ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅತ್ತಿಗೇ ನಿನ್ನ ಹಾಡಿಗೆ ನಾ ಪ್ರತ್ಯುತ್ತರ ಕೊಡುತಿಹೆನೆ ಪ ನೀವ್ ಕತ್ತೆ ಸಮಾನರು ಅ.ಪ ಎಣ್ಣೆ ಸಾಸುವೆ ಅರದಿಟ್ಟಿಹ ಚಿತ್ರಾನ್ನದ ರಾಶಿಗಳು ಪಲ್ಯ ಹಲಸಿನ ಕಾಯ್ ಪಲ್ಯ ಸಣ್ಣ ಗೆಣಸು ಗೆಡ್ಡೆಯ ಪಲ್ಯಗಳ ಸಾಸುವೆ ಹುಳಿ ಪಳಿದ್ಯಾ ಮಾಡಿಸಿ ಹಾಕುವೆನೂ 1 ನೇಮವಾದ ನೆಲಗಡಲೆ ಕಾಯೆಣ್ಣೆಯ ಕರಿಗಡುಬುಗಳೂ ತರಿಸಿ ಹಾಕುವೆ 2 ಫಲವು ಮುಲ್ಲಂಗೀ ಕಡು ಹರುಷದಿ ಕೊಂಬೀ ಇಂಥಾ ಶತವರಟಾದ ಬೀಗರ ನಾನೆಲ್ಲೂ ಕಾಣಲಿಲ್ಲಾ ಮಾಡದವರಿಗೆ ಇವು ಬಲು ಪ್ರಿಯ್ಯಾ 3
--------------
ಗುರುರಾಮವಿಠಲ
ತೆರಳೆ ನೀ ಮಧುರೆಗೆ ಗೋಕುಲದಲಿ ನಾವುಇರಲಾರೆ ಇರಲಾರೆವೋ ಗೋಪಾಲ ಪ ತರಳತನದಿ ನೀ ಆಡಿದ ಆಟಗಳ ಸ್ಮರಿಸಿಸ್ಮರಿಸಿ ನಾವು ಮರುಗುವುದೆಲೋ ದೇವಅ.ಪ. ವ್ರಜದ ಒಳಗೆ ನೀನು ಇದ್ದದ್ದು ಕೇಳಿಭರದಿ ಪೂತನಿಯ ಕಳುಹಿ ಕೊಟ್ಟರೆತೊಡೆಯ ಒಳಗೆ ಇಟ್ಟು ಸ್ತನಕೊಡುತಿರಲವಳಹುಲಿಯಂತೆ ಹೀರಿ ಹಿಪ್ಪೆಯಮಾಡಿದೆಯೊ ದೇವ ತೃಣದ ಅಸುರನ ಕೊರಳಮಿಸುಗುತ್ತ ಅವನ ಕೆಡಹಿದಿಭರದಿ ಬಂಡಿಯ ಒದ್ದು ಶಕಟನ ಪುಡಿಯಮಾಡಿದ ಪರಮ ಪುರುಷನೆ 1 ಕೊಲ್ಲಕಂಸನು ಭಾಳ ಯೋಚಿಸಿ ಮನದಿಕೊಲ್ಲಬೇಕೆಂದೆನುತ ಸೂಚಿಸೆಬಿಲ್ಲನೆ ಮುರಿದು ಆ ನಲ್ಲೆಯ ಕರಪಿಡಿದುಒಳ್ಳೆ ಪುರಕೆ ಹೋಗಿ ಎಲ್ಲ ಕಾರ್ಯವ ನಡೆಸಿಮೆಲ್ಲನೆ ಏಕಾಂತ ಗೃಹದಲ್ಲಿಸೊಲ್ಲ ಕೇಳುತ ಅವನನು ಕೋಪಿಸೆಅಲ್ಲಿಯನುಜನ ತರಿದು ಅವನಕೊಲ್ಲ ಕಳುಹಿದ ಕಠಿನ ಹೃದಯನೆ2 ಎಲ್ಲ ಹಿಂದಿನ ಸುದ್ದಿ ಬಲ್ಲೆವೊ ನಾವುಇಲ್ಲಿ ಮರೆತೀಯೆಂದು ತಿಳಿದೆವೋಬಲ್ಲ ಅಕ್ರೂರನು ಬಂದು ಇಲ್ಲಿಗೆ ನಮ್ಮಇಲ್ಲದ ಮಾತ ಕೇಳಿ ಮೆಲ್ಲನೆ ಕರೆದೊಯ್ದಅಲ್ಲಿ ರಥವನೆ ಕಾಣುತ ಎದೆಝಲ್ಲೆನಿಸಿ ನಡುಗಿದೆವೊಪುಲ್ಲನಾಭನೆ ಜ್ಞಾನ ಭಕುತಿ ನ-ಮ್ಮೆಲ್ಲರಿಗೆ ನೀನಿತ್ತು ಪೋಗೆಲೊ 3 ಹೆಂಡತಿಯ ಕೂಡಿ ಕದನ ಮಾಡಿಮುಂದೆ ಮೂವರು