ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಪ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ನಿತ್ಯ ಸಜ್ಜನರ ಒಡಗೂಡು1 ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು 2 ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ ಇರಲಿ | ಬಂಧುಗಳ ಕೂಡಾ | ಮನಮೆಚ್ಚು ನಡೆದು ನೀ ಮಂದಮತಿಯನು ಕಳೆದು | ಘನಜ್ಞಾನದಲಿ ನಡೆದು ಗುಣವಂತನಾಗು 3 ಧರ್ಮೋಪದೇಶವನೆ ಮಾಡುತಲಿರು ನೀನು | ಪೇರ್ಮೆಯುಳ್ಳವನಾಗು ಪೃಥವಿಯೊಳಗೆ | ನಿರ್ಮತ್ಸರನಾಗು ವೈಷ್ಣವ ಜನರ ಕೂಡ | ದುರ್ಮತವ ಪೊಂದದಿರು ಅನಂತ ಜನ್ಮಕ್ಕೆ 4 ಕರ್ಣ ತುಲಸೀ ದಳ | ಬೆರಳಲ್ಲಿ ಪವಿತ್ರದುಂಗರವನಿಟ್ಟು | ಪರಮ ವಿರಕುತಿಯಲಿ ದೇಹವನು ದಂಡಿಸುವ | ಹಿರಿದಾಗಿ ಭಾಗವತನಾಗು ವ್ಯಾಕುಲವ ಬಿಡೋ 5 ವದನದಲಿ ಹರಿಸ್ಮರಣೆ ಮರೆಯದಿರು ಕಂಡಕಡೆ | ಉದರಕ್ಕೆ ಪೋಗಿ ಚಾಲ್ವಯದಿರು ಅಧಿಕರ ಆಪೇಕ್ಷಗಳ ಮಾಡದಿರು ಹರಿಯಿತ್ತ ದದು ಭುಂಜಿಸಿ | ಬಂದ ಕಾಲವನು ಹಿಂಗಳಿಯೊ 6 ತೀರ್ಥಯಾತ್ರೆಯ ಚರಿಸು ಕಥಾಶ್ರವಣವನು ಕೇಳು | ಅರ್ಥವನೆ ಬಯಸದಿರು ಬಾಕಿ ಬಸಿದು ವ್ಯರ್ಥ ನಿನ್ನಾಯುಷ್ಯ ಪೋಯಿತೆಂದೆನಿಸದೆ | ಪ್ರಾರ್ಥನೆಯ ಮಾಡು ಪ್ರತಿಕ್ಷಣಕೆ ಶ್ರೀ ಹರಿಚರಣ 7 ಪರಿಯಂತ | ಮಿತ ಆಹಾರ ಮಿತ ನಿದ್ರಿ ಮಿತ ಮಾತನು | ಸತತ ಮೀರದಲಿರು ಶೋಕಕ್ಕೊಳಗಾಗದಿರು | ಸತಿ ಸುತರು ಎಲ್ಲ ಶ್ರೀ ಹರಿಗೆ ಸೇವಕರೆನ್ನು 8 ಜಾಗರ ಗಾಯನ | ಮರಳೆ ಮರಳೆ ಮಂತ್ರ ಪಠನೆಯಿಂದ | ಧರೆಯೊಳಗೆ ಪುಣ್ಯವಂತನಾಗಿ ಸರ್ವದ | ಇರಬೇಕು ಇಹಪರಕೆ ಲೇಸು ಎನಿಸಿಕೊಂಡು9 ಸುಖ ದು:ಖ ಸೈರಿಸುತ ಅರಿಗಳಿಗೆ ಭಯಪಡದೆ | ನಖಶಿಖವಾಗಿ ಆನಂದ ವಿಡಿದೂ | ಮುಖದಲ್ಲಿ ಹರಿನಾಮ ಅಮೃತವೆ ಸುರಿಸುತ್ತ | ಸಖರೊಳಗೆ ಲೋಲಾಡು ಹರಿಗುಣವ ಕೊಂಡಾಡು10 ಸಕಲಾಧಿಷ್ಠಾನದಲಿ ಹರಿಯೆ ಲಕುಮಿ ತತ್ವ | ಕರ ಮುಗಿದು ತಿಳಿದು | ಮುಕುತಿ ಕರದೊಳಗಿಡು ವಿಜಯವಿಠ್ಠಲರೇಯನ | ವಿಕಸಿತ ಮನದಲ್ಲಿ ಭಜಿಸು ಬಲು ವಿಧದಿಂದ11
--------------
ವಿಜಯದಾಸ
