ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆ ಗುರುವಾಗೆನಗೆ ಕೋನೇರಿವಾಸ ಙÁ್ಞನವಿಲ್ಲದ ಮನುಜ ತಾನಿದ್ದು ಫಲವೇನು ಪ ನಾಳವಿಲ್ಲದ ಘಂಟೆ ಭಾರವಾಗಿದ್ದರೇನು ತೋಳ ಬಲಹಿಲ್ಲದವ ದೊರೆಯಾದರೇನು ಹಾಳು ಭೂಮಿಯು ತನ್ನ ಮೂಲವಾದರೆಯೇನು ಬಾಳಲೀಸದ ಮನೆಯ ಬಲವಂತವೇನು 1 ತಿದ್ದಬಾರದ ತೇಜಿ ಉದ್ದವಾಗಿದ್ದರೇನು ಮೂರ್ತಿ ಮುದ್ದಾದರೇನು ಕದ್ದ ಕಳ್ಳನ ಮಾತು ಬದ್ಧವಾದರೆಯೇನು ಮದ್ದನರಿಯದೆ ಧಾತು ತಿಳಿದಿದ್ದರೇನು 2 ಗೊಡ್ಡು ದನವಿನ ಕ್ರಯವು ಅಡ್ಡವಾದರೆಯೇನು ಬಡ್ಡು ಅರಸಿನ ಬಂಟನೊಡ್ಡೊಕ್ಕರೇನು ಹೆಡ್ಡನಾದವ ಬಹಳ ಗಡ್ಡವಿರಿಸಿದರೇನು ಕಡ್ಡಾಯದಂಗಡಿಯಲಿದ್ದು ಫಲವೇನು3 ಒಕ್ಕಲಿಲ್ಲದ ಊರು ಮಕ್ಕಳಿಲ್ಲದ ಮನೆಯು ಅಕ್ಕರಿಲ್ಲದ ತವರು ಇದ್ದು ಫಲವೇನು ಚೊಕ್ಕ ಹೆಂಡತಿಯವಳ್ಗೆ ತಕ್ಕ ವರನಿಲ್ಲದಿರೆ ಕುಕ್ಕೆ ತುಂಬಿದ ರೊಕ್ಕವಿದ್ದು ಫಲವೇನು 4 ಬಡಿಗೆಯಿಲ್ಲದೆ ಚಿನ್ನ ಕಡಗವಾಗುವುದೇನೊ ಪೊಡವಿ ಕಡಿಯದೆ ಬೆಳೆಯ ನೆಡುವುದೇನೊ ಕಡಗೋಲು ಹೊರತಾಗಿ ಬೆಣ್ಣೆ ತೋರುವುದೇನೊ ತುಡುಬು ಬಡಿಯದೆ ಧ್ವನಿಯ ಕೊಡುವುದೇನೊ 5 ಅಡವಿಯೊಳಗಿಹ ವೇಣು ತಿದ್ದಿದರೆ ಮೈಗೊಟ್ಟು ಕಡುಹುಳ್ಳ ದೊರೆಗಳನು ಹೊರವುತಿಹುದು ಶುಕ ಪಕ್ಷಿಯನು ಅಡಗಿಸಿಯೆ ಹಾಲೆರೆದು ಒಡನೆ ಹೇಳಿದ ನುಡಿಯ ತಾ ನುಡಿವುದು 6 ಬಂಟ ಬಿಡದೆ ಸೇವೆಯ ಮಾಳ್ಪ ಮಡದಿ ತಾ ಚೆಲುವಾಗಿ ಅಡಿಗೆ ಮಾಡುವಳು ಕಡೆಯ ಕಾಲಕೆ ತನ್ನ ದೃಢ ಬುದ್ಧಿ ಹಿಂಗುವುದು ಒಡೆಯನನು ಭಜಿಸಲಿಕೆ ಮನವಿಲ್ಲವು 7 ಗುರುವಾಗು ಇಹಪರಕೆ ಸ್ಥಿರವಾದ ಸೌಖ್ಯವನು ಒರೆದು ಮಾರ್ಗವ ತೋರು ಉರಗಗಿರಿವಾಸ ಗುರುವೆಂದು ಭಾವಿಸಿಯೆ ಕರಮುಗಿದು ಶಿರಬಾಗಿ ಸರಸಿಜಾಂಘ್ರಿಯ ನೆನೆವೆ ವರಾಹತಿಮ್ಮಪ್ಪ 8
