ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಮನಾವತಾರ ವಾಮನನನು ನೆನೆ ಹೇ ಮನವೇ ವಟು ವಾಮನನನು ನೆನೆ ಹೇ ಮನವೇ ಕಾಮಪೂರಣ ಲಕ್ಷ್ಮೀಧಾಮನ ಮರೆಯದೆ ಪ. ಶ್ಯಾಮಸುಂದರ ಸುರ ಪ್ರೇಮದಿ ಕಶ್ಯಪ ಧಾಮವಾ ಬೆಳಗುತ ಬಂದ ಭೂಮಿಯನಳದ ಸುತ್ರಾಮಗಿತ್ತ ನಿ ಸ್ಸೀಮ ಸಾಹಸ ಗೋವಿಂದ ನೀ ಸಲಹೆಂದು 1 ಬಲಿಯ ದೃಢಕೆ ಮೆಚ್ಚಿ ಸಲಹುತ ಮುಂದಿನ ವಲಭಿದಾಗುವೀ ನೀನೆಂದ ಕಲುಷಾಪಹಪದಕಮಲವ ಶಿರದೊಳು ನಿಲಿಸಿ ಬಾಗಿಲೊಳು ನಿಂದವ ನೀನೆಂದು 2 ಶ್ರೀ ಭೂಮಿಯುತ ಮುಕ್ತಾಭರಣಾಶ್ರಿತ ಸೌಭಾಗ್ಯಕರ ಲೀಲಾ ಆಭೀರರ ಕನ್ನೆಯರೊಲಿಸಿದ ಪದ್ಮ- ನಾಭ ವೆಂಕಟಪತಿ ಪರಮ ಪುರುಷನೆಂದು 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಿಂಧು ಶೋಷಿಪೇಕ್ಷಣ ಕಲ್ಯಾಣಗಾತ್ರ ಪ ಪವಮಾನ ಪ್ರಿಯ ಪುತ್ರ ಕಾರುಣ್ಯನೇತ್ರ ಅ.ಪ. ನಿರವದ್ಯ ಭೂದೇವ ನಿರುತ ಸುಖಭರಿತ ಭಾವ ಶರಣ ಜನರನು ಕಾವ ಶಪಥ ಭಾವ ಪರ ಸೇವಾ ನಿರುತ ಮಂಗಳ ಭಾವ ಸಂಜೀವ 1 ತನುಮನವ ಹರಿಗಿತ್ತ ಗುಣನಿಧಿ ಮಹಗುಪ್ತ ಅಣುಘನದಿ ಹರಿದೀಪ್ತ ತನುನೋಳ್ಪ ಶಕ್ತ ಘನ ಕೃಷ್ಣವರ್ಯಾಪ್ತ ಮನೋವಾಕ್ಕಾಯಸ್ತ ಗುಣಾಪೂರ್ಣಾ ಹರಿಕೃತ್ಯವನು ಎಣಿಪ ತೃಪ್ತ 2 ಬಲುಭಕ್ತಿ ಭಾರನತ ಬಲಿತ ವಿಜ್ಞಾನರತ ಲಲಿತ ಮಂಗಳಚರಿತ ನಲಿವನು ಪ್ರೀತ ಕ- ಮಲಾ ಅಪಹರ್ತ ಕಲ್ಯಾಣ ಸಂಭರಿತ ಪುಲ್ಲಾಕ್ಷ ಮಮನಾಥ ಕೃಷ್ಣಾಂಘ್ರಿದೂತ 3 ಪರಮ ಸೌಭಗ ಪೂಜ ಪರಭಕ್ತಿ ನಿವ್ರ್ಯಾಜ ಚರಿಸಿ ಶ್ರೀ ಗುರುರಾಜ ವರಕಲ್ಪಭೂಜ ಸರುವ ತತ್ವಗಳೋಜ ವಶಗೊಂಡ ಮಹರಾಜ ಸರುವ ಸಿದ್ಧಿಗೆ ದೊರಿ ಎನಿಪ ವಿರಜ 4 ಸಂತಾಪಹರ ಶಾಂತ ಸೌಭಾಗ್ಯಕರವಂತ ಸ್ವಾಂತದಲಿ ನಿಶ್ಚಿಂತ ಸರಸಿ ಶ್ರೀಮಂತ ಧ್ವಾಂತ ಹರ ಶ್ರೀ ಜಯೇಶವಿಠಲನ ಏಕಾಂತ ಪಂಥ ಬಿಡದಿರುವಂಥ ಪೂರ್ಣ ಜಯವಂತ 5
--------------
ಜಯೇಶವಿಠಲ