ತೆರಳಿದಿರಿಬಂದು ಋಷಿಯಾಶ್ರಮದಿ ನಿಂತು ಗ್ರಾಸವ ಬೇಡೆಮಂದಗಮನೆ ನೋಡಿ ಚೆಂದಾಯಿ -ತೆಂದೆ ತಂದು ಕಲಶೋದಕವ ಚೆಲ್ಲಲುಕಂದರುಗಳು ನೀವಾದಿರೊ ತಂದ ಹಲಸಿನ ದೊನ್ನೆ ಪಾಲನುಚೆಂದದಿಂದಲಿ ಕುಡಿದ ದೇವನೆ4 ಮಂದಗಮನೇರಿಂದ ನಿಮಗೆ ಮತ್ತೆಒಂದುಪಕಾರವ ಕಾಣೆವೊಚೆಂದಾಗಿ ಮಾನದಿ ಮಂದಿರದಲಿ ಇರದೆಗಂಡರ ಬಿಟ್ಟು ನಿಮ್ಹಿಂದೆ ತಿರುಗಿದೆವೊಇಂದಿರೆಯು ಕಾರಣಗಳಲ್ಲವೊನಿಂಗೆ ನೀನೆ ಸ್ವರಮಣನಂಮಂಗಳಾಂಗನೆ ಮಾರಜನಕನೆರಂಗವಿಠಲನೆ ರಾಜೀವಾಕ್ಷನೆ5
--------------
ಶ್ರೀಪಾದರಾಜರು
ವನವ ನೋಡೋಣು ಬಾರೇ ನೀರೆ ಅಲ್ಲಲ್ಲಿಗೆ ಸರೋವರ ವನವ ನೋಡೋಣು ಬಾರೇ ನೀರೆ ಪ. ನೀರ ಮೇಲಾಡುವ ಪಾರಿವಾಳದ ಹಿಂಡುದೂರಾಗಿ ಬೆಳೆದ ಅಡಿಕೆಯದೂರಾಗಿ ಬೆಳೆದ ಅಡಿಕೆ ತೆಂಗಿನಮರ ಶ್ರೀದೇವಿ ಅರಸನ ವನವಿದು 1 ತುಂಬಿ ತುಂಬಿ ಜqತಾ ರಂಗಯ್ಯಓಕುಳಿಯಾಡಿದ ವನವಿದು2 ಮೃಗ ಹಿಂಡು ಕಡೆಯಿಲ್ಲ 3 ತೋಟಪಟ್ಟಿಗಳಲ್ಲಿ ನೀಟಾದ ಹಂಸಗಳು ಆಟವಾಡುತ್ತಿರಲು ಹರುಷದಿಆಟವಾಡುತ್ತಿರಲು ಹರುಷದಿ ಅಲ್ಲಲ್ಲೆ ನೀಟಾಗಿ ನಲಿವ ನವಿಲು ಹಿಂಡು4 ಕಬ್ಬಿನ ತೋಟಕ್ಕೆ ಹಬ್ಬಿದ ಹಂದರ ಅಬ್ಬರದಿ ಬೆಳೆದ ಹಲಸಿನ ಅಬ್ಬರದಿ ಬೆಳೆದ ಹಲಸು ತೆಂಗಿನ ಮರ ರುಕ್ಮಿಣಿ ರಾಮೇಶನ ವನವಿದು5
--------------
ಗಲಗಲಿಅವ್ವನವರು
ವಿಶೇಷ ಆ ಹಣ್ಣು ಈ ಹಣ್ಣು ನೆನಸಿ ಫಲವೇನೆ ಈ ಹುಣಸೇಹಣ್ಣಿಗೆ ಸಮಬಾಹೋದೇನೆ ಪ ಹಡಗಿಂದ ಬಂದಿತು ಉತ್ತತ್ತಿ ಹಣ್ಣು ಬಡವರಿಗೆ ಬೇಕಾದ ಬಾಳೆಯ ಹಣ್ಣು ಕೂತರೆ ಏಳದು ಕುಂಬಳದ್ದಲ್ಲ ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 1 ಮಕ್ಕಳು ಬಯಸುವ ಚಕ್ಕೋತ ಹಣ್ಣು ಸಕ್ಕರೆ ಸವಿಯಾದ ಅನಾಸಿನ ಹಣ್ಣು ರುಚಿ ಹಲಸಿನ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 2 ದಾಹವಡಗಿಸುವದು ದ್ರಾಕ್ಷಿಯ ಹಣ್ಣು ದೊರೆಗಳು ತಿನ್ನುವ ದಾಳಿಂಬೆ ಹಣ್ಣು ಫರಂಗಿಯರು