ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯತಿಗಳ ಸ್ತುತಿ ಮಧ್ವಮುನಿಯೆ ಎನ್ನ ಉದ್ಧರಿಸಿನ್ನ ಪ. ಸದ್ಗುರುವೆ ನಿನ್ನ ಪದ್ಮಪಾದಗಳಿಗೆ ಕರ ಮಣಿ ಅ.ಪ. ವರಕಲ್ಪ ಕಲ್ಪದಲಿ ಹರಿಯ ಮೆಚ್ಚಿಸಿ ಸಿರಿವರನಲಿ ಜನಿಸಿ ವಾಯುವೆಂದೆನಿಸಿ ಸುರರೆಲ್ಲ ಮೊರೆಯಿಡೆ ಹರಿಯವತರಿಸಿ ಹರಿಯ ಸೇವೆಗೆ ನೀ ಮಾರುತಿ ಎನಿಸಿ ಶರಧಿ ಲಂಘಿಸಿ ಉಂಗುರ ಸೀತೆಗೆ ಇತ್ತು ದುರುಳನ ಪುರ ಸುರಮುಖನಿಗರ್ಪಿಸಿದೆ 1 ಚಂದ್ರವಂಶದಲಿ ಬಂದ್ಯೊ ಬಲಶಾಲಿ ನಂದಕಂದನ ಲೀಲೆ ಅಂದ ಪಾಡುತಲಿ ಬಂದಿತು ಕಲಹ ಅಲ್ಲಿ ದ್ವಂದ್ವ ಭಾಗದಲಿ ಅಂದು ಕೌರವರಲಿ ನಿಂದ್ಯೊ ದ್ವೇಷದಲಿ ಇಂದುಮುಖಿಗೆ ಸೌಗಂಧಿಕ ಇತ್ತು ಕುರು ನಂದನ ವಂಶವನಂದು ಛೇದಿಸಿದೆ 2 ದುರುಳರೆಲ್ಲರು ಬಂದು ಕಲಿಯುಗದಿ ನಿಂದು ಹರಿಯು ನರನು ಒಂದು ಅರುಹಲಿಂತೆಂದು ಸುರರೆಲ್ಲ ಬಲುನೊಂದು ಕ್ಷೀರಾಬ್ಧಿಗೆ ಬಂದು ಸಿರಿವರ ಪೊರೆಯೆಂದು ಮೊರೆಯಿಡಲಂದು ಹರಿ ನಿನಗರುಹಲು ಧರೆಯಲ್ಲಿಗೆ ಬಂದು ಸುರ ಭೂ ಶ್ರೇಷ್ಠನುದರದಲಿ ಜನಿಸಿದೆ 3 ಪರಮಾಯಿಗಳ ಮತ ತರಿದು ಕೆಡಹುತ್ತ ಹರಿ ಸರ್ವೋತ್ತಮೆನುತ ಧರೆಯೊಳ್ ಸಾರುತ್ತ ತರತಮ್ಯ ಸತ್ಯವೆನುತ ಪಂಚಭೇದೆನುತ ಸಿರಿರಮಣಗೆ ನರಭೃತ್ಯನೆನ್ನುತ್ತ ಪರಿ ಬೋಧಿüಸಿ ದುರುಳರ ಛೇಡಿಸಿ ಸರಸಿಜಾಕ್ಷಗೆ ಬಲು ಸಮ್ಮತನೆನಿಸಿ 4 ವೈಷ್ಣವಾಗ್ರಣೀ ಲೀಲೆ ಪೇಳಲಳವಲ್ಲ ಜಿಷ್ಣುಸಖನ ಲೀಲೆ ನುಡಿಸೆನಗೆ ಸೊಲ್ಲ ಕಷ್ಟಪಡುತಿಹೆನಲ್ಲ ಕರುಣವೇಕಿಲ್ಲ ಶ್ರೇಷ್ಠನೆ ಗೋಪಾಲಕೃಷ್ಣವಿಠಲ ಇಷ್ಟು ತಿಳಿಸುತ ಅಷ್ಟದಳದಲಿ ಶ್ರೇಷ್ಠದಿ ಪೂಜಿಪ ಗುಟ್ಟು ತೋರೆನಗೆ 5
--------------
ಅಂಬಾಬಾಯಿ
ಹರಿಯೆಗತಿಸಿರಿವಿರಿಂಚಿ ಶಿವರಿಗೆನರ -|ಹರಿಯೆಗತಿಸುರಪತಿ ಸುರರಿಗೆಪರುಕುಮಣಿದೇವಿಯ ಶಿಶುಪಾಲಗೀವೆನೆಂದು |ರುಕುಮ ಸಂಭ್ರಮಿಸಲು ಕೃಷ್ಣ ಬಂದು ||ಸಕಲ ರಾಯರುಗಳು ಸನ್ನದ್ಧರಾಗಿರೆ |ರುಕುಮಿಣಿದೇವಿಯ ವರಿಸಿ ಆಳಿದನಾಗಿ 1ಹಯ್ಯಾಸನೆಂಬವ ವೇದವ ಕದ್ದೊಯ್ಯೆ |ಹಯಗ್ರೀವನಾಗಿ ಹರಿಯವನ |ಕಾಯವ ಖಂಡಿಸಿ ಅಜಗೆ ವೇದವನಿತ್ತು |ಕಾಯ್ದ ಕರುಣಿ ಕಮಲಾಕ್ಷನೆ ದೈವವೆಂದು 2ಭಸುಮಾಸುರನಿಗೊಂದಸಮದ ವರವಿತ್ತು |ತ್ರಿಸೂಲಧರನು ಓಡಿ ಬಳಲುತಿರೆ |ಬಿಸಜಸಂಭವನಯ್ಯ ಭಸುಮಾಸುರನನು |ಭಸುಮವ ಮಾಡಿ ಭಕ್ತನ ಪಾಲಿಸಿದನಾಗಿ 3ಸುರಪನ ರಾಜ್ಯವ ಬಲಿಯಾಕ್ರಮಿಸಲು |ಹರಿಯೆ ದಾನವ ಬೇಡಿ ನೀನವನ ||ಧರೆಯಈರಡಿ ಮಾಡಿ ಪಾತಾಳಕೆ ಮೆಟ್ಟ |ಸುರಪಗೆ ರಾಜ್ಯವನಿತ್ತು ಸಲಹಿದನಾಗಿ 4ಸುರ - ಭೂಸುರರನು ಅಸುರ ಬಾಧಿಸುತಿರೆ |ಹರಿಯವತರಿಸಿ ನೀನಸುರರನು ||ಶಿರಗಳ ಚಂಡಾಡಿ ಸುರರ ಭೂಸುರರನುಪೊರೆಯುತ್ತಲಿಪ್ಪ ನಮ್ಮ ಪುರಂದರವಿಠಲ 5
--------------
ಪುರಂದರದಾಸರು