ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಣೇಶ ಹಿತಮತಿಯ ಪಾಲಿಸೊ ಪ ಗತಿಯ ಕಲ್ಪಿಸಿ ಸಿರಿಪತಿಯ ಪಾದದಿ ಅ.ಪ ಗಜವದನನೆ ಎನ್ನ ನಿಜಭಕುತಿಯೊಳ್ನಿನ್ನ ಭಜನೆ ಮಾಡುವಂಥ ನಿಜವ ಪಾಲಿಸಿ 1 ಹರಣ ಮಾಡಿ ನಿನ್ನ ಸ್ಮರಣೆಯ ಕೊಟ್ಟು 2 ದೀನನಾಗಿ ನಾ ನಿನ್ನ ಸನ್ನಿಧಾನಕೆ ಬಂದೆ ಜ್ಞಾನವಿತ್ತು ಕಾಯೋ ಈಗ ಪ್ರಾಣನಾಥ ವಿಠಲನಲ್ಲಿ 3
--------------
ಬಾಗೇಪಲ್ಲಿ ಶೇಷದಾಸರು
ದೋಷನಾಶ ಜಗದೀಶ ಈಶ ಕೈ ಲಾಸವಾಸ ಸದಾನಂದ ಹರ ಜೈಜೈ ಪರಮಾನಂದ ಪ ದಂಡಧರನೆ ಹರ ರುಂಡಮಾಲ ರುದ್ರ ಕೆಂಡನಯನ ಸದಾನಂದ ಹರ ಜೈ ಜೈ ಪರಮಾನಂದ1 ಗೌರಿನಾಥ ಪ್ರಭು ಮಾರಮರ್ದನ ಮೃಡ ವಾರಿಧಿಧರ ಸದಾನಂದ ಹರ ಜೈ ಜೈ ಪರಮಾನಂದ 2 ಅಗಜಾವಲ್ಲಭ ನಿಗಮವಂದ್ಯ ಭಕ್ತ ರಘನಾಶನ ಸದಾನಂದ ಹರ ಜೈ ಜೈ ಪರಮಾನಂದ 3 ಗಜಚರ್ಮಾಂಬರ ಸುಜನರ ಪರಿಪಾಲ ತ್ರಿಜಗಪೂಜ್ಯ ಸದಾನಂದ ಹರ ಜೈ ಜೈ ಪರಮಾನಂದ 4 ತ್ರಿಪುರಸಂಹರ ನುತ ಸುಫಲದಾಯಕ ಮಹ ಕೃಪಾಕರ ಶಿವ ಸದಾನಂದ ಹರ ಜೈ ಜೈ ಪರಮಾನಂದ 5 ನೀಲಕಂಠ ಭವಮಾಲನಿವಾರ ತ್ರಿ ಶೂಲಧಾರಿ ಸದಾನಂದ ಹರ ಜೈ ಜೈ ಪರಮಾನಂದ 6 ಚಂದ್ರಚೂಡ ಶರಣೇಂದ್ರ ಮೃಕಂಡುಮುನಿ ಕಂದಗೊಲಿದ ಸದಾನಂದ ಹರ ಜೈ ಜೈ ಪರಮಾನಂದ 7 ಫಾಲನಯನ ಸುಖದಾಲಯ ನುತಜನ ಮೇಲುಮಂದಿರ ಸದಾನಂದ ಹರ ಜೈ ಜೈ ಪರಮಾನಂದ 8 ಭವ ಭೂತಿಖ್ಯಾತ ಜಗ ದಾತ ಸದಾನಂದ ಹರ ಜೈಜೈ ಪರಮಾನಂದ 9 ನಾದತೀತ ಅಮರಾದಿವಿನುತ ಮಹ ದಾದಿದೇವ ಸದಾನಂದ ಹರ ಜೈ ಜೈ ಪರಮಾನಂದ 10 ನತಜನ ಸುಖದಾಶ್ರಿತ ಹಿತಮತಿ ದೇ ನುತಿಪೆ ಸತತ ಸದಾನಂದ ಹರ ಜೈಜೈ ಪರಮಾನಂದ 11 ಭಾಗವತರ ಪ್ರಿಯ ಭಗವತ್ಶಿಖಾಮಣಿ ನಾಗಭೂಷ ಸದಾನಂದ ಹರ ಜೈ ಜೈ ಪರಮಾನಂದ 12 ಖೊಟ್ಟಿಲೋಹ ಸುಟ್ಟು ಕಿಟ್ಟತೆಗೆವಂತೆನ್ನ ಭ್ರಷ್ಟತ್ವಕಳಿ ಸದಾನಂದ ಹರ ಜೈ ಜೈ ಪರಮಾನಂದ 13 ಹರಣಪೋದರು ಹರಿಚರಣಸ್ಮರಣೆಬಿಡ ದ್ವರವ ಪಾಲಿಸು ಸದಾನಂದ ಹರ ಜೈ ಜೈ ಪರಮಾನಂದ 14 ಲಿಂಗಪುರೇಶ ಶಿವಲಿಂಗರೂಪ ಭವ ಭಂಗಸಂಗ ಸದಾನಂದ ಹರ ಜೈ ಜೈ ಪರಮಾನಂದ 15 ಮಂದರಧರನಡಿ ಚಂದದೊಲಿಸಿ ಎನಗಾ ನಂದಕೊಡು ಸದಾನಂದ ಹರ ಜೈ ಜೈ ಪರಮಾನಂದ 16 ಮಂಗಳಮೂರುತಿ ತುಂಗವಿಕ್ರಮ ಶ್ರೀ ರಂಗ ರಾಮ ಭಕ್ತಾನಂದ ಹರ ಜೈ ಜೈ ಪರಮಾನಂದ 17
--------------
ರಾಮದಾಸರು