ಲೋಕನೀತಿ ಇರಬೇಕು ಇದ್ದರು ಇಲ್ಲದಿರಬೇಕು ಪ ಹರಿಯಲ್ಲಿ ಮನವಿಟ್ಟು ತೊರೆದು ಮಮತೆ ಭವದಿ ಅ.ಪ. ಪರದೈವ ಹರಿಯೆಂದು ದೃಢದಿಂದಲಿರಬೇಕು ಗುರುವಾಯು ಸರಿಯೆಂದು ಗುರುಭಕ್ತಿಮಾಡಬೇಕು ಹರಿಯ ಕರುಣ ವಿಲಾಸದಿಂದಲಿ ವೈರಿ ವೃಂದವ ಸ್ಮರಿಸಿ ಸ್ಮರಿಸುತ ಕ್ರಮದಿ ಬಿಂಬನ ಪರಮ ಸುಖದಿಂ ಜ್ಞಾನ ಘಳಿಸುತ 1 ತಿಳಿಯಬೇಕೊ ವಿದ್ಯೆ ತುಳಿಯಬೇಕಾವಿದ್ಯೆ ಬೆಳಿಸಬೇಕು ಭಕ್ತಿ ಹಳಿಯಬೇಕು ಹಂಮದ ನಳಿನ ನಯನನ ಆಳುವೆಂಬುದ ತಿಳಿದು ತವಕದಿ ದೊರೆಯ ತೊಳಳಿಬಳಲಿದೆ ಬಹಳ ವುದರಕೆ 2 ಹರಿಯಿತ್ತದುಣಬೇಕು ಸಮಚಿತ್ತವಿರಬೇಕು ಹರಿಗಿತ್ತುಮಣಿಬೇಕು ಧೊರೆ ಚಿತ್ತವೆನಬೇಕು ಪರರ ಬೇಡದೆ ಬಿಡುತ ಹರಿಯನು ಸಿರಿಗುಪ್ರೇರಕ ವಿಷ್ಣುವೆನ್ನುತ ಹಿರಿಯರಕರುಣ ಪಡೆಯುತ 3 ಮಂತ್ರಸಿದ್ಧಿಯು ಬೇಕು ತಂತ್ರ ವೃಂದವು ಬೇಕು ಯಂತ್ರವಾಹಕ ಹರಿಯ ಸ್ವಾತಂತ್ರವರಿಯಬೇಕು ಕಂತುಪಿತನೇಕಾಂತ ಭಕ್ತರ ಭಾಗ್ಯ ಪಡೆಯುತ 4 ಗಾತ್ರ ಶುದ್ಧಿಯುಬೇಕು ಪಾತ್ರವರಿಯುತ ದಾನವಿತ್ತು ಪೂಜಿಸಬೇಕು ಪುತ್ರಮಿತ್ರ ಕಳತ್ರ ಗತಹರಿ ತುತ್ತುವುಣ್ಣಿಸಿ ಜಗವ ಸಲಹುವ “ಶ್ರೀಕೃಷ್ಣವಿಠಲ”ನ ಕರುಣ ಪಡೆಯಲು 5
--------------
ಕೃಷ್ಣವಿಠಲದಾಸರು
ಸಂಸಾರವನು ಮಾಡಿ ಸಕಲ ಜನರೂ ಪ ಕಂಸಾರಿ ಶ್ರೀಕೃಷ್ಣ ಕೈಪಿಡಿದು ಸಲಹುವನು ಅ.ಪ. ಬುದ್ಧಿಯೆಂದೆಂಬ ಕನ್ನಿಕೆಯ ಮದುವೆಯ ಮಾಡಿಸದ್ಧರ್ಮದಭಿಮಾನದಿಂದ ಬೆಳಸೀ ||ಶುದ್ಧ ಭಕ್ತಿಗಳೆಂಬ ಮಕ್ಕಳನು ಪಡೆದು ಬಹುಅದ್ಭುತ ಭವಾಬ್ಧಿಯನು ದಾಟಿರಯ್ಯಾ 1 ಚಾರು ಸುಜ್ಞಾನವೆಂಬುವ ಮುದ್ದು ಮಗನ್ಹಡೆದುವೈರಾಗ್ಯವೆಂಬ ಭಾಗ್ಯವನೆ ಬೇಡೀ ||ಸಾರ ಹರಿನಾಮಗಳ ರಸ ಪದಾರ್ಥಗಳುಣಿಸಿಕಾರುಣ್ಯದಲಿ ಬೆಳೆಸಿರಯ್ಯ ಮಕ್ಕಳನೂ 2 ಯಮ ನಿಯಮ ಅಷ್ಟಾಂಗ ಅಣಿಮಾದಿಗಳುಕ್ಷಮೆ ದಮಾದಿಗಳೆಂಬ ಬಂಧು ಬಳಗಾ ||ಮಮತೆ ಪೆರ್ಚಿಸಿಕೊಂಡು ಬೀಗತನ ಮೊದಲಾದಅಮರಿಕೆಯ ಸಂಬಂಧವನೆ ಮಾಡಿರಯ್ಯಾ 3 ಶೀಲ ಸನಕಾದಿಗಳು ಮುನಿ ದೇವತಾದಿಗಳುತಾಳಿ ತಮ್ಮೊಳಗೆ ಸಮ ವಿಷಯರಾಗಿ ||ಆಲಂಪಟಗಳ್ಹಚ್ಚಿಕೊಂಡು ಭವನಿಧಿ ದಾಟಿಸಾಲೋಕ್ಯ ಮೊದಲಾದ ಮುಕ್ತಿಗೈದಿದರೂ 4 ಸತಿ ಸುತರು ಭಾಗ್ಯವೆ ನಿಮಗೆಹರಿಯಿತ್ತ ಕಾಲಕ್ಕು ಹೃದಯದೊಳಗೇ ||ಮರೆಯಲಾಗದು ಹಿಂದೆ ಸಂಸಾರದಾ ಬಾಧೆ ದುರಿತಾರಿ ವ್ಯಾಸ ವಿಠ್ಠಲ ಬ್ಯಾಗ ಒಲಿವಾ 5
--------------
ವ್ಯಾಸವಿಠ್ಠಲರು