಬೇಡುವುದೆಂತು ಕರಿಚರ್ಮ-ವನ್ನು ಪೊದೆದಿಹ ದಿಗಂಬರನೊಡನೆ ಶಂಭೋ 1 ಮಿರುಗುವಾಭರಣಗಳ ಬೇಡಿಕೊಂಬುದೆಂತುಉರಗಕುಂಡಲಹಾರ ವಲಯನೊಡನೆಪರಮ ಭಾಗ್ಯವ ಬೇಡಿಕೊಂಡೆ ನಾನೆಂತು ವಿಧಿಶಿರದಿ ಭಿಕ್ಷವ ಬೇಡಿ ತಿರಿದುಂಡನೊಡನೆ 2 ಕರಿತುರಗ ಮುಖ್ಯವಾಹನವ ಬೇಡುವುದೆಂತುನಿರುತ ಬಸವನ ಮೇಲೆ ಚರಿಪನೊಡನೆಕರುಣದಿಂದೆನಗೆ ಕೊಡಲೇನುಂಟೊ ಕೆಳದಿಪುರ-ದೆರೆಯ ರಾಮೇಶ ಶ್ರೀಕರ ಪಾರ್ವತೀಶ 3
--------------
ಕೆಳದಿ ವೆಂಕಣ್ಣ ಕವಿ