ತಿನ್ನುವ ಪನ್ನೇರಳೆ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 3 ಅತಿಮಧುರವಾದ ಕಿತ್ತಲೆ ಹಣ್ಣು ಯತಿಗಳಿಗಾನಂದ ಸೀತಾಫಲದ್ಹಣ್ಣು ಅತಿರುಚಿಯಾದ ಅಂಜೂರದ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 4 ಮಾನವಂತರು ತಿನ್ನುವ ಮಾವಿನ ಹಣ್ಣು ಜ್ಞಾನಿಗಳಿಗೆ ರಾಮನಾಮದ ಹಣ್ಣು ದೀನಜನರು ತಿಂಬ ಮೂಸುಂಬೆ ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 5 ಅಪರೂಪದಲಿ ಬೆಳೆದ ಮಾದಳದ್ಹಣ್ಣು ಕಪಿಗಳು ತಿನ್ನುವ ಸೀಬೆಯ ಹಣ್ಣು ತಪಸ್ವಿಗಳಾಹಾರ ಜಂಬುನೇರಳೆಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 6 ಪರಿ ಔಪಧಕೆ ಹೆರಳೆಯ ಹಣ್ಣು ಮರ್ಯಾದೆಗೆ ಕೊಡುವ ನಿಂಬೆಯ ಹಣ್ಣು ಪರಮ ರೂಪಿಯಾದ ಕರಬೂಜದ್ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 7 ಬಡವರಿಗೂ ಈ ಹುಣಸೇ ಹಣ್ಣಿರಬೇಕು ಬಲ್ಲಿದರಿಗೂ ಹುಣಸೇ ಹಣ್ಣಿರಬೇಕು ರುಚಿ ಎಲ್ಲ ಜನರುಗಳು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 8 ಹುಣಸೇಹಣ್ಣಿಲ್ಲದೆ ಭಾಂಡ ಶುದ್ಧಿಗಳಿಲ್ಲ ಹುಣಸೇ ಇಲ್ಲದೆ ಸ್ವಯಂಪಾಕ ರುಚಿಯು ಇಲ್ಲ ಹುಣಸೇ ಮರಕ್ಕಿಂತ ಗಟ್ಟಿ ಮರಗಳಿಲ್ಲ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 9 ಹುಣಸೇಕಾಯಿಯ ಕುಟ್ಟಿ ರಸವ ಮಾಡುವರು ಹುಣಸೇಹಣ್ಣನು ಕುಟ್ಟಿ ಅಣಿಮಾಡಿಡುವರು ಹುಣಸೇಹಣ್ಣಿನ ಬೆಲೆ ಮುಗಿಲಿಗೇರಿರಲು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 10 ಹರಿಯ ಅಪ್ಪಣೆಯಂತೆ ಹುಣಸೆಯ ಮರಹುಟ್ಟಿ ಪರರಿಗೆ ಉಪಕÀರಿಸುವದಿದು ಹರಿಯಾಜ್ಞೆ ವರದ ಶ್ರೀ ಹರಿ ಕಮಲನಾಭ ವಿಠ್ಠಲನಿಚ್ಛೆ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 11
--------------
ನಿಡಗುರುಕಿ ಜೀವೂಬಾಯಿ