--------------
ವರಹತಿಮ್ಮಪ್ಪ
ಲಕ್ಷೀದೇವಿ ಕಮಲೇ ಕಮಲಾಲಯೇ ಪ ಕಮಲಭವಾದಿ ಸುರವಂದಿತಪದೆ ಅ.ಪ ತ್ರಿಗುಣಾಭಿಮಾನಿಯೇ ನೀ-ಅಗಣಿತಗುಣಶ್ರೇಣಿಯೇ ಹಗಲು ಇರುಳು ಹರಿಪದಯುಗ ತೋರಿಸೇ 1 ಲಿಂಗಶರೀರವ ಭಂಗವಗೈಯ್ಯಲು ನಿ ನ್ನಂಗದಲ್ಲಿನಾ ಬೆವರಿನಾ ಸಂಗವಾಗಲು ಭವಭಂಗ ಹಿಂಗುವುದು 2 ಧಾಮತ್ರಯರೂಪಿಣೀ ಕಮಲಭವಾಂಡಕಾರಿಣೀ ವಿಮಲಪದುಮ ಸರೋವಾಸಿನೀ ಸ್ವಾಮಿತೀರ್ಥದಿ ನಿಂತ ಶ್ರೀ ವೆಂಕಟೇಶನ ರಾಣಿ 3
--------------
ಉರಗಾದ್ರಿವಾಸವಿಠಲದಾಸರು
ವೃಂದಾವನದ ಸೇವೆಯ ಪ. ವೃಂದಾವನದ ಸೇವೆಮಾಡಿದವರಿಗೆ ಭೂ-ಬಂಧನ ಬಿಡುಗಡೆಯಾಗುವುದು ಅ.ಪ. ಕರವ ಮುಗಿದು ಬೇಗೀ-ರೇಳು ಲೋಕದ ಮಾತೆಗೆ ನಮೋಯೆಂಬೋದಲ್ಲದೆಏಳು ಪರದಕ್ಷಿಣೆಯನು ಮಾಡಿದವರಿಗೆಏಳು ಜನಮದ ಪಾಪ ಹಿಂಗುವುದು1 ಸಾರಿಸಿ ರಂಗವಲ್ಲಿಯನಿಟ್ಟು ಮೇಲೆ ಪ-ನ್ನೀರನೆರೆದು ಪ್ರತಿದಿವಸದಲ್ಲಿಸಾರಿ ಸೇವೆಯ ಮಾಡಿದವರಿಗೊಲಿದು ಮುನ್ನಸೇರಿಸುವಳು ತನ್ನ ಪದವಿಯನು 2 ಒಡೆಯನ ಮನೆಗೆ ನೀರುತರುತಲೊಬ್ಬಳುಎಡಹಿ ಬಿದ್ದಳು ತನ್ನ ಕೊಡನೊಡೆಯೆಸಿಡಿದು ಶ್ರೀತುಳಸಿಗೆ ತಂಪಾಗಲು ಮುನ್ನಕೊಡಳೆ ಅವಳಿಗೆ ಮೋಕ್ಷಪದವಿಯನು 3 ಕೇಶವ ಎಂಬ ಭೂಸುರಗೆ ಶುಕಯೋಗಿ ಉಪ-ದೇಶಿಸಿದನು ತನ್ನ ಭಾಗವತದಲ್ಲಿಕಾಸುವೀಸ ಹೊನ್ನು ಹಣ ಸವೆಯದಾಮುನ್ನ ನಿ-ರಾಶೆಯಿಂದಲಿ ಮುಕ್ತಿ ದೊರಕುವುದು 4 ಪೊಡವಿಗಧಿಕವಾದ ಸೋದೆ ಪುರದ ತ್ರಿವಿಕ್ರಮಎಡಭಾಗದಲಿ ಲಕ್ಷ್ಮಿದೇವಿಯ ಸಹಿತಸಡಗರದಿಂದಲಿ ಹಯವದನನ ಪಾದಬಿಡದೆ ಪೂಜಿಸಿ ಭಕ್ತಿ ಪಡೆಯಿರಯ್ಯ 5
--------------
ವಾದಿರಾಜ