ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ನಮ್ಮನಿಯಲಿ ಆನಂದ ಬಂದ ನೋಡಿ ಮುಕುಂದ ಗುರುಕೃಪೆಯಿಂದ ಧ್ರುವ ಸದಮಲ ಸುಖಕಲ್ಲೋಳ ಬೆಳಗುದೋರುತಲ್ಯದೆ ಬಹಳ ಹೇಳಲಳವಲ್ಲದು ಬಲುಸೂಕ್ಷ್ಮ ತಿಳಿದವ ತಾ ವಿರಳ ಇಳೆಯೊಳು ನಿಜ ಆನಂದವು ದೋರಿತು ಸ್ವಾನುಭವಕ ಸುಕಾಲ 1 ಮಾಯವಗಂಡು ಧನ್ಯಧನ್ಯಗೈಯಿತು ಜೀವನ ತಾ ಸನ್ಮತ ಸುಖಸವಿಗೊಂಡು ಪುಣ್ಯರಥ ಪರಿಣಾಮದಲನುದಿನ ಮನಬೆರೆಯಿತು ನೆಲೆಗೊಂಡು ಸ್ಮರಣಿಯ ಸವಿದುಂಡು 2 ಸದ್ಗುರು ಎನ್ನೊಡೆಯ ಚಂದವಾಯಿತು ಆನಂದದ ಸುಖವಿದು ಮಹಿಪತಿಗೆಡೆಯಡಿಯ ಸಂದಹರೆವ ಜನ್ಮ ಮರಣದ ಹೇಳಿದ ತಾ ನಿಜನುಡಿಯ ಹೊಂದಿ ಹರುಷಬಡುವಾನಂದವುದೋರುತಿದೆ ಸಿಲುಕಡಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನೋಡುವ ಇಂದಿರಾಪತಿ ಶ್ರೀಪಾದವ ಎಂದೆಂದು ಬಿಡದೆ ಮನದಲಿ ತಂದೆ ಮುಕುಂದನ ಹೊಂದಿ ಭಜಿಸುವ ಧ್ರುವ ಭಾವಭಕುತಿಗಳ ವಿಡಿವ ಭವಬಂಧನದ ಪಾಶ ಕಡಿವ ದಿವಾರಾತ್ರಿಯಲಿ ಹರುಷಬಡುವ ಕಾವಕರುಣನ ಕೃಪೆಯ ಪಡೆವ 1 ಮನಕರಗಿ ಮೈಯ್ಯಮರೆವ ಘನಸುಖದ ಸುಸ್ಮರಣಿಯಲಿರುವ ಆನಂದಮಯಸ್ವರೂಪದಿ ಬೆರೆಯುವ ತನುಮನವು ಶ್ರೀಹರಿ ಗೊಪ್ಪಿಸುವ 2 ಎರಗಿ ಏಕವಾಗಿ ನೊಡುವ ಹರಿಚರಣದಿ ಬೆರೆದು ಕೊಡುವ ಪರಮಗತಿ ಸಾಯೋಜ್ಯಪಡುವ ಧರೆಯೊಳು ನಲಿ ನಲಿದಾಡುವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಂತು ಮರೆಯಬಹುದು ನಿಮ್ಮ ಹೇಳು ಗುರುರಾಯ | ಅಂತರಂಗದೀ ನೆನೆದು ಪಡೆಯಬೇಕು ಸುಖಾಶ್ರಯಾ ಪ ತಂದೆ ನೀನೇ ತಾಯಿ ನೀನೇ ಬಂಧು ಬಳಗ ನೀನೇ | ಹೊಂದಿ ಹರುಷಬಡುವಗತಿಯ ಗುರು ದೈವ ನೀನೇ 1 ತಂದು ಜಠರದಲ್ಲಿ ಜನುಮ ಉಣಿಸಿ ಉಡಿಸಿ ಬೆಳೆಸೀ | ಛಂದದಿಂದಲಿ ಹೊರೆವೆಯಿನ್ನು ಬೇಡಿದನು ಸಲಿಸಿ 2 ಮರೆಯಲಿಕ್ಕೆ ದೇಶಗ್ರಾಮ ವೃತ್ತಿಗೃಹಗಳಲ್ಲಾ | ಕಾಯ ಸುಖದ ದ್ರವ್ಯ ಧನವಲ್ಲಾ3 ಮರಹು ಮರಸಿ ಅರವ್ಹಿಲಿರಿಸಿ ಇರಹು ಘನವನರಸಿ | ಗುರು ಮಹಿಪತಿ ಸ್ವಾಮಿ ಕಾಯಿದೇ ಕಂದನುದ್ಧರಿಸಿ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು