ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತಿತಪ್ಪಿ ನಡೆದೆಯಲ್ಲ ಶ್ರೀಲಕುಮೀ ಪತಿಯನು ನೆನೆಯಲಿಲ್ಲ ಹಿತವಾದ ಪಥವು ಸಂತತ ತೋರದೆ ನೀನು ಖತಿಗೊಂಡು ವೆಂಕಟಪತಿಯನು ನೆನೆಯದೆ ಪ ಕೃತ ತ್ರೇತ ದ್ವಾಪರ ಕಲಿಯುಗ ಚತುರ್ವಿಧ ಜೊತೆಯಾಗಿ ಪೋಗಲು ಸಾವಿರ ಬಾರಿಯು ಚತುರಾಸ್ಯ ಬ್ರಹ್ಮಗೆ ಹಗಲೊಂದು ಸಲುವುದು ಗತಿಯ ಕಾಣೆನು ಶ್ರುತಿಯ ಅಯುತ ಕಾಲದೊಳು 1 ಹಿಂದಣ ಭವದೊಳಗೆ ಬಂದ ಭವದೊಳಗೆ ಸಂ - ಬಂಧವಾಗಿಹ ಸತಿಯರೆಷ್ಟು ಮಂದಿಯೋ ಕಾಣೆ ಕಂದರನು ಪಡೆದುದಕೆ ಲೆಕ್ಕ ಸಂಖ್ಯೆಗಳಿಲ್ಲ ತಿಂದ ಅನ್ನವು ಮೇರುವಿಗಿಂತ ಇಮ್ಮಡಿಯು 2 ಕಾಯ ಬಿಡಿಸಿಕೊಂಬುದು ಜೀವ ಅಡಿಗಡಿಗೆ ಹುಟ್ಟುತ್ತ ಸಾವಾಗಯೆನ್ನುವನು ಕಾಲ ಮನದಿ ಬೇಸರಗೊಳಲು ಜಡತೆಕಿಕ್ಕದೆ ಮುಂದೆ ಕಡೆ ಹಾಯು ಮನವೆ 3 ಬಲೆಯ ಕಾಣದೆ ಪಕ್ಷಿ ಮೇವಿನಾಸೆಗೆ ಪೋಗಿ ತಲೆ ಸಿಕ್ಕಿ ಪ್ರಾಣವನು ಕಳಕೊಂಬ ತೆರನಂತೆ ಕುಲವೃಕ್ಷದೊಳಗಿರ್ದ ಫಲದ ಮಮತೆಗಳಿಂದ ಜಲಜನಾಭನ ಬಿಟ್ಟು ಹೊಲಬುದಪ್ಪಿತಲ 4 ಸ್ನಾನಕ್ಕೆ ಚಳಿ ಹುಟ್ಟಿ ಧ್ಯಾನಕ್ಕೆ ಮರವೆಯು ಮೌನಕ್ಕೆ ಕೋಪದ ಬೀಜವಂಕುರಿಸಿತು ದಾನಕ್ಕೆ ಲೋಭವು ಮಾನಕ್ಕೆ ಪಿಸುಣರು ಏನ ಮಾಡಿದರಿವರು ಬಿಡರಲ್ಲೊ ಮನವೆ 5 ಸಂಗಡದಿ ಬರುತಿಪ್ಪ ಶುಭಗಳನು ಕಡೆಗಿಟ್ಟು ಅಂಗಸುಖವ ತಾಳ್ದು ಗೊಂಗುಡಿಯ ಹೊದ್ದು ಕಂಗಳಿಗೆ ಚೆಲುವಾದ ಅಂಗನಾಮೋಹದಿ ಶ್ರೀ- ರಂಗನ ನಾಮದ ಅಂಗಿಯ ಸಡಲಿಸಿದೆ 6 ಹರಿಧ್ಯಾನ ಹರಿಪೂಜೆ ಹರಿನಾಮ ಕೀರ್ತನೆಯು ಹರಿಭಕ್ತಿ ನರ್ತನೆಯು ಹರಿಯ ಸೇವೆಗಳು ಎರವುದೋರದೆ ನೀನು ವರಾಹತಿಮ್ಮಪ್ಪನನು ಸ್ಥಿರವಾಗಿ ನಿಲುವಂತೆ ಕರಕೊಳ್ಳೊ ಮನವೆ 7
--------------
ವರಹತಿಮ್ಮಪ್ಪ
ಕೃಷ್ಣ ಮಂತ್ರವ ಜಪಿಸೊ - ಏ ಮನುಜ |ಕೃಷ್ಣ ಮಂತ್ರವ ಜಪಿಸೊ ಪ.ವೈಷ್ಣವೋತ್ತಮನಾಗಿ ವಿಷ್ಣುವೆ ಗತಿಯೆಂದು ಅಪಜಪತಪಾನುಷ್ಟಾನ ಸ್ನಾನಕ್ಕೆ ಈ ಮಂತ್ರ |ಕಪಟಬುದ್ದಿಗಳನ್ನು ಕಟ್ಟುವ ಮಂತ್ರ ||ಉಪದೇಶದಲಿ ಜ್ಞಾನಕೊಟ್ಟು ಸಲಹುವ ಮಂತ್ರ |ಸುಪವಿತ್ರ ಮಾಡಿ ಸ್ವರ್ಗ ಸೂರೆಗೊಡುವ ಮಂತ್ರ 1ಸಕಲ ಸಾಧನೆಗಳಿಗೆ ಸಾರಭೂತದ ಮಂತ್ರ |ನಿಖಿಳ ದೇವರಿಗೆಲ್ಲ ಸಾಕ್ಷಿ ಭೂತದ ಮಂತ್ರ ||ಭಕುತಿಯಲಿ ದ್ರೌಪದಿಯ ಭಜಿಸಿದ ಈ ಮಂತ್ರ |ಮುಕುತಿಯ ಕೊಟ್ಟು ಜನರ ಪೋಷಿಸುವ ಮಂತ್ರ 2ಭಾವಿಸಲಣುರೇಣು ಪರಿಪೂರ್ಣವಾದ ಮಂತ್ರ |ಜೀವಗಳಿಗೆಲ್ಲ ಸಂಜೀವ ಮಂತ್ರ ||ಪಾವನ ಮಾಡಿ ಪಾಲಿಪುದೀ ಮಂತ್ರ |ದೇವ ಪುರಂದರವಿಠಲ ಮಹಾ ಮಂತ್ರ 3
--------------
ಪುರಂದರದಾಸರು