ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡು ಎನ್ನೊಳು ಮಾಡು ದಯವನು ಬೇಡಿಕೊಂಬುವೆ ಮುರಹರ ಪ ರೂಢಿಯೊಳು ಎನ್ನ ಖೋಡಿಮಾಡದೆ ಕಾ ಪಾಡು ಬೇಗ ಭಕ್ತಹಿತಕರ ಅ.ಪ ಪಂಕಜಾಕ್ಷನೆ ಕಿಂಕರನ ಈ ಮಂಕುಗುಣಗಳ ಬಿಡಿಸಯ್ಯ ಶಂಖಸುರಹರ ಶಂಕೆಯಾತಕೆ ಕಿಂಕರನು ನಾಂ ಪಿಡಿ ಕೈಯ 1 ಹಿಂದು ಇಲ್ಲೆನ್ನ ಮುಂದು ಇಲ್ಲಯ್ಯ ತಂದೆ ನಿನ್ಹೊರತ್ಯಾರ್ಯಾರು ಮಂದಮತಿಯನು ಛಿಂದಿಸಿ ಬೇಗ ಕಂದನನು ಪೊರೆ ದಯಾಕರ 2 ತಂದೆ ನೀನೆ ತಾಯಿ ನೀನೆ ಬಂಧು ನೀನೆ ಶ್ರೀಕರ ಬಂದ ದುರಿತದಿಂದ ಕಾಯೊ ಸಿಂಧು ನೀನೆ ದೇವರೊ 3 ಉರಗನ ಬಾಯಲಿರುವ ಮಂಡೂಕ ಸ್ಮರಿಸಿ ನೋಣಕ್ಹವಣಿಸುವ ತೆರದಿ ಶರಧಿಸಂಸಾರ ಸ್ಥಿರವೆಂದರಿಯದೆ ಮರವಿನಿಂ ಬಿದ್ದೆ ದುರಿತದಿ 4 ಕಾಯಜೆಂಬುವ ಮಾಯಕೋರನು ಪಾಯಕೆ ಒಳಪಟ್ಟೆನು ತೋಯಜಾಕ್ಷೇರ ಮಾಯಮೋಹದಿ ಕಾಯದಂದಿಸಿ ಕೆಟ್ಟೆನು 5 ಕುಂಭಿನಿಯೊಳೆನಗಿಂಬುಗೊಟ್ಟು ಬಲು ನಂಬಿದವರಾಸ್ತ್ಯಳಿದೆನೊ ಜಂಬಬಡಿಯುತ ಶುಂಭಗುಣಗಳಿ ಗಿಂಬುಗೊಟ್ಟು ದಿನಗಳೆದೆನೊ 6 ಪ್ರಾಣತಗ್ಗಿಸಿ ದೀನತನದಲಿ ದೈನ್ಯಬಡುವರಿಗ್ಹಾನಿಮಾಡಿದೆ ದಾನಕೊಡುವರ ದಾನಕಡ್ಡಾಗಿ ನಾನಾ ದುರ್ಬೋಧವುಸುರಿದೆ 7 ಜಾನಕೀಶನ ಧ್ಯಾನಯುತರಿಗೆ ಹೀನ ಹಾಸ್ಯವ ಗೈದೆನೊ ಏನು ತಿಳಿಯದೆ ಗಾಣಕೆ ಬಿದ್ದ ಮೀನಿನಂತೆ ನಾನಾದೆನೊ 8 ಶ್ವಾನನಂದದಿ ಖೂನವಿಲ್ಲದೆ ನಾನಾಪಾಪವ ಗೈದೆನೊ ಮಾನವಜನುಮೇನು ಶ್ರೇಷ್ಠಿದ ಜ್ಞಾನದೋಳ್ಹೊತ್ತುಗಳೆದೆನೊ9 ಮಂಗನಂದದಿ ಹಂಗದೊರೆದು ಅಂಗಲಾಚಿ ಪರರನ್ನು ಬೇಡಿದೆ ಅಂಗಜಪಿತ ಮಂಗಳಾಂಗ ಶ್ರೀ ರಂಗ ನಿಮ್ಮ ಮಹಿಮ್ಯರಿಯದೆ 10 ದಾಸ ಮಾಡಿದ ದೋಷ ಮನ್ನಿಸಿ ಪೋಷಿಸು ಶ್ರೀರಾಮನೆ ಶ್ರೀಶ ಶ್ರೀನಿವಾಸ ಎನ್ನಂತ ರಾಸೆ ಪೂರೈಸು ಬೇಗನೆ 11
--------------
ರಾಮದಾಸರು
ದಾರಿ ಏನಿದಕೆ ಮುರಾರಿ - ನೀ ಕೈಯ ಹಿಡಿಯದಿದ್ದರೆ-|ದಾರಿ ಏನಿದಕೆ ಮುರಾರಿ? ಪಕಷ್ಟ-ಕರ್ಮಂಗಳ ಎಷ್ಟಾದರು ಮಾಳ್ಪೆ |ಎಷ್ಟಾದರೂ ನುಡಿದೆ ಗುರುಹಿರಿಯರ ||ದುಷ್ಟರ ಸಂಗವ ಬಹಳ ಮಾಡಿದರಿಂದ |ಶಿಷ್ಟರ ಸೇವೆಯೆಂದರಾಗದೆನಗೆ 1ಪರರ ದೂಷಣೆ ಪರಪಾಪಂಗಳನೆಲ್ಲ |ಪರಿಪರಿಯಲ್ಲಿ ಆಡಿಕೊಂಬೆ ನಾನು ||ಹರಿನಾಮಾಮೃತವ ಹೇಳದೆ ಕೇಳದೆ |ಹರಟೆಯಲ್ಲಿ ಹೊತ್ತುಗಳೆದೆ ನಾ ಹರಿಯೆ 2ಪಾತಕಕರ್ಮಗಳ ಮಾಡಿದಜಾಮಿಳಗೆ |ಪ್ರೀತಿಯಿಂದಲಿ ಮುಕ್ತಿ ಕೊಡಲಿಲ್ಲವೆ? ||ನೂತನವೇಕಿನ್ನುಸೂರ್ಯಮಂಡಲ |ರೀತಿಯಾದನು ಸಿರಿಪುರಂದರವಿಠಲ 3
--------------
ಪುರಂದರದಾಸರು