ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ವಾದಿರಾಜ ಯತಿಯಾ ನೆನಸುವದು ನಿರುತ ಕರುಣಿಪ ಮತಿಯಾ ಪ ಆರ್ತನಾ ಸರಿದಾರು ನವನ ವರ್ತಮಾನವನೆ ಕೇಳಿ ಕರ್ತೃತ್ವ ಪರಿಹರಿಸಿ ಸಂಸೃತಿಯ ಗರ್ತದಿಂದೆತ್ತಿ ನೋಳ್ಪ 1 ದುರಿತ ರಾಶಿಗಳ ಶೀಳಿ ಹೊರದೆಗೆದು ಮರುತ ಶಾಸ್ತ್ರವನೆ ಪೇಳಿ ಪರಮಾರ್ಥ ಮಾರ್ಗವಾ ತೋರಿ ಸುಖಬಡಿಸಿ ಧರಿಯೊಳಗೆ ಮೆರೆದೆ ಧೀರ 2 ವಂದಿಸಿ ಸೌಂದರ್ಯಪುರಿಯ ವಾಸ ವರಪ್ರದ ನಂದ ಸತ್ಕೀರ್ತಿ ಭೂಪ ವಂದಿಸಿದವರಿಗೆ ಲೇಸಾಗಿ ಕೊಡುವ ಮು ಕುಂದನಂಘ್ರಿಯ ದಾಸ 3 ತೀರ್ಥಯಾತ್ರೆಯನೆ ಮಾಡಿ ಹರಿ ಭೇದಾರ್ಥದಿಂದಲೆ ಕೊಂಡಾಡಿ ಅರ್ಥಾಸೆಗಳ ಈಡಾಡಿ ಹಯಮೊಗನ ಅರ್ಥಿಯಿಂದಲಿ ಪೂಜಿಪ4 ತ್ರಿಜಗದೊಳಗಿನವರಿಗೆ ಎಣೆಗಾಣೆ ಕುಜನ ಮತ ಸೋಲಿಸುವಲ್ಲಿ ವಿಜಯವಿಠ್ಠಲನೆ ದೈವವೆಂದು ಧ್ವಜವೆತ್ತಿ ತಿರುಗಿದ ಮುನಿಪ 5
--------------
ವಿಜಯದಾಸ