ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟುನಿರ್ಮಳದಿ ವೈಷ್ಣವರ ಮನಮುಟ್ಟಿ ಭಜಿಸಿ ಪ ಪಾಪಕೆ ಹೇಸದ ಶಬರ ಬಟ್ಟೆಯನು ಕಾದಿರಲುಆ ಪಥದಿ ಸಲೆ ವೈಷ್ಣವನು ಬಂದುಪಾಪವನು ತಪ್ಪಿಸಿ ರಾಮನಾಮವ ಕೊಡಲುಕಾಪಥಕ ವಾಲ್ಮೀಕಿ ಮುನಿಯಾಗಲಿಲ್ಲವೆ ? 1 ಪಂಚಮಹಾಪಾತಕವ ಮಾಡಿದ ಅಜಾಮಿಳನವಂಚಿಸಿ ಯಮದೂತರೆಳೆದೊಯ್ಯುತಿರಲುಕಿಂಚಿತ್ತು ಹರಿನಾಮವನಾಕಸ್ಮಿಕದಿ ನೆನೆಯೆಅಂಚಿಗೆಳೆದೊಯ್ದವರು ವಿಷ್ಣುದೂತರಲ್ಲವೆ ?2 ಬಾಲಕ ತನ್ನ ತಾಯ್ತಂದೆಯೊಳ್ ಮುನಿದು ಹಲವುಕಾಲ ವನದೊಳು ತಪವ ಮಾಡಲುನೀಲಮೇಘಶ್ಯಾಮ ಮೆಚ್ಚಿ ಬಾಲಕನಿಗೆಮೇಲಾದ ಪದವಿಯನು ಕೊಡಲಿಲ್ಲವೆ ? 3 ದಶಕಂಠನನುಜನು ಜಾನಕಿಯ ಬಿಡ ಹೇಳೆಅಸುರ ಕೋಪವ ತಾಳಿ ಹೊರಗಟ್ಟಿದಾಗಪೆಸರಗೊಳುತ ಬಂದು ಮೊರೆಹೊಕ್ಕ ವಿಭೀಷಣಗೆಶಶಿರವಿ ಪರ್ಯಂತ ಪಟ್ಟಗಟ್ಟಲಿಲ್ಲವೆ ? 4 ಕಲಿಗೆ ಬೆದರುವರಲ್ಲ ಕಾಲನ ಬಾಧೆಗಳಿಲ್ಲಛಲದಿ ನರಳಿ ಪುಟ್ಟುವ ಗಸಣೆಯಿಲ್ಲಒಲಿದು ಕಾಗಿನೆಲೆಯಾದಿಕೇಶವರಾಯನಸಲೆ ನಂಬಿದವರಿಗೆ ಮುಕುತಿಯಿತ್ತುದಿಲ್ಲವೆ ? 5
--------------
ಕನಕದಾಸ